ಬರ್ತ್‌ಡೇ ಸಂಭ್ರಮದಲ್ಲಿ ಮೇಘಾ ಶೆಟ್ಟಿ; ಮೂರು ಸಿನಿಮಾಗಳ ಬಗ್ಗೆ ಏನಿದು ಸುದ್ದಿ?

ಕಿರುತೆರೆಯಲ್ಲಿ ಮಿಂಚಿದ್ದ ನಟಿ ಮೇಘಾ ಶೆಟ್ಟಿ ಈಗ ನಾಯಕಿಯಾಗಿ ಬಡ್ತಿ ಪಡೆದಿದ್ದಾಗಿದೆ. ಒಂದರ ಹಿಂದೊಂದು ಸಿನಿಮಾಗಳಲ್ಲಿ ಮೇಘಾ ಶೆಟ್ಟಿ ನಟಿಸುತ್ತಿದ್ದಾರೆ. 'ಜೊತೆ ಜೊತೆಯಲಿ' ಧಾರಾವಾಹಿಯಿಂದ ಹೊರಬರುತ್ತಿದ್ದಂತೆ ಸಿನಿಮಾಗಳಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಸದ್ಯ ಕೆಲವು ದಿನಗಳಿಂದ ಮೇಘಾ ಶೆಟ್ಟಿ ಸೈಲೆಂಟ್ ಆಗಿದ್ದರು. ಅವರ ಸಿನಿಮಾಗಳ ಬಗ್ಗೆ ಸುದ್ದಿನೇ ಇರಲಿಲ್ಲ.

ಮೇಘಾ ಶೆಟ್ಟಿ ಸಿನಿಮಾಗಳ ಬಗ್ಗೆ ಸುದ್ದಿ ಇರದೇ ಹೋದರೂ, ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿದ್ದರು. ತಮ್ಮ ಅಭಿಮಾನಿಗಳಿಗಾಗಿ ಹೊಸ ಹೊಸ ವಿಷಯಗಳನ್ನು ಹಂಚಿಕೊಳ್ಳುತ್ತಲೇ ಇದ್ದರು. ಹೊಸ ಹೊಸ ಫೋಟೊಶೂಟ್‌ಗಳನ್ನು ಶೇರ್ ಮಾಡುತ್ತಿದ್ದರು. ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಈ ನಟಿಗೆ ಇಂದು (ಆಗಸ್ಟ್ 4) ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ನಟಿ ಮೇಘಾ ಶೆಟ್ಟಿ ನಟಿಸುತ್ತಿರುವ ಎರಡು ಸಿನಿಮಾಗಳ ತಂಡ ಅವರ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ.

Megha Shetty Birthday After Operation London Cafe Gramayana gave special gift

ಮೇಘಾ ಶೆಟ್ಟಿ ಸದ್ಯ ಎರಡು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. 'ಆಪ್ಟರ್ ಆಪರೇಷನ್ ಲಂಡನ್ ಕೆಫೆ' ಹಾಗೂ 'ಗ್ರಾಮಾಯಣ'. ಈ ಎರಡು ಸಿನಿಮಾಗಳಲ್ಲಿ ಮೇಘಾ ಶೆಟ್ಟಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಎರಡು ಸಿನಿಮಾಗಳ ತಂಡ ಮೇಘಾ ಶೆಟ್ಟಿಯ ಅಭಿಮಾನಿಗಳಿಗೆ ಸರ್ಪ್ರೈಸ್ ಕೊಟ್ಟಿವೆ. ಆ ಸರ್ಪ್ರೈಸ್‌ಗಳು ಏನು ಅಂತ ನೋಡುವುದಾದರೆ..

ಮೇಘಾ ಶೆಟ್ಟಿ ನಟಿಸುತ್ತಿರುವ 'ಆಫ್ಟರ್ ಆಪರೇಷನ್ ಲಂಡನ್ ಕೆಫೆ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ತಮ್ಮ ನಟಿಯ ಹುಟ್ಟುಹಬ್ಬದ ಸಂಭ್ರಮದಲ್ಲಿ ಹೊಸ ಪೋಸ್ಟರ್ ಅನ್ನು ರಿಲೀಸ್ ಮಾಡಿದೆ. ಈ ಬೆನ್ನಲ್ಲೇ ಮತ್ತೊಂದು ಸರ್ಪ್ರೈಸ್ ಕೂಡ ನೀಡಿದೆ. ಈ ಮೂಲಕ 'ಆಫ್ಟರ್ ಆಪರೇಷನ್ ಲಂಡನ್ ಕೆಫೆ' ಸಿನಿಮಾ ಟೀಸರ್ ರಿಲೀಸ್‌ ಮಾಡುವುದಾಗಿ ಚಿತ್ರತಂಡ ಅನೌನ್ಸ್ ಮಾಡಿದೆ.

ಪಕ್ಕಾ ಹಳ್ಳಿ ಹುಡುಗಿಯಾಗಿ ಲಂಗದಾವಣಿ ಗೆಟಪ್‌ನಲ್ಲಿ ಇರುವ ಮೇಘಾ ಶೆಟ್ಟಿಯ ಪೋಸ್ಟರ್ ಅನ್ನು 'ಆಫ್ಟರ್ ಆಪರೇಷನ್ ಲಂಡನ್ ಕೆಫೆ' ತಂಡ ರಿಲೀಸ್ ಮಾಡಿದೆ. ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಜೋಡಿಯಾಗಿ ನಟಿಸುತ್ತಿರುವ ಈ ಸಿನಿಮಾ ಕನ್ನಡ, ಮರಾಠಿ ಸೇರಿದಂತೆ ಹಲವು ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ಸದ್ಯ ಈ ಸಿನಿಮಾ ಪೋಸ್ಟರ್ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ಸದ್ದು ಮಾಡುತ್ತಿದೆ.

Megha Shetty Birthday After Operation London Cafe Gramayana gave special gift

ಸಡಗರ ರಾಘವೇಂದ್ರ ನಿರ್ದೇಶಿಸುತ್ತಿರುವ 'ಆಫ್ಟರ್ ಆಪರೇಷನ್ ಲಂಡನ್ ಕೆಫೆ' ಸಿನಿಮಾ ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಇದರೊಂದಿಗೆ ವಿನಯ್‌ ರಾಜ್‌ಕುಮಾರ್ ಅಭಿನಯದ 'ಗ್ರಾಮಾಯಣ' ಸಿನಿಮಾದಲ್ಲಿಯೂ ಮೇಘಾ ಶೆಟ್ಟಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಸಿನಿಮಾ ತಂಡ ಕೂಡ ಮೇಘಾ ಶೆಟ್ಟಿಯ ಪೋಸ್ಟರ್‌ ಅನ್ನು ರಿಲೀಸ್ ಮಾಡಿದೆ. ಇದರಲ್ಲೂ ನಟಿ ಮೇಘಾ ಶೆಟ್ಟಿ ಲಂಗ ದಾವಣಿ ಹಾಕಿಕೊಂಡು ಮಿಂಚುತ್ತಿದ್ದಾರೆ.

ಎಲ್ಲಕ್ಕಿಂತ ಹೆಚ್ಚಾಗಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ 'ಚೀತಾ' ಸಿನಿಮಾದ ಪೋಸ್ಟರ್ ಕೂಡ ರಿಲೀಸ್ ಆಗಿದೆ. ಈ ಸಿನಿಮಾದಲ್ಲೂ ಮೇಘಾ ಶೆಟ್ಟಿ ನಾಯಕಿಯಾಗಿ ನಟಿಸುತ್ತಿದ್ದಾರೆ. ನಟಿಯ ಹುಟ್ಟುಹಬ್ಬದ ಬೆನ್ನಲ್ಲೇ ಮೇಘಾ ಶೆಟ್ಟಿಯ ಮಾಸ್ ಲುಕ್ ರಿಲೀಸ್ ಆಗಿದೆ. ಕತ್ತಿಗೆ ಹಾರ ಹಾಕಿಕೊಂಡು, ಮುಖಕ್ಕೆ ಕುಂಕುಮ ಹಚ್ಚಿಕೊಂಡು ಕೈಯಲ್ಲಿ ಕುಡುಗೋಲು ಹಿಡಿದುಕೊಂಡು ಖಡಕ್ ಲುಕ್ ಕೊಟ್ಟಿದ್ದಾರೆ.

More from Filmibeat

English summary
Megha Shetty birthday: After Operation London Cafe and Gramayana new poster out
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X