'ಮಾಸ್ತಿಗುಡಿ' ದುರಂತ: ನಿರ್ಮಾಪಕ ಸುಂದರ್ ಪಿ ಗೌಡಗೆ ಹೈಕೋರ್ಟ್ ಜಾಮೀನು
'ಮಾಸ್ತಿಗುಡಿ' ಚಿತ್ರೀಕರಣದಲ್ಲಿ ಇಬ್ಬರು ಖಳನಟರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಸುಂದರ್ ಪಿ ಗೌಡ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಕಳೆದ ವಾರವಷ್ಟೇ ಪ್ರಕರಣದ ಇತರೆ ಆರೋಪಿಗಳಾದ ಸಾಹಸ ನಿರ್ದೇಶಕ ರವಿವರ್ಮ ಹಾಗೂ ಚಿತ್ರದ ನಿರ್ದೇಶಕ ನಾಗಶೇಖರ್ ಅವರಿಗೆ ಜಾಮೀನು ನೀಡಲಾಗಿತ್ತು. ಈಗ ಪ್ರಕರಣದ ಒಂದನೇ ಆರೋಪಿಯಾಗಿರುವ ಸುಂದರ್ ಪಿ ಗೌಡ ಅವರಿಗೂ ಹೈಕೋರ್ಟ್ ಜಾಮೀನು ನೀಡಿದೆ.['ಮಾಸ್ತಿಗುಡಿ' ದುರಂತ: ನಾಗಶೇಖರ್, ರವಿವರ್ಮಗೆ ಷರತ್ತುಬದ್ಧ ಜಾಮೀನು]

ನವೆಂಬರ್ 7 ರಂದು ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ 'ಮಾಸ್ತಿಗುಡಿ' ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣದ ವೇಳೆ ಖಳನಟರಾದ ಅನಿಲ್ ಹಾಗೂ ಉದಯ್ ಸಾವಿಗೀಡಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಸುಂದರ್ ಪಿ ಗೌಡ ಅವರನ್ನ ನವೆಂಬರ್ 8 ರಂದು ವಶಕ್ಕೆ ಪಡೆದು, ನ್ಯಾಯಂಗ ಬಂಧನದಲ್ಲಿ ಇಡಲಾಗಿತ್ತು.[ಎ-1 ಆರೋಪಿ 'ಮಾಸ್ತಿ ಗುಡಿ' ನಿರ್ಮಾಪಕ ಸುಂದರ್ ಗೌಡ ಅರೆಸ್ಟ್.! ]

ಈ ಹಿಂದೆ ಸುಂದರ್ ಪಿ ಗೌಡ ಅವರ ಜಾಮೀನು ಅರ್ಜಿಯನ್ನ ವಿಚಾರಣೆ ನಡೆಸಿದ್ದ ರಾಮನಗರ ಜಿಲ್ಲಾ ನ್ಯಾಯಾಲಯ, ಜಾಮೀನು ಅರ್ಜಿಯನ್ನ ತಿರಸ್ಕರಿಸಿತ್ತು. ತದನಂತರ ಹೈಕೋರ್ಟ್ ಮೊರೆ ಹೋಗಿದ್ದ ನಿರ್ಮಾಪಕರಿಗೆ ಈಗ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.


Click it and Unblock the Notifications











