"ಇತಿಹಾಸ ಗೊತ್ತಿಲ್ಲ ಅಂದ್ರೆ ಸುಮ್ಮನಿರಿ": ಕಾಂಗ್ರೆಸ್ ಯುವ ನಾಯಕ ಮಿಥುನ್ ರೈ ಹೇಳಿಕೆಗೆ ರಕ್ಷಿತ್ ಶೆಟ್ಟಿ ತಿರುಗೇಟು

ಕರಾವಳಿ ಕಾಂಗ್ರೆಸ್ ಯುವ ನಾಯಕ ಮಿಥುನ್ ರೈ ನೀಡಿದ ಹೇಳಿಕೆಯೊಂದು ಕಳೆದೆರದು ದಿನಗಳಿಂದ ಭಾರೀ ಚರ್ಚೆ ಹುಟ್ಟಾಕ್ಕಿದೆ. ಕೃಷ್ಣ ಮಠಕ್ಕೆ ಭೂಮಿ ಕೊಟ್ಟವರು ಮುಸ್ಲಿಂ ರಾಜರು ಎನ್ನುವ ಹೇಳಿಕೆ ಮಿಥುನ್ ರೈ ಹೇಳಿಕೆ ಭಾರೀ ಚರ್ಚೆ ಹುಟ್ಟಾಕಿದೆ. ವಿರೋಧ ಪಕ್ಷದ ನಾಯಕರು ಸೇರಿದಂತೆ ರಾಜ್ಯಾದ್ಯಂತ ಮಿಥುನ್ ರೈ ಹೇಳಿಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ನಟ ರಕ್ಷಿತ್ ಶೆಟ್ಟಿ ಕೂಡ ಟ್ವೀಟ್ ಮಾಡಿ ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ.

Muslim kings donated land for Udupi mutt: Rakshit Shetty slam Congress leader Mithun Rais statement

ಮೂಡಬಿದಿರೆಯಲ್ಲಿ ನಡೆದ 'ನಮ್ಮೂರ ಮಸೀದಿ ನೋಡ ಬನ್ನಿ' ಕಾರ್ಯಕ್ರಮದಲ್ಲಿ ಮಿಥುನ್‌ ರೈ, ಮಾತನಾಡಿ ಉಡುಪಿ ಮಠಕ್ಕೆ ಮುಸ್ಲಿಂ ರಾಜರು ಜಾಗ ನೀಡಿದ್ದಾರೆ. ಸೌಹಾರ್ದತೆಯನ್ನು ಹೊಂದಿರುವ ಜಿಲ್ಲೆ ದಕ್ಷಿಣ ಕನ್ನಡ. ಬಪ್ಪನಾಡು ದುರ್ಗಾಪರಮೇಶ್ವರಿ ದೇವರು ಒಲಿದಿದ್ದು ಬಪ್ಪ ಬ್ಯಾರಿಗೆ. ತುಳುನಾಡಿನಲ್ಲಿ ಪವಾಡ ದೈವ ಕೊರಗಜ್ಜ ಕಟ್ಟೆಯೊಂದರಲ್ಲಿ ಒಬ್ಬ ಮುಸ್ಲಿಂ ವ್ಯಕ್ತಿಯಿಂದ ಪೂಜೆ ನಡೆಯುತ್ತೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಭಾರೀ ವಿವಾದ ಸೃಷ್ಟಿಸಿದ್ದು, ಸೋಶಿಯಲ್ ಮೀಡಿಯಾದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

ನಟ ರಕ್ಷಿತ್‌ ಶೆಟ್ಟಿ ಟ್ವೀಟ್ ಮಾಡಿ "ದೇವಾಲಯದ ಪಟ್ಟಣವಾದ ಉಡುಪಿ ಸಾವಿರ ವರ್ಷಗಳ ಇತಿಹಾಸ ಹೊಂದಿದೆ. ನಿಮಗೆ ಗೊತ್ತಿಲ್ಲ ಅಂದಮೇಲೆ ಸಾರ್ವಜನಿಕ ವೇದಿಕೆಯಲ್ಲಿ ಅಸಂಬದ್ಧವಾಗಿ ಮಾತನಾಡುವುದೇಕೆ ?" ಎಂದು ಪ್ರಶ್ನಿಸಿದ್ದಾರೆ. ಮುಸ್ಲಿಂ ಓಲೈಕೆ ಹಾಗೂ ಚುನಾವಣೆ ಟಿಕೆಟ್‌ಗಾಗಿ ಹೀಗೆಲ್ಲಾ ಮಾತನಾಡುತ್ತಿದ್ದಾರೆ ಎಂದು ನೆಟ್ಟಿಗರು ಕಾಮೆಂಟ್ ಬಾಕ್ಸ್‌ನಲ್ಲಿ ಬರೆದಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಆಪ್ತರಲ್ಲಿ ಮಿಥುನ್ ರೈ ಕೂಡ ಗುರ್ತಿಸಿಕೊಂಡಿದ್ದಾರೆ. ಚುನಾವಣೆ ಹೊಸ್ತಿಲಲ್ಲಿ ಟಿಕೆಟ್ ಆಕಾಂಕ್ಷಿ ಆಗಿರುವ ಮಿಥುನ್ ರೈ ಈ ರೀತಿ ಹೇಳಿಕೆ ಕೊಟ್ಟು ಚರ್ಚೆ ಹುಟ್ಟಾಕಿದ್ದಾರೆ. ಈ ಬಗ್ಗೆ ಉಡುಪಿ ಶಾಸಕರಾದ ರಘುಪತಿ ಭಟ್ ತಿರಗೇಟು ನೀಡಿದ್ದಾರೆ. ಮುಸಲ್ಮಾನ ರಾಜರು ಯಾವುದೇ ಜಾಗವನ್ನು ಕೃಷ್ಣಮಠಕ್ಕಾಗಲಿ ಅನಂತೇಶ್ವರಕ್ಕಾಗಲಿ ಕೊಟ್ಟಿಲ್ಲ. ಅನಂತೇಶ್ವರ ದೇಗುಲಕ್ಕೆ ರಾಮಭೋಜನು ಜಾಗ ನೀಡಿದ ಬಗ್ಗೆ ಉಲ್ಲೇಖ ಇದೆ, ಮುಂದೆ ಆ ಜಾಗ ಕೃಷ್ಣ ಮಠಕ್ಕೆ ಬಳಕೆಯಾಗಿದೆ. ಅನಂತೇಶ್ವರ ದೇಗುಲ ನಂತರ ಕೃಷ್ಣ ಮಠ ಆಗಿ ನಿರ್ಮಾಣಗೊಂಡಿದೆ ಎಂದಿದ್ದರು.

ಇನ್ನು ಮಿಥುನ್ ರೈ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕೂಡ ತಿರುಗೇಟು ನೀಡಿದ್ದರು. ಮುಸಲ್ಮಾನ ರಾಜರೇ ರಾಮ ಮಂದಿರ ನಿರ್ಮಾಣ ಮಾಡಿದ್ದು, ಅವರೇ ಕಾಶಿ ವಿಶ್ವನಾಥನನ್ನು ಪ್ರತಿಷ್ಠಾಪಿಸಿದ್ದು ಎಂದು ಹೇಳಿದರೂ ಅಚ್ಚರಿ ಇಲ್ಲ. ಅಷ್ಟೆಲ್ಲಾ ಯಾಕೆ ದೇಶಕ್ಕೆ ಭಾರತ ಎಂಬ ಹೆಸರು ಕೂಡ ಮುಸಲ್ಮಾನರೇ ನೀಡಿದ್ದು ಎಂದೂ ಹೇಳಬಹುದು. ಸುಳ್ಳು ಮತ್ತು ಕಾಂಗ್ರೆಸ್ ಎರಡೂ ಒಂದು ನಾಣ್ಯದ ಎರಡು ಮುಖಗಳು. ಸುಳ್ಳನ್ನು ಸತ್ಯದ ರೀತಿಯಲ್ಲಿ ಹೇಳುವುದು ಅವರಿಗಿರುವ ಕಾಯಿಲೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

More from Filmibeat

English summary
Muslim kings donated land for Udupi mutt: Rakshit Shetty slam Congress leader Mithun Rai's statement
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X