Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಪೂರಕವಾಗುವ ತ್ರಿಡಿ ಚಿತ್ರ ಮಾಡಿದ ಮಾಸ್ಟರ್ ಕಿಶನ್
ಬಾಲ ನಟನಾಗಿ ಬೆಳ್ಳಿತೆರೆ ಮೇಲೆ ಮಿಂಚುತ್ತಿದ್ದ ಮಾಸ್ಟರ್ ಕಿಶನ್, ತಮ್ಮ ಒಂಬತ್ತನೇ ವಯಸ್ಸಿಗೆ ಬೀದಿ ಬದಿ ಮಕ್ಕಳಿಗೆ ವಿದ್ಯಾಭ್ಯಾಸ ಒದಗಿಸುವ 'ಕೇರ್ ಆಫ್ ಫುಟ್ ಪಾತ್' ಸಿನಿಮಾ ನಿರ್ದೇಶಿಸಿ ದಾಖಲೆ ಬರೆದಿದ್ದರು.
ಇದೀಗ ಇದೇ ಮಾಸ್ಟರ್ ಕಿಶನ್ ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ತ್ರಿಡಿ ಚಿತ್ರವೊಂದನ್ನ ತಯಾರು ಮಾಡಿದ್ದಾರೆ.
ಮಾನವ ದೇಹದ ಅವಯವಗಳನ್ನು ಮುಟ್ಟಿ ನೋಡಿದ ಕಲ್ಪನೆ ಮೂಡಿಸುವ ಚಿತ್ರಗಳನ್ನು ಮಾಸ್ಟರ್ ಕಿಶನ್ ಅಭಿವೃದ್ಧಿ ಪಡಿಸಿದ್ದಾರೆ. ತ್ರಿಡಿ ತಂತ್ರಜ್ಞಾನದ ಈ ಚಿತ್ರವನ್ನು ವಿನ್ ಫೋರಮೆಕ್ಸ್ ಸಂಸ್ಥೆಯ ಸಹಯೋಗದಲ್ಲಿ ಸಿದ್ಧಪಡಿಸಲಾಗಿದೆ.
''3ಡಿ ತಂತ್ರಜ್ಞಾನವನ್ನು ಮೆಡಿಕಲ್ ಕಾಲೇಜುಗಳಲ್ಲಿ ಬಳಸಿ ವಿದ್ಯಾರ್ಥಿಗಳಿಗೆ ಅತ್ಯಂತ ಸೂಕ್ಷ್ಮ ವಿಷಯಗಳನ್ನು ಸಶಕ್ತವಾಗಿ ಅರ್ಥ ಮಾಡಿಕೊಳ್ಳಲು ಸಾಧ್ಯವಾಗುವ ಹೊಸ ತಂತ್ರಜ್ಞಾನವನ್ನು ಇದೇ ಮೊದಲ ಬಾರಿಗೆ ಆವಿಷ್ಕರಿಸಲಾಗಿದೆ. ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವ 3ಡಿ ತಂತ್ರಜ್ಞಾನವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೂ ತಮ್ಮ ಸೇವೆಗಳಲ್ಲಿ ಬಳಸಿಕೊಳ್ಳಬೇಕು. ದೇಶಾದ್ಯಂತ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಶಿಕ್ಷಣ ಒದಗಿಸಲು ಇದು ಸಹಕಾರಿ'' ಎನ್ನುತ್ತಾರೆ ಮಾಸ್ಟರ್ ಕಿಶನ್.
ಈಗಾಗಲೇ ಸಚಿವ ಯು.ಟಿ.ಖಾದರ್, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಬಿಡುಗಡೆಗೊಳಿಸಿರುವ ಈ ಚಿತ್ರವನ್ನ ದ.ಕ ಮತ್ತು ಉಡುಪಿ ಜಿಲ್ಲೆಗಳ ವೈದ್ಯಕೀಯ ಉಪನ್ಯಾಸಕರಿಗೆ ತೋರಿಸಲಾಗುತ್ತಿದೆ.