ಮೆಗಾಸ್ಟಾರ್ ಚಿರಂಜೀವಿ ಸಹೋದರನಿಗೆ ಕೊರೊನಾ ಪಾಸಿಟಿವ್
ತೆಲುಗು ಮೆಗಾಸ್ಟಾರ್ ಚಿರಂಜೀವಿ ಅವರ ಸಹೋದರ ನಾಗಬಾಬುಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ಈ ಕುರಿತು ಸ್ವತಃ ನಾಗಬಾಬು ಅವರೇ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.
ಸದ್ಯ ಕೊರೊನಾ ವೈರಸ್‌ಗೆ ಚಿಕಿತ್ಸೆ ಪಡೆಯುತ್ತಿರುವ ನಾಗಬಾಬು ಗುಣಮುಖರಾದ ಬಳಿಕ ಪ್ಲಾಸ್ಮಾ ದಾನ ಮಾಡುವುದಾಗಿ ಸಹ ಹೇಳಿಕೊಂಡಿದ್ದಾರೆ.
ನಾಗಬಾಬು ಅವರಿಗೆ ಕೊರೊನಾ ವೈರಸ್ ತಗುಲಿದೆ ಎಂದು ಸುದ್ದಿ ತಿಳಿಯುತ್ತಿದ್ದಂತೆ ಅಭಿಮಾನಿಗಳು ನಟ ಹಾಗೂ ನಿರ್ಮಾಪಕನಿಗೆ ಆದಷ್ಟೂ ಬೇಗ ಗುಣಮುಖರಾಗಿ ಎಂದು ಹಾರೈಸುತ್ತಿದ್ದಾರೆ.

ಚಿರಂಜೀವಿ ಅವರ ಅಳಿಯ ಕಲ್ಯಾಣ್ ದೇವ್ ಸಹ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ''ಬೇಗ ಗುಣಮುಖರಾಗಿ ನಾಗಬಾಬಯ್'' ಎಂದು ಪ್ರಾರ್ಥಿಸಿದ್ದಾರೆ.
ನಾಗಬಾಬು ಅವರು ಕೊನೆಯದಾಗಿ ಆಕ್ಷನ್ ಥ್ರಿಲ್ಲರ್ 'ಎಡಿನಾ ಜರಗೊಚು' ಚಿತ್ರದಲ್ಲಿ ಕಾಣಿಸಿಕೊಂಡರು. ಅದನ್ನು ಹೊರತುಪಡಿಸಿದರೆ, ಟಿವಿ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದಾರೆ.
Recommended Video
TRP ಗೋಸ್ಕರ ನನ್ನ ಕುಟುಂಬದ ನೆಮ್ಮದಿ ಹಾಳು ಮಾಡಿದ್ದು ಇಷ್ಟ ಆಗಿಲ್ಲ| Raksh | Filmibeat Kannada
More from Filmibeat
English summary
MegaStar Chiranjeevi's brother Naga Babu tests positive for coronavirus.


Click it and Unblock the Notifications











