Don't Miss!
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Automobiles ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- News Annamalai: ಒಂದು ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕಾಣೆಯಾಗಿದೆ: ಅಣ್ಣಾಮಲೈ ಆರೋಪ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಧಿಕಾ ನಟನೆಯ 'ದಮಯಂತಿ' ಪೋಸ್ಟರ್ ಬಿಡುಗಡೆ ಮಾಡಿದ ಮೋಹನ್ ಲಾಲ್
ನಟಿ ರಾಧಿಕಾ ಕುಮಾರಸ್ವಾಮಿ ತೆರೆ ಮೇಲೆ ಮಿಂಚಿ ನಾಲ್ಕು ವರ್ಷಗಳು ಉರುಳಿವೆ. 'ರುದ್ರ ತಾಂಡವ' ಬಳಿಕ 'ಕಾಂಟ್ರ್ಯಾಕ್ಟ್', 'ರಾಜೇಂದ್ರ ಪೊನ್ನಪ್ಪ' ಸೇರಿದಂತೆ ಮೂರ್ನಾಲ್ಕು ಚಿತ್ರಗಳಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಬಿಜಿಯಿದ್ದರೂ, ಇನ್ನೂ ಅವರ ಯಾವ ಚಿತ್ರವೂ ಬಿಡುಗಡೆಗೊಂಡಿಲ್ಲ.
ಸದ್ಯ ರಾಧಿಕಾ ಕುಮಾರಸ್ವಾಮಿ ಅಭಿನಯದ 'ದಮಯಂತಿ' ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ನಾಲ್ಕು ಭಾಷೆಗಳಲ್ಲಿ ತಯಾರಾಗಿರುವ 'ದಮಯಂತಿ' ಸಿನಿಮಾದ ಮಲಯಾಳಂ ಪೋಸ್ಟರ್ ಇದೀಗ ರಿಲೀಸ್ ಆಗಿದೆ.
ಇತ್ತೀಚೆಗಷ್ಟೇ ಮಲಯಾಳಂ ಚಿತ್ರರಂಗದ ಖ್ಯಾತ ನಟ ಮೋಹನ್ ಲಾಲ್ 'ದಮಯಂತಿ' ಪೋಸ್ಟರ್ ಅನಾವರಣಗೊಳಿಸಿದರು. 'ದಮಯಂತಿ' ಫಸ್ಟ್ ಲುಕ್ ಪೋಸ್ಟರ್ ನಲ್ಲಿ ರಾಧಿಕಾ ಲುಕ್ ಭಯಂಕರವಾಗಿದ್ದು ಸಿನಿ ಪ್ರಿಯರಲ್ಲಿ ಭರವಸೆ ಮೂಡಿಸಿದೆ.
ಯಾವ ಸಿನಿಮಾಗಾಗಿ ಈ ರೀತಿ ಬದಲಾದರು ರಾಧಿಕಾ ಕುಮಾರಸ್ವಾಮಿ?
ಈಗಾಗಲೇ 'ದಮಯಂತಿ' ಚಿತ್ರದ ಕನ್ನಡ ಅವತರಣಿಕೆಯ ಟೀಸರ್ ಬಿಡುಗಡೆಯಾಗಿದೆ. ಅರಮನೆಯೊಂದರಲ್ಲಿ ರಾತ್ರಿ ವೇಳೆ ಕೆಂಪು ಸೀರೆಯನ್ನು ಧರಿಸಿದ ರಾಣಿಯ ಅವತಾರದಲ್ಲಿ ಕಾಣುವ ರಾಧಿಕಾ ಸಿಂಹಾಸನದ ಮೇಲೆ ಕುಳಿತುಕೊಂಡು ಗಂಭೀರ ನೋಟ ಬೀರುವ ಟೀಸರ್ ಎಲ್ಲೆಡೆ ಸದ್ದು ಮಾಡುತ್ತಿದೆ.
'ದಮಯಂತಿ' ಮಹಿಳಾ ಪ್ರಧಾನ ಚಿತ್ರವಾಗಿದ್ದು, ಇದರಲ್ಲಿ ರಾಧಿಕಾ ಕುಮಾರಸ್ವಾಮಿ, 'ಭಜರಂಗಿ' ಖ್ಯಾತಿಯ ಲೋಕಿ, ಸಾಧು ಕೋಕಿಲ, ತಬಲಾ ನಾಣಿ, ಮಿತ್ರ, ಮಜಾ ಟಾಕೀಸ್ ನ ಪವನ್ ಅಭಿನಯಿಸಿದ್ದಾರೆ. ಚಿತ್ರವನ್ನು ನವರಸನ್ ನಿರ್ದೇಶನ ಮಾಡಿದ್ದಾರೆ. ಕಥೆ-ಚಿತ್ರಕಥೆ ಜೊತೆಗೆ ನಿರ್ಮಾಣದ ಹೊಣೆಯೂ ನವರಸನ್ ಹೆಗಲ ಮೇಲಿದೆ.
ಆರ್.ಎಸ್.ಗಣೇಶ್ ನಾರಾಯಣ್ ಸಂಗೀತ ಸಂಯೋಜನೆ ಮಾಡಿರುವ ಈ ಚಿತ್ರ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ತೆರೆಗೆ ಬರಲಿದೆ.