For Quick Alerts
  ALLOW NOTIFICATIONS  
  For Daily Alerts

  ಪುನೀತ್ ಜೇಮ್ಸ್ ಚಿತ್ರಕ್ಕೆ ಎಂಟ್ರಿ ಕೊಟ್ಟ ಬಹುಭಾಷಾ ನಟ ಮುಖೇಶ್ ರಿಷಿ

  |

  ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟಿಸುತ್ತಿರುವ ಜೇಮ್ಸ್ ಸಿನಿಮಾ ಈಗಾಗಲೇ ಚಿತ್ರೀಕರಣ ಆರಂಭಿಸಿದೆ. ಬಳ್ಳಾರಿಯ ಹೊಸಪೇಟೆ ಸುತ್ತಮುತ್ತ ಶೂಟಿಂಗ್ ಮುಗಿಸಿರುವ ಚಿತ್ರತಂಡ ಈಗ ಮೂರನೇ ಹಂತಕ್ಕೆ ಸಜ್ಜಾಗುತ್ತಿದೆ.

  ಜೇಮ್ಸ್ ಚಿತ್ರದಲ್ಲಿ ಪುನೀತ್ ಎದುರು ಅಬ್ಬರಿಸಲಿದ್ದಾರೆ ಬಾಲಿವುಡ್ ನಟ | James | Puneeth Rajkumar

  ಸದ್ಯದ ಮಾಹಿತಿ ಪ್ರಕಾರ, ಜೇಮ್ಸ್ ಚಿತ್ರದಲ್ಲಿ ಬಹುಭಾಷಾ ನಟ ಮುಖೇಶ್ ರಿಷಿ ನಟಿಸುತ್ತಿದ್ದು, ಮೂರನೇ ಹಂತದ ಶೂಟಿಂಗ್‌ನಲ್ಲಿ ಭಾಗವಹಿಸುತ್ತಿದ್ದಾರೆ.

  ಪುನೀತ್ 'ಜೇಮ್ಸ್' ಚಿತ್ರಕ್ಕೆ ಎಂಟ್ರಿಕೊಟ್ಟ ತೆಲುಗು ಸ್ಟಾರ್ ನಟ!ಪುನೀತ್ 'ಜೇಮ್ಸ್' ಚಿತ್ರಕ್ಕೆ ಎಂಟ್ರಿಕೊಟ್ಟ ತೆಲುಗು ಸ್ಟಾರ್ ನಟ!

  ಮುಖೇಶ್ ರಿಷಿ ಹಿಂದಿ, ತೆಲುಗು, ತಮಿಳು, ಕನ್ನಡ, ಬೆಂಗಾಳಿ, ಬೋಜ್‌ಪುರಿ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸುತ್ತಿರುವ ಕಲಾವಿದ.

  ನವೆಂಬರ್ 25 ರಿಂದ ಬೆಂಗಳೂರಿನಲ್ಲಿ ಜೇಮ್ಸ್ ಸಿನಿಮಾದ ಶೂಟಿಂಗ್ ಮತ್ತೆ ಆರಂಭವಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. 'ರಾಜಕುಮಾರ' ಚಿತ್ರದಲ್ಲಿ ಜೋಡಿಯಾಗಿದ್ದ ಪ್ರಿಯಾ ಆನಂದ್ ಈ ಚಿತ್ರದಲ್ಲೂ ಅಪ್ಪು ಜೊತೆ ಹೆಜ್ಜೆ ಹಾಕಲಿದ್ದಾರೆ.

  ಬಹುದ್ಧೂರ್, ಭರ್ಜರಿ ಚಿತ್ರಗಳನ್ನು ನಿರ್ದೇಶಿಸಿದ್ದ ಚೇತನ್ ಕುಮಾರ್ ಜೇಮ್ಸ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, ಕಿಶೋರ್ ಪತ್ತಿಕೊಂಡ ಬಂಡವಾಳ ಹಾಕುತ್ತಿದ್ದಾರೆ. ಇನ್ನುಳಿದಂತೆ ಅನು ಪ್ರಭಾಕರ್, ತೆಲುಗು ನಟ ಶ್ರೀಕಾಂತ್, ಆದಿತ್ಯ ಮೆನನ್ ಸಹ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

  English summary
  Mukesh Rishi the latest addition to Puneeth Rajkumar's James movie, third shooting schedule for commercial entertainer directed by Chethan.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X