Don't Miss!
- Technology
ಸ್ಯಾಮ್ಸಂಗ್ನ ಈ ಹೊಸ ಡಿವೈಸ್ ನೋಡಿದ್ರೆ ನಿಮಗೆ ಏನನ್ನಿಸುತ್ತೆ? ಇದೇನು ಸಾಬೂನಾ?
- News
ಬೊಮ್ಮಾಯಿ ಎಂದರೆ ಖಾಲಿ ಕುರ್ಚಿಗಳಿಗೆ ಭಾಷಣ ಮಾಡುವ ಸಿಎಂ!
- Lifestyle
ದಕ್ಷಿಣ ಧ್ರುವಕ್ಕೆ ಯಾತ್ರೆ ಮಾಡಿ ಸಾಧನೆ ಮೊದಲ ಮಹಿಳೆ: ಕ್ಯಾ. ಪ್ರೀತಿ ಚಾಂದಿ, ಇವರ ಸ್ಟೋರಿಯೇ ಸ್ಪೂರ್ತಿದಾಯಕ
- Finance
Budget 2023 Expectations: ಸಾಮಾನ್ಯ ಜನರ ಬಜೆಟ್ ನಿರೀಕ್ಷೆಗಳೇನು?
- Sports
BGT 2023: ಭಾರತದ ಸ್ಪಿನ್ ದಾಳಿ ಭಯ: ಆಸ್ಟ್ರೇಲಿಯಾ ಆಟಗಾರರು ಮಾಡ್ತಿರೋದೇನು?
- Automobiles
ಶೀಘ್ರವೇ ಕಡಿಮೆ ಬೆಲೆಯಲ್ಲಿ ಸಿಗಲಿದೆ ಮಾರುತಿ ಸುಜುಕಿ ಆಲ್ಟೊ ಕೆ10 ಎಕ್ಸ್ಟ್ರಾ ಎಡಿಷನ್
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಡಿಸೆಂಬರ್ 2ರಂದು ಬೆಂಗಳೂರಿನ ಮುಖ್ಯ ಚಿತ್ರಮಂದಿರಗಳಲ್ಲಿ ಯಾವ ಚಿತ್ರಗಳ ಪ್ರದರ್ಶನ?
2022ರ ಅಂತಿಮ ತಿಂಗಳು ಆರಂಭವಾಗಿದೆ. ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಿನಲ್ಲಿ ದೊಡ್ಡ ಮಟ್ಟದ ಗೆಲುವನ್ನು ದಾಖಲಿಸಿ ನವೆಂಬರ್ ತಿಂಗಳಿನಲ್ಲಿ ಮಂಕಾಗಿದ್ದ ಕನ್ನಡ ಚಿತ್ರರಂಗ ಈ ಡಿಸೆಂಬರ್ ತಿಂಗಳಿನಲ್ಲಿ ಪುಟಿದೇಳಬೇಕಿದೆ. ಹೌದು, ನವೆಂಬರ್ ತಿಂಗಳಿನಲ್ಲಿ ಬಿಡುಗಡೆಗೊಂಡ ಯಾವೊಂದು ಕನ್ನಡ ಚಿತ್ರವೂ ಸಹ ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸಲೇ ಇಲ್ಲ.
ಕಂಬ್ಲಿಹುಳ ಹಾಗೂ ಖಾಸಗಿ ಪುಟಗಳು ಚಿತ್ರಗಳು ಸಿನಿ ರಸಿಕರಿಂದ ಉತ್ತಮ ಪ್ರಶಂಸೆ ಪಡೆದುಕೊಂಡರೂ ಸಹ ಅರ್ಹ ಯಶಸ್ಸು ಚಿತ್ರಗಳಿಗೆ ಸಿಗಲಿಲ್ಲ. ಇನ್ನು ವರ್ಷದ ಅಂತಿಮ ತಿಂಗಳಿನಲ್ಲಿ ಹದಿನೈದು ಕನ್ನಡ ಚಿತ್ರಗಳು ಬಿಡುಗಡೆಗೊಳ್ಳಲಿದ್ದು, ಮೊದಲನೇ ವಾರ ನಾಲ್ಕು ಕನ್ನಡ ಚಿತ್ರಗಳು ತೆರೆಗೆ ಬರುತ್ತಿವೆ. ಹೌದು, ಡಿಸೆಂಬರ್ 2ರ ಶುಕ್ರವಾರದಂದು ಕನ್ನಡದ 'ತಿಮ್ಮಯ್ಯ ಅಂಡ್ ತಿಮ್ಮಯ್ಯ', 'ಧರಣಿ ಮಂಡಲ ಮಧ್ಯದೊಳಗೆ', 'ಸೆಕೆಂಡ್ ಲೈಫ್' ಹಾಗೂ 'ಫ್ಲಾಟ್ ನಂಬರ್ ನೈನ್' ಚಿತ್ರಗಳು ಬಿಡುಗಡೆಗೊಳ್ಳುತ್ತಿವೆ.
ಕನ್ನಡದ ಈ ಮೂರು ಚಿತ್ರಗಳ ಜತೆಗೆ ತೆಲುಗಿನ ಬಹು ನಿರೀಕ್ಷಿತ ಚಿತ್ರ ಹಿಟ್ ದ ಸೆಕೆಂಡ್ ಕೇಸ್ ಹಾಗೂ ಮಲಯಾಳಂನ ಗೋಲ್ಡ್ ಚಿತ್ರಗಳೂ ಸಹ ತೆರೆಗೆ ಬರುತ್ತಿದ್ದು, ಬೆಂಗಳೂರಿನ ಹಲವು ಪ್ರಮುಖ ಚಿತ್ರಮಂದಿರಗಳಲ್ಲಿ ಕೆಲ ಬದಲಾವಣೆಗಳಾಗಿವೆ. ಇನ್ನು ಬೆಂಗಳೂರಿನ ಪ್ರಮುಖ ಚಿತ್ರಮಂದಿರಗಳಲ್ಲಿ ಯಾವ ಚಿತ್ರಗಳು ಪ್ರದರ್ಶನಗೊಳ್ಳುತ್ತಿವೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ..
ನರ್ತಕಿ ಚಿತ್ರಮಂದಿರ, ಕೆಜಿ ರಸ್ತೆ: ತಿಮ್ಮಯ್ಯ ಅಂಡ್ ತಿಮ್ಮಯ್ಯ ( ಕನ್ನಡ ) - ನಾಲ್ಕು ಪ್ರದರ್ಶನಗಳು
ಸಂತೋಷ್ ಚಿತ್ರಮಂದಿರ, ಕೆಜಿ ರಸ್ತೆ: ರೇಮೊ ( ಕನ್ನಡ ) ಮೂರು ಪ್ರದರ್ಶನಗಳು
ಅನುಪಮಾ ಚಿತ್ರಮಂದಿರ : ಸೆಕೆಂಡ್ ಲೈಫ್ ( ಕನ್ನಡ ) ಎರಡು ಪ್ರದರ್ಶನಗಳು, ವಾಸಂತಿ ನಲಿದಾಗ ( ಕನ್ನಡ ) ಎರಡು ಪ್ರದರ್ಶನಗಳು
ಭೂಮಿಕಾ ಚಿತ್ರಮಂದಿರ: ಹಿಟ್ ದ ಸೆಕೆಂಡ್ ಕೇಸ್ ( ತೆಲುಗು ) ನಾಲ್ಕು ಪ್ರದರ್ಶನಗಳು
ವೀರೇಶ್ ಚಿತ್ರಮಂದಿರ, ಮಾಗಡಿ ರಸ್ತೆ: ತ್ರಿಬಲ್ ರೈಡಿಂಗ್ ( ಕನ್ನಡ ) ಎರಡು ಪ್ರದರ್ಶನಗಳು, ವಾಸಂತಿ ನಲಿದಾಗ ( ಕನ್ನಡ ) ಎರಡು ಪ್ರದರ್ಶನಗಳು, ಧರಣಿ ಮಂಡಲ ಮಧ್ಯದೊಳಗೆ ( ಕನ್ನಡ ) ಎರಡು ಪ್ರದರ್ಶನಗಳು ಹಾಗೂ ಕಾಂತಾರ ( ಕನ್ನಡ ) ಎರಡು ಪ್ರದರ್ಶನಗಳು.