twitter
    For Quick Alerts
    ALLOW NOTIFICATIONS  
    For Daily Alerts

    ಕನ್ನಡ ಧ್ವಜಕ್ಕೆ ಬೆಂಕಿ: ಜಗ್ಗೇಶ್ ಆಕ್ರೋಶ

    |

    ಮಹಾರಾಷ್ಟ್ರದ ಪುಂಡರು ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟು ಉದ್ಧಟತನ ಮೆರೆದಿದ್ದು, ಇದರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನಟ, ಬಿಜೆಪಿ ಮುಖಂಡ ಜಗ್ಗೇಶ್ ಸಹ ಸಾಮಾಜಿಕ ಜಾಲತಾಣದ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದು, ಘಟನೆ ವಿರುದ್ಧ ಕ್ರಮ ಕೈಗೊಳ್ಳಿರೆಂದು ಮುಖ್ಯ ಮಂತ್ರಿಗಳನ್ನು ಒತ್ತಾಯಿಸಿದ್ದಾರೆ.

    ಎಂಎಎಸ್‌ನ ಕಿಡಿಗೇಡಿಗಳು ಕನ್ನಡ ಧ್ವಜಕ್ಕೆ ಬೆಂಕಿ ಇಡುತ್ತಿರುವ ಚಿತ್ರವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ನಟ ಜಗ್ಗೇಶ್, ''ಕನ್ನಡ ಬಾವುಟ ಅಪಮಾನಿಸಿದವರ ಮೇಲೆ ಕಾನೂನು ಕ್ರಮಕ್ಕೆ ಒತ್ತಾಯ. ಹಾಗೂ ಕನ್ನಡಪರ ಈ ವಿಷಯಕ್ಕೆ ಹೋರಾಟ ಮಾಡಿದ ಕನ್ನಡ ಸೈನಿಕರ ದಯಮಾಡಿ ಬಿಡುಗಡೆಗೊಳಿಸಿ'' ಎಂದು ಮಾನ್ಯ ಮುಖ್ಯ ಮಂತ್ರಿಗಳು ಬಸವರಾಜ ಬೊಮ್ಮಾಯಿ, ಗೃಹಮಂತ್ರಿಗಳು ಆರಗ ಜ್ಞಾನೇಂದ್ರ ಅವರಿಗೆ ಟ್ಯಾಗ್ ಮಾಡಿ ಮನವಿ ಮಾಡಿದ್ದಾರೆ. ಮತ್ತು ''ಕರ್ನಾಟಕದಲ್ಲಿ ಕನ್ನಡ ಭಾಷೆ ಸಾರ್ವಭೌಮ'' ಎಂದು ಜಗ್ಗೇಶ್ ಹೇಳಿದ್ದಾರೆ.

    ಘಟನೆ ಹಿನ್ನೆಲೆ ಏನು?

    ಬೆಳಗಾವಿ ಅಧಿವೇಶನ ಆರಂಭವಾಗುತ್ತಿದ್ದಂತೆ ಎಂಇಎಸ್ ತನ್ನ ಉದ್ಧಟತನ ಪ್ರದರ್ಶಿಸಲು ಆರಂಭಿಸಿ ಮಹಾಮೇಳಾವ್ ಆಯೋಜನೆ ಮಾಡಿತ್ತು. ಇದಕ್ಕೆ ಪೊಲೀಸರಿಂದ ಪರವಾನಗಿ ಪಡೆದಿರಲಿಲ್ಲ. ಬೆಳಗಾವಿಯ ವ್ಯಾಕ್ಸಿನ್ ಡಿಪೋ ಬಳಿ ರಸ್ತೆಯ ಮೇಲೆ ಪೆಂಡಾಲ್ ಹಾಕಿ ಉದ್ಧಟತನ ಪ್ರದರ್ಶನ ಮಾಡಿದರು.

    MES Members Burn Karnataka Flag, Jaggesh Demand Action

    ಪೊಲೀಸ್ ಅಧಿಕಾರಿಗಳು, ಪಾಲಿಕೆ ಸಿಬ್ಬಂದಿಗಳು ಪೆಂಡಾಲ್ ತೆರವು ಮಾಡಲು ಯತ್ನಿಸಿದಾಗ ಎಂಇಎಸ್ ಮುಖಂಡರು ಪೊಲೀಸರು ಹಾಗೂ ಪಾಲಿಕೆ ಸಿಬ್ಬಂದಿಯೊಡನೆ ವಾಗ್ವಾದ ನಡೆಸಿ ನಿಂದನೆ ಮಾಡಿ, ಕನ್ನಡ ವಿರೋಧಿ ಮಾತುಗಳನ್ನಾಡಿದರು.

    ಇದರಿಂದ ಕೆರಳಿದ ಕನ್ನಡಪರ ಹೋರಾಟಗಾರರು ಎಂಇಎಸ್ ಮುಖಂಡ ದೀಪಕ್ ದಳವಿಗೆ ಡಿಸೆಂಬರ್ 13 ರಂದು ಘೇರಾವ್ ಹಾಕಿ ಮುಖಕ್ಕೆ ಮಸಿ ಬಳಿದರು. ಇದನ್ನು ಖಂಡಿಸಿ ಎಂಇಎಸ್‌ನವರು ಪ್ರತಿಭಟನಾ ರ್‍ಯಾಲಿ ಮಾಡಿ ತಿಲಕ್‌ವಾಡಿ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ದೂರು ದಾಖಲಿಸಿದರು. ಪೊಲೀಸರು ಅಂತೆಯೇ ದೂರು ಸ್ವೀಕರಿಸಿ, ಕನ್ನಡಪರ ಹೋರಾಟಗಾರ ಸಂಪತ್‌ಕುಮಾರ್ ಹಾಗೂ ಇನ್ನಿಬ್ಬರನ್ನು ಬಂಧಿಸಿದ್ದಾರೆ.

    ದೀಪಕ್ ದಳವಿ ಮುಖಕ್ಕೆ ಮಸಿ ಬಳಿದಿದ್ದನ್ನು ಖಂಡಿಸಿ ಎಂಇಎಸ್‌ನ ಕೆಲವರು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಪ್ರತಿಭಟನೆ ಮಾಡಿದ್ದು, ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಕೆಲವು ಎಂಇಎಸ್ ಬೆಂಬಲಿಗರು, ''ಈಗ ಕನ್ನಡ ಧ್ವಜಕ್ಕೆ ಬೆಂಕಿ ಇಡಲಾಗಿದೆ, ಮುಂದೆ ಕನ್ನಡಿಗರ ಮನೆಗೆ ಬೆಂಕಿ ಇಡುತ್ತೇವೆ'' ಎಂದು ಬರೆದು ಕೊಂಡಿದ್ದಾರೆ.

    ಕೊಲೆ ಯತ್ನ ಪ್ರಕರಣ ದಾಖಲಿಸಿ ಕನ್ನಡಪರ ಹೋರಾಟಗಾರರನ್ನು ಬಂಧಿಸಿರುವ ಪೊಲೀಸರ ಕ್ರಮಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದ್ದು, ಕನ್ನಡಪರ ಹೋರಾಟಗಾರರನ್ನು ಬಿಡುಗಡೆ ಮಾಡಬೇಕೆಂದು ಜಗ್ಗೇಶ್ ಸೇರಿದಂತೆ ಇನ್ನೂ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯ ಮಾಡಿದ್ದಾರೆ. ಪ್ರಸ್ತುತ ಬೆಳಗಾವಿಯಲ್ಲಿ ಪರಿಸ್ಥಿತಿ ಗಂಭೀರವಾಗಿದ್ದು ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

    English summary
    MES members burnt Karnataka flag in Kollahpur. Actor Jaggesh demand action against people who burn Karnataka flag.
    Wednesday, December 15, 2021, 15:59
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X