ಮಂಸೋರೆ ನಿರ್ದೇಶನದ '19.20.21' ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್
ವಿಭಿನ್ನ ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳುವ ನಿರ್ದೇಶಕ ಮಂಸೋರೆ. ಈಗಾಗಲೇ ಇವರು ನಿರ್ದೇಶಿಸಿದ ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿ ಕೂಡ ಲಭಿಸಿದೆ. ಈ ಬಾರಿ ಟೈಟಲ್‌ನಿಂದಲೇ ಗಮನ ಸೆಳೆಯುತ್ತಿದ್ದಾರೆ.
'19.20.21' ಸಿನಿಮಾ ಮೂಲಕ ಮಂಸೋರೆ ಹೊಸ ಕ್ರಾಂತಿ ಸೃಷ್ಟಿಸಲು ಸಜ್ಜಾಗಿದ್ದಾರೆ. ಟೀಸರ್ ಮೂಲಕ ಬಹಳ ನಿರೀಕ್ಷೆ ಮೂಡಿಸಿರುವ ಈ ಚಿತ್ರ ಮಾರ್ಚ್ 3ರಂದು ರಿಲೀಸ್ ಆಗುತ್ತಿದೆ. ಅದಕ್ಕೂ ಮುನ್ನ ಚಿತ್ರತಂಡ ಟ್ರೈಲರ್ ರಿಲೀಸ್ ಮಾಡಿದೆ. ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ ಹಾಗೂ ನಾದಬ್ರಹ್ಮ ಹಂಸಲೇಖ ಸಿನಿಮಾದ ಟ್ರೈಲರ್ ರಿಲೀಸ್ ಮಾಡಿದ್ದಾರೆ.

"ಕರಾವಳಿಯಲ್ಲಿ ಎರಡು ದಶಕಗಳ ಕಾಲ ಒಂದು ಸಮುದಾಯ ಅನುಭವಿಸಿದ ನೋವು, ಆ ನೋವಿನ ವಿರುದ್ಧ ನಡೆಸಿದ ಹೋರಾಟ ಈ ಸಿನಿಮಾ ಮಾಡಲು ಸ್ಪೂರ್ತಿ. ಈ ಘಟನೆಗೆ ಸಂಬಂಧಿಸಿದಂತೆ ಕಳೆದ ಒಂಭತ್ತು ವರ್ಷದಿಂದ ಅಧ್ಯಯನ ಮಾಡಿ ಮಾಹಿತಿ ಕಲೆ ಹಾಕಿದ್ದೇನೆ. 2021ರಲ್ಲಿ ಘಟನೆಗೆ ಸಂಬಂಧಿಸಿದ ತೀರ್ಪು ಬಂದ ಮೇಲೆ ಸಿನಿಮಾ ಮಾಡಲು ನಿರ್ಧರಿಸಿದ್ದೆ." ಎಂದು ನಿರ್ದೇಶಕ ಮಂಸೋರೆ ಹೇಳಿದ್ದಾರೆ.
English summary
Act 1978 Fame Monsore Directed 192021 Movie Ready To Release, Know More.


Click it and Unblock the Notifications