ಶಿವರಾಜ್ ಕುಮಾರ್, ಡಾಲಿ ಮತ್ತು ಪೃಥ್ವಿ ಅಂಬರ್ ಹೊಸ ಸಿನಿಮಾಗೆ ಮುಹೂರ್ತ ಫಿಕ್ಸ್
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹೊಸ ಸಿನಿಮಾದ ಮುಹೂರ್ತಕ್ಕೆ ದಿನಾಂಕ ನಿಗದಿಯಾಗಿದೆ. ಇದೇ ತಿಂಗಳು ನವೆಂಬರ್ 19ರಂದು ಚಿತ್ರದ ಮುಹೂರ್ತ ಸಮಾರಂಭ ನಡೆಯಲಿದೆ. ವಿಶೇಷ ಎಂದರೆ ಈ ಸಿನಿಮಾ ಮೂಲಕ ಮತ್ತೆ ಧನಂಜಯ್ ಮತ್ತು ಶಿವಣ್ಣ ಒಟ್ಟಿಗೆ ಅಭಿಮಾನಿಗಳ ಮುಂದೆ ಬರಲಿದೆ.
ಟಗರು ಸಿನಿಮಾದಲ್ಲಿ ಮೋಡಿ ಮಾಡಿದ್ದ ಈ ಜೋಡಿ ಇದೀಗ ಮತ್ತೆ ಅಭಿಮಾನಿಗಳ ಮುಂದೆ ಬರ್ತಿರುವುದು ಸಿನಿಮಾದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಅಂದ್ಹಾಗೆ ಚಿತ್ರದಲ್ಲಿ ಮತ್ತೋರ್ವ ನಟ ಕಾಣಿಸಿಕೊಳ್ಳುತ್ತಿದ್ದಾರೆ. ದಿಯಾ ಸಿನಿಮಾ ಮೂಲಕ ಕನ್ನಡ ಸಿನಿಮಾ ಪ್ರೇಕ್ಷಕರ ಮನಗೆದ್ದಿರುವ ನಟ ಪೃಥ್ವಿ ಅಂಬರ್ ನಟಿಸುತ್ತಿದ್ದಾರೆ.
ಮೊದಲ ಬಾರಿಗೆ ಪೃಥ್ವಿ ಶಿವರಾಜ್ ಕುಮಾರ್ ಸಿನಿಮಾದಲ್ಲಿ ನಟಿಸುತ್ತಿದ್ದು , ಚಿತ್ರದ ಬಗ್ಗೆ ಸಖತ್ ಎಕ್ಸಾಯಿಟ್ ಆಗಿದ್ದಾರೆ. ಈ ಚಿತ್ರಕ್ಕೆ ತಮಿಳು ನಿರ್ದೇಶಕ ವಿಜಯ್ ಮಿಲ್ಟನ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ವಿಶೇಷ ಅಂದರೆ ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ಅನೂಪ್ ಸೀಳಿನ್ ಸಂಗೀತ ನೀಡುತ್ತಿದ್ದಾರೆ. ಈಗಾಗಲೇ ಸಂಗೀತ ಕೆಲಸ ಪ್ರಾರಂಭಿಸಿದ್ದು, ದಸರಾ ಹಬ್ಬದ ವಿಶೇಷ ಸಂದರ್ಭದಲ್ಲಿ ಅಧಿಕೃತವಾಗಿ ಸಿನಿಮಾ ಕೆಲಸ ಪ್ರಾರಂಭ ಮಾಡಿದೆ ಸಿನಿಮಾತಂಡ. ಸದ್ಯ ಮುಹೂರ್ತ ಮಾಡಿಕೊಳ್ಳುತ್ತಿರುವ ಸಿನಿಮಾತಂಡ ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭ ಮಾಡಲಿದೆ.


Click it and Unblock the Notifications











