twitter
    For Quick Alerts
    ALLOW NOTIFICATIONS  
    For Daily Alerts

    ದಸರಾ ಸಿನಿಮೋತ್ಸವದಲ್ಲಿ ಯಾವ್ಯಾವ ಚಿತ್ರಗಳಿವೆ? ಅತಿಥಿ ನಟರು ಯಾರು?

    By ಮೈಸೂರು ಪ್ರತಿನಿಧಿ
    |

    ದಸರಾ ಮಹೋತ್ಸವದಲ್ಲಿ ಈ ಬಾರಿ ಸಿನಿಮೋತ್ಸವ ಸೆ.26ರಿಂದ ಅ.3ರವರೆಗೆ ನಡೆಯಲಿದ್ದು, ದೇಶ- ವಿದೇಶದ 112 ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ ಎಂದು ಚಲನಚಿತ್ರೋತ್ಸವದ ಉಪ ವಿಶೇಷಾಧಿಕಾರಿ ಆರ್.ಶೇಷ ತಿಳಿಸಿದರು.

    ವಾರ್ತಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿದಿನ ನಾಲ್ಕು ಚಿತ್ರಗಳನ್ನು ವೀಕ್ಷಿಸಬಹುದಾಗಿದ್ದು, ದಿನಕ್ಕೆ 100 ರೂ ಟಿಕೆಟ್ ದರ ನಿಗದಿ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ವಾರಕ್ಕೆ 300 ರೂ, ವಯಸ್ಕರಿಗೆ 500 ರೂ ನಿಗದಿಪಡಿಸಲಾಗಿದೆ. ಸೆ.26 ರಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಟ ಡಾ.ಶಿವರಾಜ್ ಕುಮಾರ್ ಉದ್ಘಾಟಿಸಲಿದ್ದಾರೆ. ಐನಾಕ್ಸ್‌ನಲ್ಲಿ 3 ಮತ್ತು ಡಿಆರ್‌ಸಿಯ 1 ಸ್ಕ್ರೀನ್‌ನಲ್ಲಿ ಪ್ರದರ್ಶನವಿರಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಚಲನಚಿತ್ರ ನಟ-ನಟಿಯರಾದ ಅಮೃತ ಅಯ್ಯಂಗಾರ್, ಕಾವ್ಯಶೆಟ್ಟಿ, ಸುಧಾರಾಣಿ, ಅನುಪ್ರಭಾಕರ್ ಸೇರಿದಂತೆ ಅನೇಕ ತಾರೆಯರು ಆಗಮಿಸಲಿದ್ದಾರೆ ಎಂದು ತಿಳಿಸಿದರು.

    ಸೆ.27ರಿಂದ ಅ.3ರವರೆಗೆ 56 ಕನ್ನಡ, 28 ಪನೋರಮಾ, 28 ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತ ಸಿನಿಮಾಗಳು ಸೇರಿದಂತೆ ಒಟ್ಟು 112 ಚಿತ್ರಗಳು ಪ್ರದರ್ಶನಗೊಳ್ಳಲಿವೆ. ಸೆ.22, 23 ಮತ್ತು 24ರಂದು ಸಿನಿಮಾ ಕಾರ್ಯಾಗಾರ ಆಯೋಜಿಸಲಾಗಿದೆ. ಕಾರ್ಯಾಗಾರದಲ್ಲಿ ಚಲನಚಿತ್ರ ನಿರ್ಮಾಣದ ಪೂರ್ವ ತಯಾರಿ ಕುರಿತು ಮಾಹಿತಿ ನೀಡಲಾಗುತ್ತದೆ. ಕಾರ್ಯಾಗಾರವನ್ನು ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಉದ್ಘಾಟಿಸಲಿದ್ದಾರೆ. ಚಂಪಾಶೆಟ್ಟಿ, ಪ್ರಶಾಂತ್ ಪಂಡಿತ್, ಪ್ರವೀನ್ ಕೃಪಾಕರ್, ಪವನ್ ಕುಮಾರ್, ಶಂಕರ್ ಎನ್.ಸಂಡೂರು, ಪನ್ನಗಾಭರಣ, ಮಂಸೊರೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಲಿದ್ದಾರೆ. ಕಾರ್ಯಾಗಾರದಲ್ಲಿ ಪಾಲ್ಗೊಳ್ಳಲು ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರನ್ನು ಆಹ್ವಾನಿಸಲಾಗಿದ್ದು, ಪ್ರವೇಶಕ್ಕೆ 300 ರೂ ಶುಲ್ಕ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

    ಪುನೀತ್ ರಾಜ್‌ಕುಮಾರ್ ನಟನೆಯ 6 ಚಿತ್ರ

    ಪುನೀತ್ ರಾಜ್‌ಕುಮಾರ್ ನಟನೆಯ 6 ಚಿತ್ರ

    ಚಲನಚಿತ್ರೋತ್ಸವದಲ್ಲಿ ಪುನೀತ್‌ರಾಜ್‌ಕುಮಾರ್ ಅವರ 6 ಚಿತ್ರಗಳು ಪ್ರದರ್ಶನಗೊಳ್ಳಲಿವೆ. ಪುನೀತ್‌ ರಾಜ್‌ಕುಮಾರ್ ಬಾಲನಟರಾಗಿ ನಟಿಸಿರುವ 'ಬೆಟ್ಟದ ಹೂ', ಅಂಜನಿ ಪುತ್ರ', 'ರಾಜಕುಮಾರ', 'ಮೈತ್ರಿ', 'ಪೃಥ್ವಿ' ಹಾಗೂ 'ಯುವರತ್ನ' ಸಿನಿಮಾ ಪ್ರದರ್ಶನಗೊಳ್ಳಲಿದೆ. ಸಂಚಾರಿ ವಿಜಯ್ ಅವರು ನಟಿಸಿರುವ 'ತಲೆದಂಡ', 'ಪುಕ್ಸಟ್ಟೆ ಲೈಫು', 'ಆಕ್ಟ್ 1978' ಸಿನಿಮಾಗಳು ಪ್ರದರ್ಶನಗೊಳ್ಳುತ್ತವೆ. ಪುನೀತ್‌ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಶಕ್ತಿಧಾಮದ ಮಕ್ಕಳೊಂದಿಗೆ ಸೆ.27ರಂದು 'ಬೆಟ್ಟದ ಹೂ' ಚಿತ್ರ ವೀಕ್ಷಿಸಲಿದ್ದಾರೆ. ಚಲನಚಿತ್ರೋತ್ಸವ ಕಾರ್ಯದರ್ಶಿ ಟಿ.ಕೆ.ಹರೀಶ್ ಇದ್ದರು.

    ಕನ್ನಡದ ಯಾವ ಸಿನಿಮಾಗಳಿವೆ?

    ಕನ್ನಡದ ಯಾವ ಸಿನಿಮಾಗಳಿವೆ?

    'ಅವನೇ ಶ್ರೀಮನ್ನನಾರಾಯಣ', '100', '777 ಚಾರ್ಲಿ', ಶ್ರೀ ಸುತ್ತೂರು ಮಠ-ಗುರುಪರಂಪರೆ, ಆದ್ಯಾ, ಅವತಾರ ಪುರುಷ, ಬಡವರಾಸ್ಕಲ್, ಭಜರಂಗಿ-2, ನಿನ್ನ ಸನಿಹಕೆ, ಒಂಭತ್ತನೇ ದಿಕ್ಕು, ಪೈಲ್ವಾನ್, ರೈಡರ್, ರಾಬರ್ಟ್, ಸಖತ್, ಸಲಗ, ಸೀತಾರಾಮ ಕಲ್ಯಾಣ, ಶಿವಾಜಿ ಸುರತ್ಕಲ್, ವಿಕ್ರಾಂತ್ ರೋಣ, ವಿಂಡೋಸೀಟ್, ಭರಾಟೆ, ದಿಯಾ, ದೃಶ್ಯ-2, ಗಾಳಿಪಟ, ಗರುಡಗಮನ ವೃಷಭ ವಾಹನ, ಜಂಟಲ್ ಮನ್, ಗ್‌ಟಿ ಬಾಕ್ಸ್, ಹರಿಕಥೆ ಅಲ್ಲ ಗಿರಿಕಥೆ, ಹೀರೋ, ಇಂಡಿಯಾ ವರ್ಸಸ್ ಇಂಗ್ಲೆಂಡ್, ಇನ್ಸ್‌ಪೆಕ್ಟರ್ ವಿಕ್ರಂ, ಕವಚ, ಕವಲುದಾರಿ, ಕೆಜಿಎಫ್ 1, ಕೆಜಿಎಫ್ 2, ಲವ್ ಮಾಕ್ಟೇಲ್ 1, ಲವ್ ಮಾಕ್ಟೇಲ್-2, ಮದಗಜ, ಮುಗಿಲುಪೇಟೆ.

    ಭಾರತೀಯ ಚಿತ್ರಗಳೆಂದರೆ?

    ಭಾರತೀಯ ಚಿತ್ರಗಳೆಂದರೆ?

    ದಿ ಕ್ಲೌಡ್ ಅಂಡ್ ದಿ ಮ್ಯಾನ್, ಮನುಸಂಗಡ, ಮಿಂಚುಹುಳು, ಮೂಕಜ್ಜಿಯ ಕನಸುಗಳು, ನೀಲಿಹಕ್ಕಿ, ನೋಯ್, ಪದಕ, ಸಾರಾ ವಜ್ರ, ಉರಿಯಟ್ಟು, ವಿಡೋ ಆನ್ ಸೈಲೆನ್ಸ್, ಎ ಡಾಗ್ ಅಂಡ್ ಹಿಸ್ ಮ್ಯಾನ್, ಹರಿವ ನದಿಗೆ ಮೈಯೆಲ್ಲಾ ಕಾಲು, ಅಡಿಯುಗೊಡಾರ್ಡ್, ಅಗ್ನಿವರ್ಷ, ಐಸೇ ಹಿ, ಬೈ, ಬೂಂಬಾ ರೈಡ್, ಈ ಮಣ್ಣು, ಘೋಡೇ ಕೋ ಜಲೇಬಿ ಖಿಲಾನೆ ಲೇಜಾರಿಯಾ ಹೂಂ, ಹಾರುವ ಹಂಸಗಳು, ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ, ಇಂಟು ದಿ ಮಿಸ್ಟ್.

    ಪ್ರದರ್ಶನಗೊಳ್ಳಲಿರುವ ವಿಶ್ವ ಚಿತ್ರಗಳು

    ಪ್ರದರ್ಶನಗೊಳ್ಳಲಿರುವ ವಿಶ್ವ ಚಿತ್ರಗಳು

    ಎವೆರಿಥಿಂಗ್ ಎವೆರಿವೇರ್ ಆಲ್ ಅಟ್ ಒನ್ಸ್, ಎಕೈಲ್, ಐ ಡೇನಿಯಲ್ ಬ್ಲೇಕ್, ಲವ್‌ಲೆಸ್, ನಾರ್ಥ್ ಸೀ, ಪ್ಯಾರಲೆಲ್ ಮದರ್ಸ್, ಪ್ಯಾರಾಸೈಟ್, ಪೋಟ್ರೇಟ್ ಆಫ್ ಎ ಲೇಡಿ ಆನ್ ಫೈರ್, ಸಾರಿ ವಿ ಮಿಸ್ಡ್ ಯೂ, ಸ್ಪೆನ್ಸರ್, ದಿ ಬೈಸಿಕಲ್ ಥೀವ್ಸ್, ದಿ ಲಾಸ್ಟ್ ಎಕ್ಸೆಕ್ಯೂಷನ್, ದಿ ಸೆವೆಂತ್ ಸೀಲ್, ದಿ ಟ್ಯೂರಿನ್ ಹಾರ್ಸ್, ಥ್ರೋನ್ ಆಫ್ ಬ್ಲಡ್, ಅನ್‌ಡೈನ್, ವ್ಯಾಗಾಬಾಂಡ್, ವಾಕಬೌಟ್, ವೆನ್ ಹಿಟ್ಲರ್ ಸ್ಟೋಲ್ ಪಿಂಕ್ ರ್ಯಾಬಿಟ್, ವೈಫ್ ಆಫ್ ಎ ಸ್ಪೈ, ವಿಮೆನ್ ಇನ್ ದಿ ಡ್ಯೂನ್ಸ್, ಜೆಂಟಲ್ ಕ್ರೀಚರ್, ಎ ಹೀರೋ, ಅಡಲ್ಟ್ಸ್ ಇನ್ ದಿ ರೂಮ್, ಅನದರ್ ರೌಂಡ್, ಆಶ್ ಈಸ್ ದಿ ಪ್ಯೂರೆಸ್ಟ್ ವೈಟ್, ಕ್ಯಾಪರ್ನಾಮ್.

    English summary
    Mysore Dasara Film festival starting from September 26. CM Bommai and Shiva Rajkumar will inaugurate the function. Many Kannada, Indian and International movies scheduled to show.
    Friday, September 16, 2022, 17:39
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X