twitter
    For Quick Alerts
    ALLOW NOTIFICATIONS  
    For Daily Alerts

    ಕೊಡಗಿನ ಜನರ ಕಷ್ಟ ಆಲಿಸಿದ ನಟ-ರಾಜಕಾರಣಿ ನಿಖಿಲ್ ಕುಮಾರ್

    |

    ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆ ಬಿದ್ದ ಪರಿಣಾಮ ಕೊಡಗು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಜನರ ಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆ ಜೆಡಿಎಸ್ ಯುವ ನಾಯಕ ಹಾಗೂ ನಟ ನಿಖಿಲ್ ಕುಮಾರ್ ಕೊಡಗು ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ.

    Recommended Video

    ಎಲ್ಲಾ ನಮಗೆ ಬೇಕು ಅನ್ನೋರಲ್ಲ ನಾವು | ShivaRajKumar | DCM Ashwath Narayan | Filmibeat Kannada

    ಕೊಡಗಿನ ಸೋಮವಾರಪೇಟೆ ಕುಶಾಲನಗರದ ಸುತ್ತಮುತ್ತಲಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ನಿಖಿಲ್ ಕುಮಾರ್ ಸಂತ್ರಸ್ತರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

    ಯುವಕರಿಗೆ ಸ್ಫೂರ್ತಿಯಾಗಲು ರೈತನಾಗಲು ನಿರ್ಧರಿಸಿದ ನಟ ನಿಖಿಲ್ ಕುಮಾರಸ್ವಾಮಿಯುವಕರಿಗೆ ಸ್ಫೂರ್ತಿಯಾಗಲು ರೈತನಾಗಲು ನಿರ್ಧರಿಸಿದ ನಟ ನಿಖಿಲ್ ಕುಮಾರಸ್ವಾಮಿ

    ನಿನ್ನೆ ಕುಶಾಲನಗರದ ಸಮೀಪ ಇರುವ ಕಾವೇರಿ ಮಾತೆಯ ಪ್ರತಿಮೆಗೆ ಪ್ರಾರ್ಥನೆ ಸಲ್ಲಿಸಿದ ನಿಖಿಲ್ ಕಾವೇರಿ ನದಿಗೆ ಬಾಗಿನ ಅರ್ಪಿಸಿದರು. ಬಳಿಕ, ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕೊಡಗಿನಲ್ಲಿ ಮನೆ ಕಳೆದುಕೊಂಡವರಿಗೆ ಮನೆಗಳನ್ನು ನಿರ್ಮಿಸಿರುವ ಸ್ಥಳಕ್ಕೆ ಭೇಟಿ ನೀಡಿದ ಜನರ ಯೋಗಕ್ಷೇಮ ವಿಚಾರಿಸಿದರು.

     Nikhil Kumar has visit to Kodagu

    ಈ ಕುರಿತು ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ನಿಖಿಲ್ ಕುಮಾರ್ 'ಕೊಡಗು ಜಿಲ್ಲೆಗೆ ಭೇಟಿ ನೀಡಿ ಮಳೆಹಾನಿ ಪ್ರದೇಶಗಳನ್ನು ಪರಿಶೀಲನೆ ನಡೆಸುವ ಸಂದರ್ಭದಲ್ಲಿ, ಜಂಬೂರು ಗ್ರಾಮದಲ್ಲಿ 50 ಎಕರೆ ವಿಸ್ತೀರ್ಣದಲ್ಲಿ ಮೈತ್ರಿ ಸರ್ಕಾರವು ನಿರ್ಮಿಸಿರುವ ಸುಸಜ್ಜಿತ ಬಡಾವಣೆ ಮತ್ತು ಮನೆಗಳನ್ನು ಕಣ್ತುಂಬಿಕೊಳ್ಳುವ ಅವಕಾಶ ದೊರಕಿತು. ಇದು ನಿಜಕ್ಕೂ ಸಾರ್ಥಕ ಭಾವವನ್ನು ನೀಡಿದ ಕ್ಷಣವಾಗಿತ್ತು' ಎಂದು ಸಂತಸ ಹಂಚಿಕೊಂಡಿದ್ದಾರೆ.

     Nikhil Kumar has visit to Kodagu

    2018ರಲ್ಲಿ ಕೊಡಗಿನ ಹಲವು ಪ್ರದೇಶಗಳಲ್ಲಿ ಭೂಕುಸಿತ ಉಂಟಾಗಿ 840ಕ್ಕೂ ಹೆಚ್ಚು ಕುಟುಂಬಗಳು ಮನೆಯನ್ನು ಕಳೆದುಕೊಂಡಿದ್ದರು. ಈ ವರ್ಷವೂ ಕೊಡಗಿನಲ್ಲಿ ಅಪಾರ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ಥಗೊಂಡಿದೆ.

    English summary
    Kannada actor-politician Nikhil Kumar has visit to Kodagu.
    Friday, August 14, 2020, 9:45
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X