ಹೇಮಶ್ರೀ ಪ್ರಕರಣ ಆಂಧ್ರ ಪೊಲೀಸರಿಗೆ ಹಸ್ತಾಂತರಿಸಲ್ಲ

ಹೇಮಶ್ರೀ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಹೇಮಶ್ರೀ ಅವರು ಮೃತಪಟ್ಟಿರುವುದು ಆಂಧ್ರಪದೇಶದ ಅನಂತಪುರಂ ಜಿಲ್ಲೆಯಲ್ಲಿ. ಹಾಗಾಗಿ ಈ ಪ್ರಕರಣವನ್ನು ಆಂಧ್ರ ಪೊಲೀಸರಿಗೆ ಹಸ್ತಾಂತರಿಸಲಾಗುತ್ತದೆ ಎಂಬ ಅನುಮಾನ ವ್ಯಕ್ತವಾಗಿತ್ತು.
ಈ ಹಿನ್ನೆಲೆಯಲ್ಲಿ ಅವರು ಸ್ಪಷ್ಟೀಕರಣ ನೀಡಿದರು. ಈಗಷ್ಟೇ ಮರಣೋತ್ತರ ಪರೀಕ್ಷೆಯ ವರದಿ ಬಂದಿದೆ. ಆ ವರದಿಯನ್ನು ನಾವಿನ್ನೂ ನೋಡಿಲ್ಲ. ಈ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಅಧಿಕಾರಿಗಳಿಂದ ಸಂಪೂರ್ಣ ವರದಿ ಬಂದ ಬಳಿಕವಷ್ಟೇ ನಾವು ಏನನ್ನಾದರೂ ಹೇಳಲು ಸಾಧ್ಯ. ಈಗಲೇ ಏನೂ ಹೇಳಲು ಆಗುವುದಿಲ್ಲ ಎಂದರು.
ಈ ಪ್ರಕರಣದ ಸಮಗ್ರ ತನಿಖೆ ನಡೆಸಿ ಸತ್ಯಾಸತ್ಯತೆಗಳನ್ನು ಬಯಲಿಗೆಳೆಯುತ್ತೇವೆ. ಆರೋಪಿಯನ್ನೂ ವಿಚಾರಣೆ ನಡೆಸುತ್ತಿದ್ದೇವೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಸುರೇಂದ್ರ ಬಾಬು ಅವರನ್ನು ಮಾತ್ರ ಬಂಧಿಸಲಾಗಿದೆ. ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ತನಿಖೆ ಪ್ರಗತಿಯಲ್ಲಿದೆ ಎಂದರು.
ಹೇಮಶ್ರೀ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರಿಗೆ ಯಾವುದೇ ರಾಜಕೀಯ ಒತ್ತಡ ಬಂದಿಲ್ಲ. ಪ್ರಕರಣ ತನಿಖೆ ಹಂತದಲ್ಲಿರುವ ಕಾರಣ ಈಗಲೇ ಯಾವುದೇ ವಿವರಗಳನ್ನು ನೀಡಲು ಸಾಧ್ಯವಾಗುವುದಿಲ್ಲ. ಅವರು ಯಾರೇ ಆಗಿರಲಿ ನಾವು ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ. ಸತ್ಯಾಸತ್ಯೆಗಳನ್ನು ಬಯಲಿಗೆಳೆಯುತ್ತೇವೆ ಎಂದಿದ್ದಾರೆ ಮಿರ್ಜಿ. (ಒನ್ಇಂಡಿಯಾ ಕನ್ನಡ)


Click it and Unblock the Notifications











