ಹೈದರಾಬಾದ್ ಚಿತ್ರೀಕರಣ ಮುಗಿಸಿ ಕೇರಳ ಕಡೆ ಹೊರಟ ಕಿಚ್ಚ ಸುದೀಪ್
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸದ್ಯ ಫ್ಯಾಂಟಮ್ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಸುಮಾರು 3 ತಿಂಗಳಿಂದ ಹೈದರಾಬಾದ್ ನಲ್ಲಿ ಚಿತ್ರೀಕರಣ ಮಾಡುತ್ತಿದ್ದ ಫ್ಯಾಂಟಮ್ ತಂಡ ಇತ್ತೀಚಿಗಷ್ಟೆ ಹೈದರಾಬಾದ್ ಚಿತ್ರೀಕರಣಕ್ಕೆ ಬಾಯ್ ಹೇಳಿ ಕರ್ನಾಟಕಕ್ಕೆ ವಾಪಸ್ ಆಗಿದ್ದಾರೆ.
ಇದೀಗ ಮುಂದಿನ ಹಂತದ ಚಿತ್ರೀಕರಣ ಪ್ರಾರಂಭ ಮಾಡಲು ಸಿನಿಮಾತಂಡ ಪ್ಲಾನ್ ಮಾಡಿದೆ. ಲಾಕ್ ಡೌನ್ ಸ್ವಲ್ಪ ಸಡಿಲಿಕೆ ಆಗುತ್ತಿದ್ದಂತೆ ಫ್ಯಾಂಟಮ್ ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡಿದ್ದ ಸಿನಿಮಾತಂಡ, ಹೈದರಾಬಾದ್ ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಅದ್ದೂರಿ ಸೆಟ್ ನಿರ್ಮಾಣ ಮಾಡಿ ಚಿತ್ರವನ್ನು ಸೆರೆಹಿಡಿದ್ದಾರೆ.
ಇದೀಗ ಸಿನಿಮಾತಂಡ ಕೇರಳ ಕಡೆ ಹೊರಟಿದೆ. ಮುಂದಿನ ಹಂತದ ಚಿತ್ರೀಕರಣವನ್ನು ಸೇರಳದಲ್ಲಿ ಚಿತ್ರೀಕರಿಸಲು ನಿರ್ಧರಿಸಿದ್ದು, ಡಿಸೆಂಬರ್ ಮೊದಲ ವಾರದಿಂದ ಫ್ಯಾಂಟಮ್ ಸಿನಿಮಾದ ಚಿತ್ರೀಕರಣ ಕೇರಳದಲ್ಲಿ ಪ್ರಾರಂಭವಾಗಲಿದೆ.

ಕೇರಳ ಚಿತ್ರೀಕರಣ ಮುಗಿಸಿ ಬೆಂಗಳೂರಿನಲ್ಲಿ ಹಾಡಿನ ಚಿತ್ರೀಕರಣ ಮಾಡುವ ಪ್ಲಾನ್ ಮಾಡಿದೆ. ಬೆಂಗಳೂರಿನಲ್ಲಿ ಅದ್ದೂರಿ ಸೆಟ್ ನಿರ್ಮಾಣ ಮಾಡಿ ಚಿತ್ರದ ಹೈವೋಲ್ಟೇಜ್ ಹಾಡನ್ನು ಸೆರೆಹಿಡಿಯಲಿದೆ ಎನ್ನುವ ಮಾತು ಕೇಳಿಬರುತ್ತಿದೆ.
ಫ್ಯಾಂಟಮ್ ಚಿತ್ರದಲ್ಲಿ ಕಿಚ್ಚ ಸುದೀಪ್ ಪೊಲೀಸ್ ಆಫೀಸರ್ ಆಗಿಕಾಣಿಸಿಕೊಳ್ಳುತ್ತಿದ್ದಾರೆ. ವಿಕ್ರಾಂತ್ ರೋಣಾ ಪಾತ್ರದಲ್ಲಿ ಮಿಂಚಿರುವ ಸುದೀಪ್ ಪೊಲೀಸ್ ಎನ್ನುವ ಮಾಹಿತಿ ಬಹಿರಂಗವಾಗಿದೆ. ಸದ್ಯ ಕೊನೆಯ ಬಹುತೇಕ ಚಿತ್ರೀಕರಣ ಮುಗಿಸಿರುವ ಸಿನಿಮಾತಂಡ ಏಪ್ರಿಲ್ ನಲ್ಲಿ ಸಿನಿಮಾ ರಿಲೀಸ್ ಮಾಡುವ ಪ್ಲಾನ್ ಮಾಡಿದೆ. ವಿಶೇಷ ಎಂದರೆ ಫ್ಯಾಂಟಮ್ ಕನ್ನಡದ ಜೊತೆಗೆ ತಮಿಳು ಮತ್ತು ತೆಲುಗಿನಲ್ಲೂ ರಿಲೀಸ್ ಆಗುವ ಸಾಧ್ಯಕೆ ಇದೆ.


Click it and Unblock the Notifications











