Just In
Don't Miss!
- Finance
ಎಲ್&ಟಿ ತ್ರೈಮಾಸಿಕ ಆದಾಯ 5% ಏರಿಕೆ: ದಾಖಲೆಯ 2,467 ಕೋಟಿ ರೂಪಾಯಿ
- News
ಸೌಮ್ಯ ರೆಡ್ಡಿ ಮೇಲಿನ ಎಫ್ಐಆರ್ ರದ್ದುಗೊಳಿಸಿ: ರೆಡ್ಡಿ ಜನ ಸಂಘ
- Sports
"ಸಿಡ್ನಿಯಲ್ಲಿ ನಾನು 30 ನಿಮಿಷ ಹೆಚ್ಚು ಬ್ಯಾಟಿಂಗ್ ಮಾಡಿದ್ದರೆ ಭಾರತ ಗೆಲ್ಲುವ ಸಾಧ್ಯತೆಯಿತ್ತು"
- Automobiles
ಪವರ್ಫುಲ್ ಪೆಟ್ರೋಲ್ ಎಂಜಿನ್ ಆಯ್ಕೆಗಳನ್ನು ಪಡೆದುಕೊಳ್ಳಲಿದೆ ಸ್ಕೋಡಾ ಕುಶಾಕ್
- Lifestyle
ನಿಮ್ಮ ದೇಹದ ಮೇಲಿನ ಕೂದಲು ಹೇಳುತ್ತೆ ನಿಮ್ಮ ಆರೋಗ್ಯದ ಭವಿಷ್ಯ
- Education
Indian Air Force Recruitment 2021: ಏರ್ಮೆನ್ ಗ್ರೂಪ್ X & Y ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕಾಲಿವುಡ್ 'ಮಫ್ತಿ'ಯ ಪ್ರಮುಖ ದೃಶ್ಯದ ಚಿತ್ರೀಕರಣ
ಕನ್ನಡದ ಸೂಪರ್ ಹಿಟ್ ಸಿನಿಮಾ 'ಮಫ್ತಿ' ತಮಿಳಿಗೆ ರಿಮೇಕ್ ಆಗುತ್ತದೆ. ಈಗಾಗಲೇ ಈ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ.
'ಮಫ್ತಿ' ಸಿನಿಮಾದ ಪ್ರಮುಖ ದೃಶ್ಯದ ಚಿತ್ರೀಕರಣ ಈಗ ನಡೆಯುತ್ತಿದೆ. ಭೈರತಿ ರಣಗಲ್ ಪಾತ್ರದ ಎಂಟ್ರಿ ದೃಶ್ಯದ ಶೂಟಿಂಗ್ ಸಾಗುತ್ತಿದೆ. ಚಿತ್ರೀಕರಣದ ಸ್ಥಳದ ಫೋಟೋವನ್ನು ನಟ ಸಿಂಬು ಹಂಚಿಕೊಂಡಿದ್ದಾರೆ. ಹೆಲಿಕ್ಯಾಪ್ಟರ್ ನಿಂದ ಹೀರೋ ಆಗಮನ ಆಗುವ ದೃಶ್ಯ ಇದಾಗಿದೆ.
ತಮಿಳಿನಲ್ಲಿ 'ಮಫ್ತಿ' : ಭೈರತಿ ರಣಗಲ್ ಆದ ಸಿಂಬು
ಶಿವರಾಜ್ ಕುಮಾರ್ ಮಾಡಿದ್ದ ಭೈರತಿ ರಣಗಲ್ ಪಾತ್ರವನ್ನು ಸಿಂಬು ನಿರ್ವಹಿಸುತ್ತಿದ್ದಾರೆ. ಶ್ರೀ ಮುರಳಿ ಪಾತ್ರದಲ್ಲಿ ಗೌತಮ್ ಕಾರ್ತಿಕ್ ನಟಿಸುತ್ತಿದ್ದಾರೆ. ಸಿಂಬು ಗ್ಯಾಂಗ್ ಸ್ಟರ್ ಹಾಗೂ ಗೌತಮ್ ಪೊಲೀಸ್ ಪಾತ್ರದಲ್ಲಿ ನಟಿಸುತ್ತಿದ್ದಾರೆ
ಕನ್ನಡದ ನಿರ್ದೇಶಕ ನರ್ತನ್ ಅವರೇ ಅಲ್ಲಿಯೂ ಈ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. ಮೊದಲ ಸಿನಿಮಾದಲ್ಲಿಯೇ ದೊಡ್ಡ ಗೆಲುವು ಕಂಡ ಈ ನಿರ್ದೇಶಕ ಈಗ ಕಾಲಿವುಡ್ ಗೆ ಹಾಡಿದ್ದಾರೆ.
ಬಾಹುಬಲಿ ತಮಿಳು ಚಿತ್ರಕ್ಕೆ ಡೈಲಾಗ್ ಬರೆದಿದ್ದ ಮಾಧವನ್ ಕಾರ್ತಿ ಈ ಸಿನಿಮಾಗೂ ಸಂಭಾಷಣೆ ಬರೆದಿದ್ದಾರೆ. ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ.