For Quick Alerts
  ALLOW NOTIFICATIONS  
  For Daily Alerts

  'ವಿಲನ್'ಗಾಗಿ ಕನ್ನಡಕ್ಕೆ ಬಂದ ಬಾಲಿವುಡ್ ದಿಗ್ಗಜ ನಟ

  By Bharathkumar
  |

  ಅಭಿನಯ ಚಕ್ರವರ್ತಿ ಸುದೀಪ್ ಮತ್ತು ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಒಟ್ಟಾಗಿ ಅಭಿನಯಿಸುತ್ತಿರುವ 'ದಿ ವಿಲನ್' ಚಿತ್ರ ಪ್ರತಿಯೊಂದು ಹಂತದಲ್ಲೂ ನಿರೀಕ್ಷೆಯನ್ನ ಹೆಚ್ಚಿಸುತ್ತಾ ಬಂದಿದೆ. ಇಬ್ಬರು ಸೂಪರ್ ಸ್ಟಾರ್ ಗಳ ಈಗ ಬಾಲಿವುಡ್ ದಿಗ್ಗಜ ನಟನೊಬ್ಬ 'ದಿ ವಿಲನ್' ಅಡ್ಡಾಗೆ ಸೇರಿಕೊಂಡಿದ್ದಾರೆ.['ದಿ ವಿಲನ್' ಫಸ್ಟ್ ಲುಕ್ ರಿಲೀಸ್: ರಾಮ ಯಾರು? ರಾವಣ ಯಾರು? ]

  ಪ್ರೇಮ್ ನಿರ್ದೇಶನ ಮಾಡುತ್ತಿರುವ 'ದಿ ವಿಲನ್' ಚಿತ್ರಕ್ಕಾಗಿ ಬಾಲಿವುಡ್ ದಿಗ್ಗಜ ಮಿಥುನ್ ಚಕ್ರವರ್ತಿ ಎಂಟ್ರಿಕೊಟ್ಟಿದ್ದಾರೆ. ಹಿಂದಿ, ಬೆಂಗಾಳಿ, ಬೋಜ ಪುರಿ ಸೇರಿದಂತೆ ಸುಮಾರು 350 ಚಿತ್ರಗಳಲ್ಲಿ ನಟಿಸಿರುವ ಮಿಥುನ್ ಚಕ್ರವರ್ತಿ ಹಿಂದಿ ಚಿತ್ರರಂಗದ ಬಹುದೊಡ್ಡ ಕಲಾವಿದ. ಬಾಲಿವುಡ್‌ನ ಈ ಸೂಪರ್‌ಸ್ಟಾರ್ ಇದುವರೆಗೆ ಯಾವುದೇ ಕನ್ನಡ ಸಿನಿಮಾದಲ್ಲಿ ನಟಿಸಿರಲಿಲ್ಲ. ಕೆಲವು ತಿಂಗಳುಗಳ ಹಿಂದೆ ತೆಲುಗಿನಲ್ಲಿ 'ಗೋಪಾಲ ಗೋಪಾಲ' ಸಿನಿಮಾದಲ್ಲಿ ನಟಿಸಿದ್ದರು. ಈಗ ಅವರನ್ನು ಪ್ರೇಮ್ ಕನ್ನಡಕ್ಕೆ ಕರೆದುಕೊಂಡು ಬಂದಿದ್ದಾರೆ.['ದಿ ವಿಲನ್' ಚಿತ್ರೀಕರಣಕ್ಕೆ ಅಣಿಯಾಗಿದ್ದಾರೆ ಅಭಿನಯ ಚಕ್ರವರ್ತಿ ಸುದೀಪ್]

  ಇನ್ನು ಮುಂದಿನ ವಾರ ಬೆಳಗಾವಿಯಲ್ಲಿ ನಡೆಯಲಿರುವ ಚಿತ್ರೀಕರಣದಲ್ಲಿ ಮಿಥುನ್ ಕಿಚ್ಚ ಸುದೀಪ್ ಮುಂದೆ ಕಾಣಿಸಿಕೊಳ್ಳುತ್ತಿದ್ದಾರೆ. ಸುದೀಪ್ ಮತ್ತು ಮಿಥುನ್ ಚಕ್ರವರ್ತಿ ನಡುವಿನ ಚಿತ್ರೀಕರಣಕ್ಕೆ ನಿರ್ದೇಶಕ ಪ್ರೇಮ್ ಈಗಾಗಲೇ ಎಲ್ಲಾ ರೀತಿಯ ತಯಾರಿ ಮಾಡಿಕೊಂಡಿದ್ದಾರೆ.['ದಿ ವಿಲನ್' ಚಿತ್ರಕ್ಕಾಗಿ ಸುದೀಪ್ 'ಹಿಂದಿನ' ಅವತಾರ.. ನಿಮ್ಮ ಕಣ್ಣಿಗೆ ಕಂಡಿಲ್ಲದ್ದು.! ]

  ಉಳಿದಂತೆ 'ದಿ ವಿಲನ್' ಚಿತ್ರದಲ್ಲಿ ನಟಿ ಶ್ರುತಿ ಹರಿಹರನ್, ತೆಲುಗು ನಟ ಶ್ರೀಕಾಂತ್, ಕಾಮಿಡಿ ಕಿಲಾಡಿಗಳು ಶಿವರಾಜ್ ಕೆ.ಆರ್ ಪೇಟೆ ಸೇರಿದಂತೆ ಹಲವರು ಅಭಿನಯಿಸುತ್ತಿದ್ದಾರೆ. ಇನ್ನು ಈ ಬಹುಕೋಟಿ ಚಿತ್ರವನ್ನ ತನ್ವಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಸಿಆರ್ ಮನೋಹರ್ ನಿರ್ಮಿಸುತ್ತಿದ್ದಾರೆ. ಈಗಾಗಲೇ ಚಿತ್ರದ ಫಸ್ಟ್ ಲುಕ್ ಗಳಿಂದ ಹೈ ಎಕ್ಸ್ ಪೆಕ್ಟೇಶನ್ ಹುಟ್ಟುಹಾಕಿರುವ ಚಿತ್ರತಂಡ ಭರದಿಂದ ಶೂಟಿಂಗ್ ಮಾಡುತ್ತಿದೆ.[ಶಿವಣ್ಣನ 'ವಿಲನ್ ಹೇರ್ ಸ್ಟೈಲ್'ಗೆ ಕ್ರೇಜ್ ನೋಡ್ರಪ್ಪಾ! ]

  English summary
  The director of The Villain is scouting far and wide to get the best of the best for his film. Keeping with that spirit, he has now managed to bring in B-Town’s Dada, Mithun Chakraborty, to Sandalwood.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X