Don't Miss!
- Sports
IND vs NZ 3rd T20: ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಮಿಂಚು; ನ್ಯೂಜಿಲೆಂಡ್ ವಿರುದ್ಧ ಸರಣಿ ಗೆದ್ದ ಭಾರತ
- Lifestyle
ಗರುಡ ಪುರಾಣ ಪ್ರಕಾರ ಈ 9 ಬಗೆಯ ವ್ಯಕ್ತಿಗಳ ಮನೆಯಲ್ಲಿ ಆಹಾರ ತಿನ್ನಲೇಬಾರದು
- News
ತಂಬಾಕು ನಿಯಂತ್ರಣಕ್ಕೆ ಮೈಸೂರು ಜಿಲ್ಲಾಧಿಕಾರಿ ತೆಗೆದುಕೊಂಡ ಕ್ರಮಗಳು, ಇಲ್ಲಿದೆ ವಿವರ
- Automobiles
ಹೊಸ ಇನೋವಾ ಹೈಕ್ರಾಸ್ ಬಲದೊಂದಿಗೆ ಮಾರಾಟದಲ್ಲಿ ದಾಖಲೆ ಮಟ್ಟದ ಬೆಳವಣಿಗೆ ಸಾಧಿಸಿದ ಟೊಯೊಟಾ
- Technology
ಚೀನಾದಲ್ಲಿ ಸೌಂಡ್ ಮಾಡಿದ್ದ ಈ ಡಿವೈಸ್ ಇದೀಗ ಜಾಗತಿಕ ಮಾರುಕಟ್ಟೆಗೆ ಎಂಟ್ರಿ!
- Finance
Union Budget 2023: ಹೊಸ ತೆರಿಗೆ ಪದ್ಧತಿಯಡಿಯಲ್ಲಿ ತೆರಿಗೆ ಲೆಕ್ಕಾಚಾರ ಹೇಗೆ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಸಂತೋಷ್‌ನಲ್ಲಿ ರಾಮಾಚಾರಿ, ನರ್ತಕಿಯಲ್ಲಿ ವೇದ; ಬೆಂಗಳೂರಿನ ಉಳಿದ ಪ್ರಮುಖ ಚಿತ್ರಮಂದಿರಗಳಲ್ಲಿ ಯಾವ ಚಿತ್ರ?
ಸದ್ಯ ಭಾರತ ಚಿತ್ರರಂಗದಲ್ಲಿ ಸಂಕ್ರಾಂತಿ ಪ್ರಯುಕ್ತ ಬಿಡುಗಡೆಯಾಗಿರುವ ಚಿತ್ರಗಳ ಹವಾ ನಡೆಯುತ್ತಿದೆ. ಅದರಲ್ಲಿಯೂ ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಸ್ಟಾರ್ ನಟರ ಚಿತ್ರಗಳು ಬಿಡುಗಡೆಯಾಗಿವೆ. ಸಂಕ್ರಾಂತಿ ಪ್ರಯುಕ್ತ ತೆಲುಗು ರಾಜ್ಯಗಳು ಹಾಗೂ ತಮಿಳುನಾಡಿನಲ್ಲಿ ಸಾಲು ಸಾಲು ರಜೆಗಳು ಇರುವ ಕಾರಣ ಸಿನಿ ರಸಿಕರು ಚಿತ್ರಮಂದಿರಗಳತ್ತ ಬರಲಿದ್ದಾರೆ. ಈ ಕಾರಣಕ್ಕಾಗಿ ಅಲ್ಲಿನ ನಿರ್ಮಾಪಕರು ಸ್ಟಾರ್ ನಟರ ಚಿತ್ರಗಳನ್ನು ಬಿಡುಗಡೆಗೊಳಿಸುವುದು ಸಹಜ.
ಇನ್ನು ತೆಲುಗು ಹಾಗೂ ತಮಿಳು ಚಿತ್ರಗಳ ಅಬ್ಬರ ಕೇವಲ ತೆಲುಗು ರಾಜ್ಯಗಳು ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಮಾತ್ರವಲ್ಲದೇ ಕರ್ನಾಟಕದಲ್ಲಿಯೂ ದೊಡ್ಡ ಮಟ್ಟದಲ್ಲಿದೆ. ತೆಲುಗು ಹಾಗೂ ತಮಿಳು ಸಿನಿ ರಸಿಕರು ಹೆಚ್ಚಿರುವ ಕಾರಣ ಚಿತ್ರಗಳು ದೊಡ್ಡ ಸಂಖ್ಯೆಯ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡಿವೆ. ಇನ್ನು ಈ ಚಿತ್ರಗಳ ಬಿಡುಗಡೆಯಿಂದ ಕನ್ನಡ ಚಿತ್ರಗಳಿಗೆ ಚಿತ್ರಮಂದಿರಗಳ ಕೊರತೆಯಾಗಿರುವುದು ಖಚಿತ.
ಕೆಲ ಕನ್ನಡ ಚಿತ್ರಗಳು ಚಿತ್ರಮಂದಿರಗಳಿಲ್ಲದೇ ಹಿನ್ನಡೆ ಅನುಭವಿಸಿದ್ದರೆ, ಇನ್ನೂ ಕೆಲ ಕನ್ನಡ ಚಿತ್ರಗಳು ತಮ್ಮ ಓಟವನ್ನು ಮುಂದುವರಿಸಿವೆ. ಅಷ್ಟೇ ಅಲ್ಲದೇ ಯಶ್ ನಟನೆಯ ಮಿಸ್ಟರ್ ಅಂಡ್ ಮಿಸ್ಸಸ್ ರಾಮಾಚಾರಿ ಚಿತ್ರ ತೆಲುಗು ಹಾಗೂ ತಮಿಳು ಚಿತ್ರಗಳ ಹಾವಳಿ ನಡುವೆಯೂ ಬೆಂಗಳೂರಿನ ಕೆಜಿ ರಸ್ತೆಯ ಪ್ರಮುಖ ಚಿತ್ರಮಂದಿರದಲ್ಲಿ ಬಿಡುಗಡೆಗೊಂಡಿದೆ. ಹಾಗಿದ್ದರೆ ಬೆಂಗಳೂರಿನ ಯಾವ ಪ್ರಮುಖ ಚಿತ್ರಮಂದಿರಗಳಲ್ಲಿ ಯಾವ ಚಿತ್ರಗಳು ಇಂದು ( ಜನವರಿ 13 ) ಪ್ರದರ್ಶನಗೊಳ್ಳುತ್ತಿವೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.

ಗಾಂಧಿನಗರದ ಚಿತ್ರಮಂದಿರಗಳಲ್ಲಿ ಯಾವ ಚಿತ್ರಗಳ ಪ್ರದರ್ಶನ
ಗಾಂಧಿನಗರದ ಕೆಜಿ ರಸ್ತೆಯ ಸಂತೋಷ್ ಚಿತ್ರಮಂದಿರದಲ್ಲಿ ಯಶ್ ಹಾಗೂ ರಾಧಿಕಾ ಪಂಡಿತ್ ನಟನೆಯ ಮಿಸ್ಟರ್ ಅಂಡ್ ಮಿಸ್ಸಸ್ ರಾಮಾಚಾರಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ. ಯಶ್ ಹುಟ್ಟುಹಬ್ಬದ ಪ್ರಯುಕ್ತ ಜನವರಿ 8ರಂದು ವಿಶೇಷ ಪ್ರದರ್ಶನ ಕಂಡಿದ್ದ ಈ ಚಿತ್ರವನ್ನು ಇಂದಿನಿಂದ ( ಜನವರಿ 13 ) ಮರು ಬಿಡುಗಡೆ ಮಾಡಲಾಗಿದೆ. ಇನ್ನು ನರ್ತಕಿ ಚಿತ್ರಮಂದಿರದಲ್ಲಿ ಈ ವಾರವೂ ಸಹ ಶಿವ ರಾಜ್‌ಕುಮಾರ್ ನಟನೆಯ ವೇದ ಚಿತ್ರ ತನ್ನ ಓಟವನ್ನು ಮುಂದುವರಿಸಿದೆ. ಭೂಮಿಕಾ ಚಿತ್ರಮಂದಿರದಲ್ಲಿ ಬಾಲಕೃಷ್ಣ ನಟನೆಯ ವೀರಸಿಂಹ ರೆಡ್ಡಿ ಚಿತ್ರ ಬಿಡುಗಡೆಗೊಂಡಿದೆ. ಸಪ್ನ ಚಿತ್ರಮಂದಿರದಲ್ಲಿ ಡಾರ್ಲಿಂಗ್ ಕೃಷ್ಣ ನಟನೆಯ ಮಿಸ್ಟರ್ ಬ್ಯಾಚುಲರ್ ಚಿತ್ರ ಪ್ರದರ್ಶನ ಕಾಣುತ್ತಿದ್ದು, ನಾಳೆ ( ಜನವರಿ 14 ) ಇಲ್ಲಿ ವಿಜಯ್ ನಟನೆಯ ವಾರಿಸು ಚಿತ್ರದ ತೆಲುಗು ಡಬಿಂಗ್ ಸಿನಿಮಾ ವಾರಸುಡು ಬಿಡುಗಡೆಗೊಳ್ಳಲಿದೆ. ತ್ರಿವೇಣಿ ಚಿತ್ರಮಂದಿರದಲ್ಲಿ ಚಿರಂಜೀವಿ ನಟನೆಯ ವಾಲ್ತೇರು ವೀರಯ್ಯ ಚಿತ್ರ ಬಿಡುಗಡೆಗೊಂಡಿದೆ. ಅನಪಮಾ ಚಿತ್ರಮಂದಿರದಲ್ಲಿ ಕನ್ನಡದ ಥಗ್ಸ್ ಆಫ್ ರಾಮಘಡ, ಮಂಕು ಭಾಯ್ ಫಾಕ್ಸಿ ರಾಣಿ ಹಾಗೂ ಮರೆಯದೇ ಕ್ಷಮಿಸು ಚಿತ್ರಗಳು ಪ್ರದರ್ಶನಗೊಳ್ಳುತ್ತಿವೆ.

ವೀರೇಶ್ ಚಿತ್ರಮಂದಿರದಲ್ಲೂ ಪರಭಾಷಾ ಹಾವಳಿ
ಇನ್ನು ಮಾಗಡಿ ರಸ್ತೆಯ ವೀರೇಶ್ ಚಿತ್ರಮಂದಿರದಲ್ಲಿಯೂ ಸಹ ತೆಲುಗು ಹಾಗೂ ತಮಿಳು ಚಿತ್ರಗಳ ಹಾವಳಿ ಹೆಚ್ಚಾಗಿದೆ. ಕನ್ನಡದ ಆರ್ಕೆಸ್ಟ್ರಾ ಮೈಸೂರು ಎರಡು ಪ್ರದರ್ಶನಗಳನ್ನು ಪಡೆದುಕೊಂಡದ್ದು ಬಿಟ್ಟರೆ ಇನ್ಯಾವ ಕನ್ನಡ ಚಿತ್ರಗಳೂ ಪ್ರದರ್ಶನಗೊಳ್ಳುತ್ತಿಲ್ಲ. ಉಳಿದಂತೆ ತಮಿಳಿನ ವಾರಿಸು ಹಾಗೂ ತೆಲುಗಿನ ವಾಲ್ತೇರು ವೀರಯ್ಯ ಮತ್ತು ವೀರಸಿಂಹ ರೆಡ್ಡಿ ಚಿತ್ರಗಳು ಇಲ್ಲಿ ಪ್ರದರ್ಶನಗೊಳ್ಳುತ್ತಿವೆ.

ಉಳಿದ ಚಿತ್ರಮಂದಿರಗಳಲ್ಲಿ ಯಾವ ಚಿತ್ರಗಳು?
ಇನ್ನು ಬೆಂಗಳೂರಿನ ಪ್ರಮುಖ ಚಿತ್ರಮಂದಿರಗಳಲ್ಲಿ ಒಂದಾಗಿರುವ ಊರ್ವಶಿ ಚಿತ್ರಮಂದಿರದಲ್ಲಿ ವಾರಿಸು ಹಾಗೂ ವಾಲ್ತೇರು ವೀರಯ್ಯ ಪ್ರದರ್ಶನಗೊಳ್ಳುತ್ತಿವೆ. ಮಾಗಡಿ ರಸ್ತೆಯ ಅಂಜಾನ್ ಚಿತ್ರಮಂದಿರಲ್ಲಿಯೂ ಸಹ ವಾರಿಸು ಹಾಗೂ ವಾಲ್ತೇರು ವೀರಯ್ಯ ಚಿತ್ರಗಳು ಪ್ರದರ್ಶನಗೊಳ್ಳುತ್ತಿವೆ.