ಮಂಡ್ಯ ಅಭ್ಯರ್ಥಿ ನಿಖಿಲ್ ಮತ್ತು ಸುಮಲತಾ ಮತ ಹಾಕಿದ್ದು ಎಲ್ಲಿ?
Recommended Video
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ನಟ ನಿಖಿಲ್ ಕುಮಾರ್ ಮತ್ತು ಸುಮಲತಾ ತಮ್ಮ ಮತ ಚಲಾಯಿಸಿದ್ದಾರೆ. ಮಂಡ್ಯ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್, ತಮ್ಮ ಮತವನ್ನ ಮಂಡ್ಯದಲ್ಲಿ ಹಾಕಿಲ್ಲ. ಯಾಕಂದ್ರೆ, ಅವರ ಮತ ಇರೋದು ರಾಮನಗರದಲ್ಲಿ.
ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ರಾಮನಗರದ ಕೇತಗಾನಹಳ್ಳಿಯಲ್ಲಿ ನಿಖಿಲ್ ಕುಮಾರ್ ಇಂದು ಬೆಳಿಗ್ಗೆ ಮತ ಚಲಾವಣೆ ಮಾಡಿದ್ದಾರೆ. ಈ ವೇಳೆ ನಿಖಿಲ್ ತಂದೆ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ತಾಯಿ ಶಾಸಕಿ ಅನಿತಾ ಕುಮಾರಸ್ವಾಮಿ ಕೂಡ ತಮ್ಮ ಮತ ಚಲಾಯಿಸಿದರು.
ಮತ್ತೊಂದೆಡೆ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಸುಮಲತಾ, ಅವರು ಮಂಡ್ಯದಲ್ಲಿ ತಮ್ಮ ಮತದಾನದ ಹಕ್ಕು ಹೊಂದಿದ್ದಾರೆ. ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಟಿ ಪೂಜೆ ಸಲ್ಲಿಸಿದ ಸುಮಲತಾ, ನಂತರ ಮಂಡ್ಯದ ದೊಡ್ಡಅರಸಿನಕೆರೆಯಲ್ಲಿ ಮತ ಹಾಕಿದರು.

ಮಂಡ್ಯದಿಂದ ಪಕ್ಷೇತರವಾಗಿ ಸ್ಪರ್ಧಿಸಿರುವ ಸುಮಲತಾ ಅವರಿಗೆ ಈ ಚುನಾವಣೆ ಅಗ್ನಿಪರೀಕ್ಷೆಯಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿ ಮತದಾನ ಮಾಡಬೇಕು ಎಂದು ಕೇಳಿಕೊಂಡಿದ್ದಾರೆ.


Click it and Unblock the Notifications











