Hamsalekha Health : ಎದೆನೋವಿನಿಂದ ಆಸ್ಪತ್ರೆಗೆ ದಾಖಲಾದ ನಾದಬ್ರಹ್ಮ ಹಂಸಲೇಖ!
ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಹಂಸಲೇಖ ಅವರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಗ್ಯಾಸ್ಟಿಕ್ ಸಮಸ್ಯೆಯಿಂದಾಗಿ ಎದೆ ನೋವು ಕಾಣಿಸಿಕೊಂಡಿರುವುದಾಗಿ ಮಾಹಿತಿ ಸಿಗುತ್ತಿದೆ. ಈ ಹಿಂದೆ ಹಂಸಲೇಖ ಓಪನ್ ಹಾರ್ಟ್ ಸರ್ಜರಿ ಮಾಡಿಸಿ ಕೊಂಡಿರುವ ಕಾರಣ ಅಭಿಮಾನಿಗಳು ಕೊಂಚ ಆತಂಕಗೊಂಡಿದ್ದಾರೆ.

ರಾಜಾಜಿನಗರದ ಫಸ್ಟ್ ಬ್ಲಾಕ್‌ನಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ನಾದಬ್ರಹ್ಮ ಹಂಸಲೇಖ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಜನರಲ್ ವಾರ್ಡ್‌ನಲ್ಲೇ ಒಂದು ದಿನ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ವೈದ್ಯರ ಸಲಹೆ ಮೇರೆಗೆ ಒಂದು ದಿನದ ಮಟ್ಟಿಗೆ ಆಸ್ಪತ್ರೆಯಲ್ಲಿ ನಾದಬ್ರಹ್ಮ ಉಳಿದುಕೊಳ್ಳಲಿದ್ದಾರೆ. ತಮ್ಮ ಸಂಗೀತ ಹಾಗೂ ಸಾಹಿತ್ಯದಿಂದ ನಾದಬ್ರಹ್ಮ ಅಸಂಖ್ಯಾತ ಅಭಿಮಾನಗಳ ಮನಗೆದಿದ್ದಾರೆ.
More from Filmibeat
English summary
Nadabrahma Hamsalekha hospitalised due to chest Pain. Know More.


Click it and Unblock the Notifications











