Just In
Don't Miss!
- Finance
ಬಜೆಟ್ 2021: ವಿವಿಧ ಮಲ್ಟಿಪ್ಲೆಕ್ಸ್ ಪ್ರತಿನಿಧಿಗಳಿಂದ ನಿರ್ಮಲಾ ಸೀತಾರಾಮನ್ ಗೆ ಮನವಿ
- News
ಸಚಿವ ಧನಂಜಯ್ ಮುಂಡೆ ವಿರುದ್ಧ ಅತ್ಯಾಚಾರ ದೂರು ಹಿಂಪಡೆದ ಮಹಿಳೆ
- Automobiles
ರಾಂಗ್ ಸೈಡ್'ನಲ್ಲಿ ವಾಹನ ಚಾಲನೆ ಮಾಡುವವರ ಡ್ರೈವಿಂಗ್ ಲೈಸೆನ್ಸ್ ರದ್ದುಪಡಿಸಲು ಮುಂದಾದ ಪೊಲೀಸ್ ಇಲಾಖೆ
- Lifestyle
ನಿಮ್ಮ ಚರ್ಮದ ಆರೈಕೆಗೆ ಬೆಲ್ಲ ಆಗಲಿದೆ ಒಂದೊಳ್ಳೆ ಪಾಟ್ನರ್..
- Sports
ಬಿಎಂಡಬ್ಲ್ಯೂ ನೂತನ ಕಾರು ಖರೀದಿಸಿದ ವೇಗಿ ಮೊಹಮ್ಮದ್ ಸಿರಾಜ್
- Education
KIOCL Recruitment 2021: 11 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಧರ್ಮಸ್ಥಳದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾದ ಶಿವರಾಜ್ ಕುಮಾರ್
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮದುವೆ ಸಂಭ್ರಮ, ಸಡಗರ. 102 ನವದಂಪತಿಗಳು ಹೊಸಬಾಳಿಗೆ ಕಾಲಿಟ್ಟ ಮಧುರ ಕ್ಷಣವದು. ನಿನ್ನ ಬುಧವಾರ(ಮೇ-1) ಧರ್ಮಸ್ಥಳದಲ್ಲಿ 48ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ಸಂಜೆ 6.48ಕ್ಕೆ ಗೋಧೂಳಿ ಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ನವ ಜೋಡಿಗಳು ವಿವಾಹ ಜೀವನಕ್ಕೆ ಕಾಲಿಟ್ಟರು.
ಈ ಅಪರೂಪದ ಕ್ಷಣಕ್ಕೆ ಅತಿಥಿಯಾಗಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ದಂಪತಿ ಭಾಗಿಯಾಗಿದ್ದರು. ನವ ಜೋಡಿಗಳಿಗೆ ಶುಭಹಾರೈಸಿ ಸುಂದರ ಕ್ಷಣವನ್ನು ಕಣ್ಣುತ್ತುಂಬಿ ಕೊಂಡರು. ಪ್ರತಿವರ್ಷ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನೆರವೇರುತ್ತೆ.
ಶಿವಣ್ಣ ನನ್ನ ತಂದೆ, ಪುನೀತ್ ನನ್ನ ಪಿಲ್ಲರ್: ಸಹೋದರರ ಬಗ್ಗೆ ಭಾವುಕರಾದ ರಾಘಣ್ಣ
1982ರಲ್ಲಿ ಪ್ರಾರಂಭವಾದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಇಂದಿಗೂ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿದೆ. 25ನೇ ವರ್ಷದ ಸಾಮೂಹಿಕ ಮದುವೆ ಕಾರ್ಯಕ್ರಮದಲ್ಲಿ ವರನಟ ಡಾ.ರಾಜ್ ಕುಮಾರ್ ಅತಿಥಿಯಾಗಿ ಭಾಗಿಯಾಗಿದ್ದರು.
48ನೇ ವರ್ಷದ ವಿವಾಹ ಕಾರ್ಯಕ್ರಮದಲ್ಲಿ ರಾಜ್ ಪುತ್ರ ಶಿವರಾಜ್ ಕುಮಾರ್ ಭಾಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಶಿವಣ್ಣ. "ಮಂಜುನಾಥ ಸ್ವಾಮಿಯ ಸಾನ್ನಿಧ್ಯ, ಪೂಜ್ಯ ಹೆಗ್ಗಡೆ ಯವರ ಸಮ್ಮುಖದಲ್ಲಿ ವಿವಾಹವಾಗುತ್ತಿರುವುದು ನಿಮ್ಮೆಲ್ಲರ ಭಾಗ್ಯ. ಡಾ.ಹೆಗ್ಗಡೆಯವರು ಧಾರ್ಮಿಕ ಮತ್ತು ಸಾಮಾಜಿಕ ಕೆಲಸಗಳನ್ನು ಮಾಡಿದ್ದಾರೆ. 25ನೇ ಸಾಮೂಹಿಕ ವಿವಾಹದಲ್ಲಿ ಅಪ್ಪಾಜಿ ಭಾಗವಹಿಸಿದ್ದರು. ಈ ವಿವಾಹ ಸಮಾರಂಭದಲ್ಲಿ ಭಾಗಿಯಾಗಿರುವ ಪುಣ್ಯ ನನ್ನದು. ರಾಜ್ ಕುಮಾರ್ ಮಗನಾಗಿ ಹುಟ್ಟಿದ್ದು ನನ್ನ ಪುಣ್ಯ. ಪವಿತ್ರ ಕ್ಷೇತ್ರದಲ್ಲಿ ವಿವಾಹವಾದ ದಂಪತಿಯನ್ನು ಮಂಜುನಾಥಸ್ವಾಮಿ ಕಾಪಾಡಲಿ ಎಂದು ಶುಭ ಹಾರೈಸಿದರು"