»   » 'ಮಲ್ಟಿಪ್ಲೆಕ್ಸ್' ಇತಿಹಾಸದಲ್ಲಿ ಯಾರು ಮಾಡಿರದ ದಾಖಲೆ ಬರೆದ 'ಚಕ್ರವರ್ತಿ'

'ಮಲ್ಟಿಪ್ಲೆಕ್ಸ್' ಇತಿಹಾಸದಲ್ಲಿ ಯಾರು ಮಾಡಿರದ ದಾಖಲೆ ಬರೆದ 'ಚಕ್ರವರ್ತಿ'

Posted By:
Subscribe to Filmibeat Kannada

'ಮಲ್ಟಿಪ್ಲೆಕ್ಸ್'ಗಳಲ್ಲಿ ಕನ್ನಡ ಸಿನಿಮಾಗಳಿಗೆ ಅನ್ಯಾಯವಾಗುತ್ತಿದೆ. ಕನ್ನಡ ಚಿತ್ರಗಳಿಗೆ ಹೆಚ್ಚಿನ ಪ್ರಾತಿನಿಧ್ಯ ಕೊಡುತ್ತಿಲ್ಲ. ಕನ್ನಡ ಸಿನಿಮಾಗಳನ್ನ ಕಡೆಗಣಿಸುತ್ತಿದೆ ಎಂಬ ಆರೋಪಗಳ ಮಧ್ಯೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಚಕ್ರವರ್ತಿ' ಹೊಸ ದಾಖಲೆ ಬರೆದಿದೆ.['ಚಕ್ರವರ್ತಿ' ಬಗ್ಗೆ ಇದ್ದ ಡೌಟ್ ಕ್ಲಿಯರ್! ]

ರಾಜ್ಯಾದ್ಯಂತ ದಾಖಲೆಯ ಚಿತ್ರಮಂದಿರಗಳಲ್ಲಿ ರಿಲೀಸ್ ಆಗುತ್ತಿರುವ 'ಚಕ್ರವರ್ತಿ' ಮೈಸೂರಿನಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ. ಅದೇನದು ಅಂತ ಮುಂದೆ ಓದಿ....

'ಮಲ್ಟಿಪ್ಲೆಕ್ಸ್'ನಲ್ಲಿ ಮಧ್ಯರಾತ್ರಿ ಶೋ!

ಮೈಸೂರಿನಲ್ಲಿ 'ಡಿಆರ್ ಎಸ್ ಸಿನಿಮಾಸ್' ಚಿತ್ರಮಂದಿರದಲ್ಲಿ ದರ್ಶನ್ ಅವರ 'ಚಕ್ರವರ್ತಿ' ಸಿನಿಮಾ 13ನೇ ತಾರೀಖು ಮಧ್ಯರಾತ್ರಿ ಬಿಡುಗಡೆಯಾಗುತ್ತಿದೆಯಂತೆ.['ಬಾಹುಬಲಿ' ಮೀರಿಸಿದ ದರ್ಶನ್ 'ಚಕ್ರವರ್ತಿ' ]

ಕನ್ನಡ ಇತಿಹಾಸದಲ್ಲಿ ಇದು ಮೊದಲು

ಮಲ್ಟಿಪ್ಲೆಕ್ಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಕನ್ನಡ ಚಿತ್ರವೊಂದು ಮಧ್ಯರಾತ್ರಿ ಪ್ರದರ್ಶನವಾಗುತ್ತಿರುವುದು. ದಾಖಲೆಗಳ ಪ್ರಕಾರ ಇದುವರೆಗೂ ಮಲ್ಟಿಪ್ಲೆಕ್ಸ್ ಗಳಲ್ಲಿ ಯಾವುದೇ ಚಿತ್ರ ಮಧ್ಯರಾತ್ರಿ ಬಿಡುಗಡೆಯಾಗಿಲ್ಲ.[ದಿನಕರ್ 'ಕೇಡಿ' ಆಗಲು ಕಾರಣ 'ಆ' ಒಬ್ಬ ವ್ಯಕ್ತಿ! ಯಾರದು? ]

ಮಧ್ಯರಾತ್ರಿ 'ಚಕ್ರವರ್ತಿ' ರಿಲೀಸ್

ಕೇವಲ ಮೈಸೂರಿನ ಮಲ್ಟಿಪ್ಲೆಕ್ಸ್'ಗಳಲ್ಲಿ ಮಾತ್ರವಲ್ಲ, ರಾಜ್ಯದ ಹಲವು ಚಿತ್ರಮಂದಿರಗಳಲ್ಲಿ ಚಕ್ರವರ್ತಿ ಮಧ್ಯರಾತ್ರಿ ರಿಲೀಸ್ ಆಗುತ್ತಿದ್ದು, ದಿನದ 24 ಗಂಟೆಯೂ ಸಿನಿಮಾ ಪ್ರದರ್ಶನವಾಗಲಿದೆ.[ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ 'ಚಕ್ರವರ್ತಿ' ]

ಏಪ್ರಿಲ್ 14ಕ್ಕೆ 'ಚಕ್ರವರ್ತಿ' ಅಬ್ಬರ

'ಚಕ್ರವರ್ತಿ' ಇದೇ ತಿಂಗಳು 14ರಂದು ರಾಜ್ಯಾದ್ಯಂತ ದಾಖಲೆಯ ಚಿತ್ರಮಂದಿರದಲ್ಲಿ ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನ ಸಿದ್ದಾಂತ್ ನಿರ್ಮಾಣ ಮಾಡಿದ್ದಾರೆ. ದರ್ಶನ್, ದಿನಕರ್ ತೂಗುದೀಪ, ಸೃಜನ್ ಲೋಕೇಶ್, ಕುಮಾರ್ ಬಂಗಾರಪ್ಪ, ಚಾರುಲತಾ, ದೀಪಾ ಸನ್ನಿಧಿ, ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ.

English summary
First time in Kannada Film History Mysuru Multiplex Runs an Early Morning Shows for Darshan Starrer Chakravarthy Movie.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada