ಕೊಡಗಿನ ಜನರ ಕಷ್ಟ ಆಲಿಸಿದ ನಟ-ರಾಜಕಾರಣಿ ನಿಖಿಲ್ ಕುಮಾರ್
ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆ ಬಿದ್ದ ಪರಿಣಾಮ ಕೊಡಗು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಜನರ ಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆ ಜೆಡಿಎಸ್ ಯುವ ನಾಯಕ ಹಾಗೂ ನಟ ನಿಖಿಲ್ ಕುಮಾರ್ ಕೊಡಗು ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ.
Recommended Video
ಕೊಡಗಿನ ಸೋಮವಾರಪೇಟೆ ಕುಶಾಲನಗರದ ಸುತ್ತಮುತ್ತಲಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ನಿಖಿಲ್ ಕುಮಾರ್ ಸಂತ್ರಸ್ತರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.
ನಿನ್ನೆ ಕುಶಾಲನಗರದ ಸಮೀಪ ಇರುವ ಕಾವೇರಿ ಮಾತೆಯ ಪ್ರತಿಮೆಗೆ ಪ್ರಾರ್ಥನೆ ಸಲ್ಲಿಸಿದ ನಿಖಿಲ್ ಕಾವೇರಿ ನದಿಗೆ ಬಾಗಿನ ಅರ್ಪಿಸಿದರು. ಬಳಿಕ, ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕೊಡಗಿನಲ್ಲಿ ಮನೆ ಕಳೆದುಕೊಂಡವರಿಗೆ ಮನೆಗಳನ್ನು ನಿರ್ಮಿಸಿರುವ ಸ್ಥಳಕ್ಕೆ ಭೇಟಿ ನೀಡಿದ ಜನರ ಯೋಗಕ್ಷೇಮ ವಿಚಾರಿಸಿದರು.

ಈ ಕುರಿತು ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ನಿಖಿಲ್ ಕುಮಾರ್ 'ಕೊಡಗು ಜಿಲ್ಲೆಗೆ ಭೇಟಿ ನೀಡಿ ಮಳೆಹಾನಿ ಪ್ರದೇಶಗಳನ್ನು ಪರಿಶೀಲನೆ ನಡೆಸುವ ಸಂದರ್ಭದಲ್ಲಿ, ಜಂಬೂರು ಗ್ರಾಮದಲ್ಲಿ 50 ಎಕರೆ ವಿಸ್ತೀರ್ಣದಲ್ಲಿ ಮೈತ್ರಿ ಸರ್ಕಾರವು ನಿರ್ಮಿಸಿರುವ ಸುಸಜ್ಜಿತ ಬಡಾವಣೆ ಮತ್ತು ಮನೆಗಳನ್ನು ಕಣ್ತುಂಬಿಕೊಳ್ಳುವ ಅವಕಾಶ ದೊರಕಿತು. ಇದು ನಿಜಕ್ಕೂ ಸಾರ್ಥಕ ಭಾವವನ್ನು ನೀಡಿದ ಕ್ಷಣವಾಗಿತ್ತು' ಎಂದು ಸಂತಸ ಹಂಚಿಕೊಂಡಿದ್ದಾರೆ.

2018ರಲ್ಲಿ ಕೊಡಗಿನ ಹಲವು ಪ್ರದೇಶಗಳಲ್ಲಿ ಭೂಕುಸಿತ ಉಂಟಾಗಿ 840ಕ್ಕೂ ಹೆಚ್ಚು ಕುಟುಂಬಗಳು ಮನೆಯನ್ನು ಕಳೆದುಕೊಂಡಿದ್ದರು. ಈ ವರ್ಷವೂ ಕೊಡಗಿನಲ್ಲಿ ಅಪಾರ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ಥಗೊಂಡಿದೆ.


Click it and Unblock the Notifications











