ರಾಮನಗರ ಬೈ ಎಲೆಕ್ಷನ್: ನಿಖಿಲ್ ಕುಮಾರ್ ಜೆಡಿಎಸ್ ಅಭ್ಯರ್ಥಿ.!

By Bharath Kumar

ರಾಮನಗರ ಬೈ ಎಲೆಕ್ಷನ್ ನಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಮಗ ನಿಖಿಲ್ ಕುಮಾರ್ ಸ್ಪರ್ಧೆ ಮಾಡ್ತಾರೆ ಎಂಬ ಸುದ್ದಿಯೊಂದು ಹರಿದಾಡುತ್ತಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ''ನನ್ನ ಮತ್ತು ನಿಖಿಲ್ ಕುಮಾರಸ್ವಾಮಿ ಅವರ ಹೆಸರು ಅಭ್ಯರ್ಥಿಗಳಾಗಿ ಕೇಳಿಬರುತ್ತಿದೆ' ಎಂದು ಹೇಳುವ ಮೂಲಕ ಮತ್ತಷ್ಟು ನಿರೀಕ್ಷೆ ಮೂಡಿಸಿದ್ದಾರೆ. ಹೀಗಾಗಿ, ಜೆಡಿಎಸ್ ಅಭ್ಯರ್ಥಿಯಾಗಿ ಯಾರು ಆಯ್ಕೆಯಾಗ್ತಾರೆ ಎಂಬುದು ಸದ್ಯದ ದೊಡ್ಡ ಕುತೂಹಲ ಮೂಡಿಸಿದೆ.

ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ ಅನಿತಾ ಕುಮಾರಸ್ವಾಮಿ, 'ನನ್ನ ಮತ್ತು ನಿಖಿಲ್ ಕುಮಾರಸ್ವಾಮಿ ಅವರ ಹೆಸರು ಅಭ್ಯರ್ಥಿಗಳಾಗಿ ಕೇಳಿಬರುತ್ತಿದೆ. ದಿನಾಂಕ ಘೋಷಣೆಯಾದ ಬಳಿಕ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುತ್ತದೆ' ಎಂದು ಹೇಳಿದರು.

Nikhil Kumar name in ram nagar by election

2018ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಮತ್ತು ಚೆನ್ನಪಟ್ಟಣ ಕ್ಷೇತ್ರಗಳಿಂದ ಸ್ಪರ್ಧೆ ಮಾಡಿದ್ದ ಹೆಚ್.ಡಿ ಕುಮಾರಸ್ವಾಮಿ ರಾಮನಗರ ಕ್ಷೇತ್ರಕ್ಕೆ ರಾಜಿನಾಮಿ ನೀಡಿದ್ದರು. ಹೀಗಾಗಿ, ರಾಮನಗರದಲ್ಲಿ ಮತ್ತೆ ಚುನಾವಣೆ ನಡೆಯಲಿದೆ.

ಎಚ್.ಡಿ.ಕುಮಾರಸ್ವಾಮಿ ತವರು ಕ್ಷೇತ್ರ : ರಾಮನಗರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ತವರು ಕ್ಷೇತ್ರ. 2004, 2008, 2013, 2018ರ ಚುನಾವಣೆಯಲ್ಲಿ ಅವರು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. 2004ರ ಚುನಾವಣೆಯಲ್ಲಿ 69,554, 2008 ಚುನಾವಣೆಯಲ್ಲಿ 71,700, 2013ರ ಚುನಾವಣೆಯಲ್ಲಿ 83,447 ಮತಗಳನ್ನು ಪಡೆದು ಕುಮಾರಸ್ವಾಮಿ ಅವರು ಕ್ಷೇತ್ರದಲ್ಲಿ ಜಯಗಳಿಸಿದ್ದಾರೆ.

More from Filmibeat

English summary
Anitha Kumaraswamy the wife of Karnataka Chief Minister H.D.Kumaraswamy said that, candidate for Ramanagara by election will be announced after poll dates announced by election commission. Anitha Kumaraswamy and Nikhil Kumaraswamy name in top for the by election.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X