ದುನಿಯಾ ವಿಜಯ್ ತೆಲುಗು ಚಿತ್ರದ ಮುಹೂರ್ತ ನಿಗದಿ!
ಸ್ಯಾಂಡಲ್‌ವುಡ್ ನಟ ದುನಿಯಾ ವಿಜಯ್ ತೆಲುಗು ಚಿತ್ರ ರಂಗಕ್ಕೆ ಎಂಟ್ರಿ ಕೊಡುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ತೆಲುಗಿನ ಸ್ಟಾರ್ ನಟ ನಂದ ಮೂರಿ ಬಾಲಕೃಷ್ಣ ಅವರ ಮುಂದಿನ ಚಿತ್ರದಲ್ಲಿ ನಟ ದುನಿಯಾ ವಿಜಯ್ ಅಭಿನಯಿಸುತ್ತಿದ್ದಾರೆ. ಈ ಚಿತ್ರಕ್ಕೆ ಕ್ರ್ಯಾಕ್ ಡೈರೆಕ್ಟರ್ ಗೋಪಿ ಚಂದ್ ಮಾಲಿನೇನಿ ನಿರ್ದೇಶನ ಮಾಡುತ್ತಿದ್ದಾರೆ. ತಾತ್ಕಾಲಿಕವಾಗಿ ಚಿತ್ರಕ್ಕೆ ಎನ್‌ಬಿಕೆ 107 ಎನ್ನುವ ಟೈಟಲ್ ಇಡಲಾಗಿದೆ. ಈ ಸಿನಿಮಾದಲ್ಲಿ ಶ್ರುತಿ ಹಾಸನ್ ನಾಯಕಿಯಾಗಿ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ ಎನ್ನುವ ಸುದ್ದಿ ಬಂದಿತ್ತು.
ಈಗ ಈ ಚಿತ್ರದ ಮುಹೂರ್ತ ಸಮಾರಂಭಕ್ಕೆ ದಿನಾಂಕ ನಿಗದಿಯಾಗಿದೆ. ಇದೇ ನವೆಂಬರ್ 13ರಂದು ಎನ್‌ಬಿಕೆ 107 ಚಿತ್ರದ ಮುಹೂರ್ತ ನೆರವೇರಲಿದೆ. ಈ ವಿಚಾರವನ್ನು ಚಿತ್ರ ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್ ಅಧಿಕೃತಗೊಳಿಸಿದ್ದಾರೆ. ಇನ್ನೂ ಈ ಚಿತ್ರದಲ್ಲಿ ಕನ್ನಡದ ನಟ ದುನಿಯಾ ವಿಜಯ್ ಅಭಿನಯಿಸುತ್ತಾರೆ ಎನ್ನುವ ವಿಚಾರವನ್ನು ಚಿತ್ರತಂಡ ರಿವೀಲ್ ಮಾಡಿಲ್ಲ. ನವೆಂಬರ್ 13 ರಂದು ಮುಹೂರ್ತ ಸಮಾರಂಭದ ವೇಳೆಯೇ ದುನಿಯಾ ವಿಜಯ್ ಪಾತ್ರದ ಬಗ್ಗೆ ಚಿತ್ರ ತಂಡ ಅಧಿಕೃತ ಮಾಹಿತಿ ನೀಡಲಿದೆ.
ಸಲಗ ಚಿತ್ರದ ಬಳಿಕ ತೆಲುಗು ಚಿತ್ರರಂಗದ ಕಡೆ ವಿಜಯ್ ಹೆಜ್ಜೆ ಇಟ್ಟಿದ್ದಾರೆ. ಇದು ದುನಿಯಾ ವಿಜಯ್ ಸಿನಿಮಾ ಜರ್ನಿಯಲ್ಲಿ ವಿಭಿನ್ನ ಪ್ರಯೋಗವೆಂದು ಹೇಳಬಹುದು. ಯಾಕೆಂದರೆ ವಿಜಯ್ ಈ ಚಿತ್ರದಲ್ಲಿ ಖಳನಾಯಕನ ಪಾತ್ರ ಮಾಡುತ್ತಿದ್ದಾರೆ. ನಂದಮೂರಿ ಬಾಲಕೃಷ್ಣ ಎದುರಿಗೆ, ಕನ್ನಡದ ನಟ ದುನಿಯಾ ವಿಜಯ್ ಅಬ್ಬರಿಸಲಿದ್ದಾರೆ. ಈ ಸುದ್ದಿ ಟಾಲಿವುಡ್ ಮತ್ತು ಸ್ಯಾಂಡಲ್‌ವುಡ್‌ನಲ್ಲಿ ಹರಿದಾಡುತ್ತಿದೆ. ಆದರೆ ಚಿತ್ರ ತಂಡದಿಂದ ಅಧಿಕೃತ ಮಾಹಿತಿ ಹೊರ ಬರುವುದಕ್ಕೆ ಮಾತ್ರ ಬಾಕಿ ಇದೆ. ಚಿತ್ರಕ್ಕೆ ಮೈತ್ರಿ ಮೂವಿ ಮೇಕರ್ಸ್ ಬಂಡವಾಳ ಹೂಡಿದ್ದಾರೆ.

ಈ ಚಿತ್ರ ಪಕ್ಕಾ ಮಾಸ್ ಎಂಟರ್ಟೈನರ್ ಸಿನಿಮಾ ಆಗಿರಲಿದೆ. ರಾಯಲಸೀಮಾದಲ್ಲಿ ನಡೆಯುವ ಕಥೆ ಇದು. ಈ ಚಿತ್ರದ ಕಥೆ ನೈಜ ಘಟನೆಯನ್ನು ಆಧರಿಸಿದ ಕಥೆ ಎನ್ನಲಾಗಿದೆ. ಚಿತ್ರದ ಮುಹೂರ್ತದ ಬಳಿಕ ಸಿನಿಮಾ ಚಿತ್ರೀಕರಣ ಆರಂಭಿಸುವ ಸಾಧ್ಯತೆ ಇದೆ.
ಸದ್ಯ ದುನಿಯಾ ವಿಜಯ್ ಸಲಗ ಚಿತ್ರದ ಯಶಸ್ಸಿನ ಖುಷಿಯಲ್ಲಿದ್ದಾರೆ. ಮೊದಲ ಬಾರಿಗೆ ನಿರ್ದೇಶಕನಾಗಿ ಬಂಪರ್ ಲಾಟರಿ ಹೊಡೆದಿದ್ದಾರೆ ದುನಿಯಾ ವಿಜಯ್. ದುನಿಯಾ ವಿಜಯ್ ಮೊದಲನೇ ಬಾರಿಗೆ ನಿರ್ದೇಶನ ಮಾಡಿದ ಸಲಗ ಸೂಪರ್ ಹಿಟ್ ಆಗಿದೆ. ಈ ಸಲಗ ದುನಿಯಾ ವಿಜಯ್ ಪಾಲಿಗೆ ಮತ್ತೆ ಅದೃಷ್ಟದ ಬಾಗಿಲು ತೆರೆದಿದೆ. ಇದೇ ಖುಷಿಯಲ್ಲಿ ನಟ ದುನಿಯಾ ವಿಜಯ್ ಮೊದಲ ಬಾರಿಗೆ ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ತಯಾರಿ ನಡೆಸಿದ್ದಾರೆ.

ದುನಿಯಾ ವಿಜಯ್ ಅವರನ್ನು ನಾಯಕನಾಗಿ ನೋಡಿದ ಪ್ರೇಕ್ಷಕರು, ಖಳ ನಾಯಕನಾಗಿ ಹೇಗಿ ಅಬ್ಬರಲಿದ್ದಾರೆ ಎನ್ನುವ ಕುತೂಹಲ ಹುಟ್ಟಿಕೊಂಡಿದೆ. ಭಿನ್ನ ಪಾತ್ರಗಳಿಗೆ ಜೀವ ತುಂಬುವುದು ಕಲಾವಿದನ ತಾಕತ್ತು. ಅದನ್ನ ನಟ ದುನಿಯಾ ವಿಜಯ್ ಈಗಾಗಲೇ ಹಲವು ಪಾತ್ರಗಳಲ್ಲಿ ತೋರಿಸಿದ್ದಾರೆ. ಈಗ ಖಳನಟನಾಗಿ ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ. ಈ ಚಿತ್ರದಲ್ಲಿ ವಿಜಯ್ ಹೇಗೆ ಇರಲಿದೆ ಎನ್ನುವ ಕುತೂಹಲ ಕೂಡ ಹುಟ್ಟಿ ಕೊಂಡಿದೆ. ಇದೆಲ್ಲಾ ಕುತೂಹಲಗಳಿಗೂ ನವೆಂಬರ್ 13 ರಂದು ತೆರೆ ಬೀಳಲಿದೆ.


Click it and Unblock the Notifications











