Nagabhushana: ಕಾರು ಅಪಘಾತ ಪ್ರಕರಣದಲ್ಲಿ ನಟ ನಾಗಭೂಷಣ್​ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು!?

ನಟ ನಾಗಭೂಷಣ್ ಕಾರು ಅಪಘಾತ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ. ಈಗಾಗಲೇ ಅವರ ಮೇಲೆ ಒಂದು ಎಫ್‌ಐಆರ್ ದಾಖಲಾಗಿದ್ದು, ಮತ್ತೊಂದು ಎಫ್‌ಐಆರ್ ದಾಖಲಾಗಲಿದೆ. ನಾಗಭೂಷಣ ಅವರ ಕಾರು ಸೆಪ್ಟೆಂಬರ್ 30ರ ತಡ ರಾತ್ರಿ ದಂಪತಿಗೆ ಡಿಕ್ಕಿ ಹೊಡೆದಿತ್ತು. ಇದರಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.

ಕೋಣನಕುಂಟೆ ಕ್ರಾಸ್ ಬಳಿ ಫುಟ್ ಪಾತ್‌ ಮೇಲೆ ನಡೆದುಕೊಂಡು ಹೋಗುತ್ತಿದ್ದ ದಂಪತಿಗೆ ನಟ ನಾಗಭೂಷಣ್ ಕಾರು ಡಿಕ್ಕಿ ಹೊಡೆದಿದೆ. ಈ ವೇಳೆ 48 ವರ್ಷದ ಪ್ರೇಮ ಎಂಬುವವರು ಸಾವನ್ನಪ್ಪಿದ್ದಾರೆ. ಅವರ ಪತಿ ಕೃಷ್ಣ ಬಿ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಕುಮಾರಸ್ವಾಮಿ ಲೇಔಟ್​ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Nagabhushana: Another FIR may register against actor nagabhushana in accident case

ನಟ ನಾಗಭೂಷಣ್​ ವಿರುದ್ಧ ಮತ್ತೊಂದು ಎಫ್‌ಐಆರ್ ಸಾಧ್ಯತೆ

ಒಂದು ಎಫ್‌ಐಆರ್‌ನಲ್ಲಿ ಈಗಾಗಲೇ ಸ್ಟೇಷನ್ ಬೇಲ್ ಪಡೆದಿರುವ ನಟನ ವಿರುದ್ಧ ಎರಡನೇ ಎಫ್‌ಐಆರ್ ದಾಖಲಾಗುವ ಸಾಧ್ಯತೆಯಿದೆ. ನಟ ನಾಗಭೂಷಣ್ ಅವರ​ ಕಾರು ಅತೀ ವೇಗವಾಗಿ ಬಂದು ದಂಪತಿಗೆ ಡಿಕ್ಕಿ ಹೊಡೆದ ಬಳಿಕ ಕಾರು ವಿದ್ಯುತ್ ಕಂಬಕ್ಕೆ ಜೋರಾಗಿ ಗುದ್ದಿದೆ. ಹೀಗಾಗಿ ಕಾರು ಡಿಕ್ಕಿಯಿಂದ ವಿದ್ಯುತ್ ಕಂಬಕ್ಕೂ ಕೂಡ ಹಾನಿಯಾಗಿದೆ. ಈ ಹಿನ್ನೆಲೆ ವಿದ್ಯುತ್ ಕಂಬಕ್ಕೆ ಹಾನಿಯಾದ ಬಗ್ಗೆ ಬೆಸ್ಕಾಂ ಅಧಿಕಾರಿಗಳು ನಟ ನಾಗಭೂಷಣ್ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಿಸಲಿದ್ದಾರೆ.

ಕಾರು ಡಿಕ್ಕಿಯಿಂದ ವಿದ್ಯುತ್ ಕಂಬಕ್ಕೆ ಹಾನಿಯಾಗಿರುವ ಬಗ್ಗೆ ಟ್ರಾಫಿಕ್ ಪೊಲೀಸರು ಬೆಸ್ಕಾಂ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಈ ಕಾರಣದಿಂದಾಗಿ ಮಂಗಳವಾರ (ಅಕ್ಟೋಬರ್ 3) ಬೆಸ್ಕಾಂ ಅಧಿಕಾರಿಗಳು ನಟ ನಾಗಭೂಷಣ್ ವಿರುದ್ಧ ದೂರು ನೀಡುವ ಸಾಧ್ಯತೆಯಿದೆ. ಈಗಾಗಲೇ ಹಿಟ್ ಅಂಡ್ ರನ್ ದೂರು ದಾಖಲಿಸಿರುವ ಕುಮಾರಸ್ವಾಮಿ ಲೇಔಟ್​ ಸಂಚಾರ ಪೊಲೀಸ್ ಠಾಣೆ ಪೊಲೀಸರು ಮತ್ತೊಂದು ಎಫ್ಐಆರ್ ದಾಖಲಿಸಲು ನಿರ್ಧರಿಸಿದ್ದಾರೆ.

Nagabhushana: Another FIR may register against actor nagabhushana in accident case

ನಟ ನಾಗಭೂಷಣ್ ವಿಚಾರಣೆ

ತಾನೇ ಅಪಘಾತ ಮಾಡುವುದಾಗಿ ಒಪ್ಪಿಕೊಂಡಿರುವ ನಟ ನಾಗಭೂಷಣ್ ಅವರಿಗೆ ಈಗಾಗಲೇ ಸ್ಟೇಷನ್ ಬೇಲ್ ನೀಡಿ ಕಳುಹಿಸಲಾಗಿದೆ. ಅಪಘಾತಕ್ಕೆ ಕಾರಣವಾದ ಕಿಯಾ ಸೆಲ್ಟೋಸ್ ಕಾರಿನ ಐಎಂವಿ ಟೆಸ್ಟ್ ಮಾಡಲು ಆರ್​ಟಿಓ ಅಧಿಕಾರಿಗಳಿಗೆ ಪೊಲೀಸರು ಪತ್ರ ಬರೆದಿದ್ದಾರೆ. ಜೊತೆಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದು, ಅಕ್ಟೋಬರ್ 3 ರಂದು ಹೇಳಿಕೆ ದಾಖಲಿಸಲು ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.

More from Filmibeat

English summary
Another FIR may register against actor nagabhushana in accident case.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X