ಟೈಟಲ್‌ನಲ್ಲೇ ಕುತೂಹಲ ಮೂಡಿಸಿದ 'ಕೋನಾರ್ಕ್'; ದಕ್ಷಿಣ ಆಫ್ರಿಕಾದಲ್ಲಿ ಶೂಟಿಂಗ್

ಸ್ಯಾಂಡಲ್‌ವುಡ್‌ನಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಸಿನಿಮಾ ಶೂಟಿಂಗ್ ಮಾಡಿದ್ದು ತೀರಾ ವಿರಳ. ಆದ್ರೀಗ ಸಿನಿಮಾ ತಂಡವೊಂದು ಮೊದಲ ಹಂತದಲ್ಲಿಯೇ ವಿದೇಶದಲ್ಲಿ ಶೂಟಿಂಗ್ ಮಾಡಿವುದಕ್ಕೆ ಸಜ್ಜಾಗಿದೆ. ಅದೂ ದಕ್ಷಿಣ ಆಫ್ರಿಕಾದಲ್ಲಿ. ಅಂದ್ಹಾಗೆ ಆ ಸಿನಿಮಾದ ಹೆಸರು 'ಕೊನಾರ್ಕ್'.

'ನಾನು ಮತ್ತು ಗುಂಡ' ಎನ್ನುವ ಎಮೋಷನಲ್ ಸಿನಿಮಾ ನೀಡಿದ್ದ ನಿರ್ದೇಶಕ ಶ್ರೀನಿವಾಸ್ ತಿಮ್ಮಯ್ಯ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಇನ್ನು ಮಾವಿನಮರ ಫಿಲಂಸ್ ಬ್ಯಾನರ್‌ನಲ್ಲಿ 'ಕೊನಾರ್ಕ್' ಸಿನಿಮಾ ನಿರ್ಮಾಣ ಆಗುತ್ತಿದೆ. ಈ ಸಿನಿಮಾದಲ್ಲಿ ಧನುಷ್ ಹಾಗೂ ಫಾಲ್ಗುಣಿ ಖನ್ನಾ ನಾಯಕ-ನಾಯಕಿಯಾಗಿ ನಟಿಸುತ್ತಿದ್ದಾರೆ.

Newcomers Kannada Movie Konark to Begin Shooting in South Africa

'ಕೊನಾರ್ಕ್' ಸಿನಿಮಾದ ಮುಹೂರ್ತ ಇತ್ತೀಚೆಗೆ ಬೆಂಗಳೂರಿನ ನಾಗರಭಾವಿಯ ಶ್ರೀದುರ್ಗಪರಮೇಶ್ವರಿ ದೇವಸ್ಥಾನದಲ್ಲಿ ನಡೆದಿದೆ. ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಆರಂಭ ಫಲಕ ತೋರಿಸಿ 'ಕೊನಾರ್ಕ್' ಸಿನಿಮಾಗೆ ಚಾಲನೆ ನೀಡಿದ್ದಾರೆ. ಈ ವೇಳೆ ಸ್ಯಾಂಡಲ್‌ವುಡ್ ಹಾಗೂ ಬೇರೆ ಬೇರೆ ಕ್ಷೇತ್ರಗಳಿಂದ ಸಾಕಷ್ಟು ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಈ ಮುಹೂರ್ದಲ್ಲಿ ಭಾಗಿಯಾಗಿದ್ದರು. ಈ ವೇಳೆ ತಂಡ ತಮ್ಮ ಸಿನಿಮಾದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

'ಕೊನಾರ್ಕ್' ಸಿನಿಮಾದ ಕಥೆ ರೆಡಿಯಾಗುವುದಕ್ಕೆ ಎರಡು ವರ್ಷಗಳ ಕಾಲ ಬೇಕಾಯಿತು ಎಂದು ನಿರ್ದೇಶಕ ಶ್ರೀನಿವಾಸ್ ತಿಮ್ಮಯ್ಯ ಹೇಳಿಕೊಂಡಿದ್ದಾರೆ. "ಕೊನಾರ್ಕ್ ಎಂದರೆ ಸೂರ್ಯನಿಂದ ಭೂಮಿಗೆ ಬೀಳುವ ಬೆಳಕು. ನಮ್ಮ ಚಿತ್ರದ ಕಥೆಗೆ ಇದೇ ಸೂಕ್ತ ಶೀರ್ಷಿಕೆ. ಇನ್ನೂ ಧನುಷ್ ಈ ಚಿತ್ರದ ನಾಯಕನಾಗಿ, ಫಾಲ್ಗುಣಿ ಖನ್ನಾ ನಾಯಕಿಯಾಗಿ ನಟಿಸುತ್ತಿದ್ದಾರೆ‌. ಅಭಿಜಿತ್, ಹ್ಯಾರಿ ಜೋಶ್, ಸುಧಾರಾಣಿ, ರಮೇಶ್ ಇಂದಿರಾ, ಬಿ.ಸುರೇಶ್, ರಾಜ್ ದೀಪಕ್ ಶೆಟ್ಟಿ, ಯಶ್ ಶೆಟ್ಟಿ ಮುಂತಾದವರ ದೊಡ್ಡ ತಾರಾಬಳಗವಿದೆ‌‌. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಾನೇ ಬರೆದಿದ್ದೇನೆ. ಶ್ಯಾಮ್‌ ಸಿ ಎಸ್ ಸಂಗೀತ ನಿರ್ದೇಶನ, ಸಂಕೇತ್ ಮೈಸೂರು ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಡಾ||ರವಿವರ್ಮ, ಅರ್ಜುನ್, ಚೇತನ್ ಡಿಸೋಜ, ವಿನೋದ್, ವಿಕ್ರಮ್ ಸಾಹಸ ನಿರ್ದೇಶನ ಹಾಗೂ ಭೂಷಣ್,‌ ಮೊಯಿನ್ ಈ ಸಿನಿಮಾಗೆ ಕೊರಿಯೋಗ್ರಾಫಿ ಮಾಡುತ್ತಿದ್ದಾರೆ" ಎಂದು ನಿರ್ದೇಶಕ ಶ್ರೀನಿವಾಸ್ ತಿಮ್ಮಯ್ಯ ಹೇಳಿಕೊಂಡಿದ್ದಾರೆ.

ಹಾಗೇ "ಕೊನಾರ್ಕ್ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಅಕ್ಟೋಬರ್ ನಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಆರಂಭವಾಗಲಿದೆ. ಇಲ್ಲಿ ಶೂಟಿಂಗ್ ಮುಗಿಸಿದ ಬಳಿಕ ಮುಂಬೈ,ಗೋವಾ, ಕಾರವಾರ, ಹೊನ್ನಾವರ, ಬೆಂಗಳೂರು ಹಾಗೂ ಮೈಸೂರಿನಲ್ಲಿ ಚಿತ್ರೀಕರಣ ನಡೆಯಲಿದೆ. ಮಾವಿನಮರ ಫಿಲಂಸ್ ಮೂಲಕ ಕೆಲವು ಸ್ನೇಹಿತರು ಸೇರಿ ಈ ಸಿನಿಮಾವನ್ನು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ" ಎಂದು ನಿರ್ದೇಶಕ ಶ್ರೀನಿವಾಸ್ ತಿಮ್ಮಯ್ಯ ಬೆಂಬಲ ಕೋರಿದ್ದಾರೆ.

Newcomers Kannada Movie Konark to Begin Shooting in South Africa

ಸಿನಿಮಾದ ಹೀರೋ ಧನುಷ್ ಕೂಡ ಈ ಸಿನಿಮಾ ಒಪ್ಪಿದ್ದೇಕೆ? ಅನ್ನೋದನ್ನು ಹೇಳಿಕೊಂಡಿದ್ದಾರೆ. "ನಾನು ಹಾಗೂ ನಿರ್ದೇಶಕ ಶ್ರೀನಿವಾಸ್ ತಿಮ್ಮಯ್ಯ ಅವರು ಆರು ವರ್ಷಗಳ ಸ್ನೇಹಿತರು. ನಾನು ಮತ್ತು ಗುಂಡ ಸಿನಿಮಾದ ಸಮಯದಲ್ಲಿ ಅವರ ಕಾರ್ಯವೈಖರಿ ನೋಡಿದ ನನಗೆ, ಅವರ ನಿರ್ದೇಶನದಲ್ಲಿ ನಟಿಸಬೇಕೆಂಬ ಆಸೆಯಿತ್ತು. ಈಗ ಕಾಲ ಕೂಡಿ ಬಂದಿದೆ. ಕೊನಾರ್ಕ್ ಸಿನಿಮಾದ ಕಥೆ ಬಹಳ ಚೆನ್ನಾಗಿದೆ" ಎಂದು ನಾಯಕ ಧನುಷ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಇನ್ನು ಈ ಸಿನಿಮಾದ ಪ್ರಮುಖ ಆಕರ್ಷಣೆ ನಾಯಕಿ. "ನಾನು ಮೂಲತಃ ದೆಹಲಿಯವಳು. ಈಗ ಮುಂಬೈ ನಿವಾಸಿ. ತೆಲುಗಿನಲ್ಲಿ ಈಗಾಗಲೇ ಚಿತ್ರವೊಂದರಲ್ಲಿ ನಟಿಸಿರುವ ನನಗೆ ಕನ್ನಡದಲ್ಲಿ ಇದು ಮೊದಲ ಚಿತ್ರ" ಎಂದು ನಾಯಕಿ ಫಾಲ್ಗುಣಿ ಖನ್ನಾ ತನ್ನ ಪರಿಚಯ ಮಾಡಿಕೊಟ್ಟಿದ್ದಾರೆ. ಹಾಗೇ " ಶ್ರೀನಿವಾಸ್ ತಿಮ್ಮಯ್ಯ ಅವರು ಕಥೆ ಹೇಳುವ ರೀತಿಯೇ ಬಹಳ ಅದ್ಭುತ. ಅವರು ಈ ಚಿತ್ರದ ಕಥೆ ಹೇಳಿದ ಕೂಡಲೆ ನಾನು ಚಿತ್ರದಲ್ಲಿ ನಟಿಸಬೇಕೆಂದು ನಿರ್ಧರಿಸಿದೆ" ಎಂದು ಹಿರಿಯ ನಟ ಅಭಿಜಿತ್ ಹೇಳಿದ್ದಾರೆ.

More from Filmibeat

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X