K Sudhakar in Tanuja Movie: ಯಡಿಯೂರಪ್ಪ ಬಳಿಕ ಈಗ ಚಿತ್ರರಂಗಕ್ಕೆ ಎಂಟ್ರಿಯಾದ ಸಚಿವ ಸುಧಾಕರ್!
ಮಾಜಿ ಸಿಎಂ ಯಡಿಯೂರಪ್ಪ ಅವರು ಸಿನಿಮಾ ಒಂದರಲ್ಲಿ ನಟಿಸಿದ ಸುದ್ದಿ ತುಸು ಹಳೆಯದ್ದೆ. 'ತನುಜ' ಹೆಸರಿನ ಸಿನಿಮಾದಲ್ಲಿ ಅವರು ನಟಿಸಿದ್ದರು. ಇದೀಗ ಇದೇ ಸಿನಿಮಾಕ್ಕೆ ಮತ್ತೊಬ್ಬ ಸಚಿವರ ಎಂಟ್ರಿಯಾಗಿದೆ ಅದುವೇ ಆರೋಗ್ಯ ಸಚಿವ ಸುಧಾಕರ್.
ನೈಜ ಘಟನೆಯಾಧಾರಿತ 'ತನುಜಾ' ಸಿನಿಮಾದಲ್ಲಿ ಇದೀಗ ಸಚಿವ ಡಾ.ಕೆ ಸುಧಾಕರ್ ಅವರು ನಟಿಸಿದ್ದಾರೆ. ಆ ಮೂಲಕ ಸುಧಾಕರ್ ಸಹ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ.
ಈ ಹಿಂದೆ ತನುಜಾ ಎನ್ನುವ ಹೆಣ್ಣುಮಗಳು ಕೋವಿಡ್ ಸಂದರ್ಭದಲ್ಲಿ ಪರೀಕ್ಷೆ ಬರೆಯಲಾಗದೇ ಸಹಾಯ ಕೋರಿದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ಸಚಿವ ಡಾ.ಕೆ ಸುಧಾಕರ್, ಪತ್ರಕರ್ತ ವಿಶ್ವೇಶ್ವರ ಭಟ್ ಹಾಗೂ ಪ್ರದೀಪ್ ಈಶ್ವರ್ ಇನ್ನಿತರ ಸಹಾಯದಿಂದ ಪರೀಕ್ಷೆ ಬರೆದು ವೈದ್ಯಕೀಯ ಸೀಟು ಪಡೆದಿದ್ದು ಸುದ್ದಿಯಾಗಿತ್ತು. ಅದೇ ಘಟನೆಯಾಗಿಟ್ಟುಕೊಂಡು ಈ ಸಿನಿಮಾ ಮಾಡಲಾಗುತ್ತಿದೆ.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಕೂಡ ತಮ್ಮ ಪಾತ್ರಕ್ಕೆ ತಾವೇ ನಟಿಸಿ ಸೈ ಎನಿಸಿಕೊಂಡಿದ್ದರು. ಇದೀಗ ಸಚಿವರಾದ ಡಾ.ಕೆ ಸುಧಾಕರ್ ಅವರು ಕೂಡ ಇಂದು ಅವರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಜೊತೆಗೆ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡಿದ್ದಾರೆ.
ಸುಧಾಕರ್ ಅವರಿಗೆ ಸಿನಿಮಾಗಳ ಬಗ್ಗೆ ಆಸಕ್ತಿ ಇದೆ. ಕೆಲವು ದಿನಗಳ ಹಿಂದೆ ತಮ್ಮದೇ ಕ್ಷೇತ್ರ ಚಿಕ್ಕಬಳ್ಳಾಪುರದಲ್ಲಿ ಆಯೋಜಿಸಲಾಗಿದ್ದ 'RRR' ಸಿನಿಮಾದ ಪ್ರೀ ರಿಲೀಸ್ ಇವೆಂಟ್‌ನಲ್ಲಿ ಭಾಗವಹಿಸಿದ್ದ ಸಚಿವ ಸುಧಾಕರ್ ಅವರು ತೆಲುಗು ಸಿನಿಮಾ ಡೈಲಾಗ್‌ಗಳನ್ನು ಹೇಳಿ ಶಿಳ್ಳೆ, ಚಪ್ಪಾಳೆ ಗಿಟ್ಟಿಸಿಕೊಂಡಿದ್ದರು. ಇದೀಗ ತಾವೇ ಸಿನಿಮಾದಲ್ಲಿ ನಟಿಸಿ, ಡೈಲಾಗ್ ಸಹ ಹೇಳಿದ್ದಾರೆ.

ಈ ಸಿನಿಮಾಕ್ಕೆ ರಾಜ್ಯಪ್ರಶಸ್ತಿ ವಿಜೇತ ಹರೀಶ್ ಎಂ.ಡಿ ಹಳ್ಳಿಯವರ ನಿರ್ದೇಶನವಿದ್ದು, Beyond Visions Cinemas ಬಂಡವಾಳ ಹೂಡಿದೆ. ಈ ಚಿತ್ರವು ಶಿವಮೊಗ್ಗ ಸುತ್ತ ಮತ್ತ ಹಾಗೂ ಬೆಂಗಳೂರಿನ ಹಲವೆಡೆ ಚಿತ್ರೀಕರಣಗೊಂಡಿದೆ.
ತಾರಾಗಣದಲ್ಲಿ ರಾಜೇಶ್ ನಟರಂಗ, ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಕಾಸರಗೋಡು ಖ್ಯಾತಿಯ ಸಪ್ತಾ ಪಾವೂರ್, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಪತ್ರಕರ್ತ ವಿಶ್ವೇಶ್ವರ ಭಟ್, ಸಂಧ್ಯಾ ಅರಕೆರೆ, ಕೈಲಾಶ್, ಬಾಲ ನಟಿ ಬೇಬಿ ಶ್ರೀ ಅಭಿನಯಿಸಿದ್ದು
ಪ್ರದ್ಯೋತನ ಸಂಗೀತ ನಿರ್ದೇಶನ ರವೀಂದ್ರನಾಥ್ ಹಾಗೂ ಮೋಹನ್.ಎಲ್ ರಂಗಕಹಳೆ ಅವರ ಛಾಯಾಗ್ರಹಣ, ಉಮೇಶ್ ಆರ್.ಬಿ ಸಂಕಲನವಿದ್ದು ಆರ್ ಚಂದ್ರಶೇಖರ್ ಪ್ರಸಾದ್ ಹಾಗೂ ಜೆ.ಎಂ ಪ್ರಹ್ಲಾದ್ ಸಂಭಾಷಣೆ, ರಘುನಂದನ್ ಎಸ್.ಕೆ ಕಾರ್ಯಕಾರಿ ನಿರ್ಮಾಪಕರು, ಸತೀಶ್ ಬ್ರಮ್ಮಾವರ್ ನಿರ್ಮಾಣ ನಿರ್ವಹಣೆ ಇದೆ.
Recommended Video



Click it and Unblock the Notifications











