Just In
Don't Miss!
- Sports
ಸಯ್ಯದ್ ಮುಷ್ತಾಕ್ ಅಲಿ: ಪಂಜಾಬ್ ವಿರುದ್ಧ ಕರ್ನಾಟಕಕ್ಕೆ ಹೀನಾಯ ಸೋಲು
- News
ರೈತ ಪ್ರತಿಭಟನೆ ಹತ್ತಿಕ್ಕುವ ಪ್ರಯತ್ನ ಮಾಡಿದರೆ ದೊಡ್ಡ ಬೆಲೆ ತೆರಬೇಕಾಗುತ್ತದೆ:ಸಿದ್ದರಾಮಯ್ಯ
- Finance
ಟಿಕ್ಟಾಕ್ ಸೇರಿದಂತೆ 59 ಚೀನಿ ಆ್ಯಪ್ಗಳ ಮೇಲೆ ಶಾಶ್ವತ ನಿಷೇಧ?
- Automobiles
ಭಾರೀ ಬದಲಾವಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ ನ್ಯೂ ಜನರೇಷನ್ ಸ್ಕಾರ್ಪಿಯೋ
- Lifestyle
ನೀವು ಬಳಸಬಹುದಾದ ಡೈರಿ ಉತ್ಪನ್ನವಲ್ಲದ ಹಾಲುಗಳ ಬಗ್ಗೆ ಇಲ್ಲಿದೆ ಮಾಹಿತಿ
- Education
Republic Day Speech And Essay Ideas: ಗಣರಾಜ್ಯೋತ್ಸವ ಪ್ರಯುಕ್ತ ಭಾಷಣ ಮತ್ತು ಪ್ರಬಂಧ ಬರೆಯಲು ಇಲ್ಲಿದೆ ಮಾಹಿತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
'ಪೊಗರು' ಸಿನಿಮಾ ಬಳಿಕ ವರ್ಕೌಟ್ ಪ್ರಾರಂಭ ಮಾಡಿದ ನಿರ್ದೇಶಕ ನಂದಕಿಶೋರ್
ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ನಂದ ಕಿಶೋರ್ ಸದ್ಯ ಪೊಗರು ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ಪೊಗರು ಸದ್ಯ ರಿಲೀಸ್ ಗೆ ರೆಡಿಯಾಗುತ್ತಿದೆ. ಪೊಗರು ಮುಗಿಯುತ್ತಿದ್ದಂತೆ ನಿರ್ದೇಶಕ ನಂದಕಿಶೋರ್ ವರ್ಕೌಂಟ್ ಶುರು ಮಾಡಿದ್ದಾರೆ.
'ವಿಕ್ಟರಿ' ಸಿನಿಮಾ ಮೂಲಕ ನಿರ್ದೇಶನಕ್ಕೆ ಇಳಿದ ನಂದಕಿಶೋರ್ ಕನ್ನಡದ ಯಶಸ್ವಿ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ನಂದ ಕಿಶೋರ್ ಕನ್ನಡ ಸಿನಿಮಾರಂಗದ ಖ್ಯಾತ ಖಳನಟ ಸುಧೀರ್ ಅವರ ಮೊದಲನೇ ಪುತ್ರ. ಈಗಾಗಲೇ ಅನೇಕ ಸಿನಿಮಾಗಳನ್ನು ನಿರ್ದೇಶನ ಮಾಡಿ ಸೈ ಎನಿಸಿಕೊಂಡಿರುವ ನಂದಕಿಶೋರ್ ಇದೀಗ ಫಿಟ್ನೆಸ್ ಕಡೆ ಗಮನ ಹರಿಸಿದ್ದಾರೆ.
ಧ್ರುವ ಸರ್ಜಾ 'ಪೊಗರು' ಸಿನಿಮಾ ಬಿಡುಗಡೆಗೆ ಎರಡು ದಿನಾಂಕ ಫಿಕ್ಸ್
ಸುಮಾರು 140ಕೆಜಿ ಇರುವ ನಂದ ಕಿಶೋರ್ ತೂಕ ಇಳಿಸಿ ಫಿಟ್ ಆಗೋ ಪ್ರಯತ್ನ ಮಾಡುತ್ತಿದ್ದಾರೆ. ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವ ವಿಡಿಯೋಗಳನ್ನು ನಂದ ಕಿಶೋರ್ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇನ್ನು ಫಿಟ್ ಆಗುವ ಜೊತೆಗೆ ನಂದಕಿಶೋರ್ ಮುಂದಿನ ಸಿನಿಮಾದ ನಿರ್ದೇಶನಕ್ಕೂ ಸಜ್ಜಾಗುತ್ತಿದ್ದಾರೆ.
ಪೊಗರು ಬಳಿಕ ಮತ್ತೆ ಧ್ರುವ ಸರ್ಜಾ ಜೊತೆ ಸಿನಿಮಾ ಮಾಡಲು ತಯಾರಿನಡೆಸಿರುವ ನಂದ ಕಿಶೋರ್ ಹೊಸ ಸಿನಿಮಾಗೆ ದುಬಾರಿ ಎಂದು ಟೈಟಲ್ ಫಿಕ್ಸ್ ಮಾಡಿದ್ದಾರೆ. ನಂದಕಿಶೋರ್ ನಿರ್ದೇಶನಕ್ಕೆ ಇಳಿಯುವ ಮೊದಲು ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದಾರೆ. ವಿಕ್ಟರಿ, ಅಧ್ಯಕ್ಷ, ರನ್ನ, ಮುಕುಂದ ಮುರಾನಿ, ಟೈಗರ್ ಸೇರಿದಂತೆ ಅನೇಕ ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿದ್ದಾರೆ.
ನಂದ ಕಿಶೋರ್ ನಿರ್ದೇಶನದ ಪೊಗರು ಸಿನಿಮಾ ಡಿಸೆಂಬರ್ 25ಕ್ಕೆ ರಿಲೀಸ್ ಆಗಲಿದೆ ಎನ್ನುವ ಮಾತು ಕೇಳಿಬರುತ್ತಿದೆ. ಡಿಸೆಂಬರ್ ಗೆ ಬಿಡುಗಡೆ ಮಾಡದಿದ್ದರೆ ಪೊಗರು ಸಂಕ್ರಾಂತಿಗೆ ಬರುವ ಸಾಧ್ಯತೆ ಇದೆ.