twitter
    For Quick Alerts
    ALLOW NOTIFICATIONS  
    For Daily Alerts

    ಹಿಂದಿ ರಾಷ್ಟ್ರ ಭಾಷೆ ಎಂದ ಸಾಹಿತಿ ದೊಡ್ಡರಂಗೇಗೌಡ: ಇದು ಅವರ ಅರಿವಿನ ಕೊರತೆಯಾಗಿರಬಹುದು ಎಂದ ನಿಖಿಲ್

    By ಫಿಲ್ಮ್ ಡೆಸ್ಕ್
    |

    'ಹಿಂದಿ ರಾಷ್ಟ್ರ ಭಾಷೆ ಎಂದಿರುವ 86 ನೇ ಕನ್ನಡ ಸಾಹಿತ್ಯ ಸಮ್ಮೇಳನದ ‌ನಿಯೋಜಿತ ಅಧ್ಯಕ್ಷರಾದ ದೊಡ್ಡರಂಗೇಗೌಡರ ಮಾತು ಕೇಳಿ ಅಚ್ಚರಿಯಾಯಿತು. ಬಹುಶಃ ಇದು ಅವರ ಅರಿವಿನ ಕೊರತೆಯಾಗಿರಬಹುದು' ಎಂದು ನಟ ಮತ್ತು ರಾಜಕಾರಣಿ ನಿಖಿಲ್ ಕುಮಾರ್, ಹಿರಿಯ ಸಾಹಿತಿ ದೊಡ್ಡರಂಗೇಗೌಡ ಅವರಿಗೆ ತಿರುಗೇಟು ನೀಡಿದ್ದಾರೆ.

    86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿರುವ ದೊಡ್ಡರಂಗೇಗೌಡ ಅವರು ಇತ್ತೀಚಿಗೆ ಖಾಸಗಿ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ 'ಹಿಂದಿ ನಮ್ಮ ರಾಷ್ಟ್ರ ಭಾಷೆ, ಇಲ್ಲಿ ಕನ್ನಡ ಹೇಗೋ ಅದೇ ರೀತಿ ಉತ್ತರ ಭಾರತದಲ್ಲಿ ಸ್ಥಾನಮಾನವಿದೆ. ಹಿಂದಿಯನ್ನು ಯಾಕೆ ತಿರಸ್ಕಾರ ಮಾಡಬೇಕು. ಇಂಗ್ಲಿಷ್ ಒಪ್ಪುವ ನಾವು ಹಿಂದಿ ಭಾಷೆಯನ್ನು ಏಕೆ ಒಪ್ಪಿಕೊಳ್ಳಬಾರದು' ಎಂದು ಹೇಳಿದ್ದರು.

    ಅಮಿತ್ ಶಾ ಕಾರ್ಯಕ್ರಮದಲ್ಲಿ ಕನ್ನಡ ನಿರ್ಲಕ್ಷ್ಯ: ಬಿಜೆಪಿ ವಿರುದ್ಧ ನಿಖಿಲ್ ಆಕ್ರೋಶಅಮಿತ್ ಶಾ ಕಾರ್ಯಕ್ರಮದಲ್ಲಿ ಕನ್ನಡ ನಿರ್ಲಕ್ಷ್ಯ: ಬಿಜೆಪಿ ವಿರುದ್ಧ ನಿಖಿಲ್ ಆಕ್ರೋಶ

    ದೊಡ್ಡರಂಗೇಗೌಡ ಅವರ ಮಾತಿಗೆ ಸಾಮಾಜಿಕ ಜಾಲತಾಣದಲ್ಲಿ ತಿರುಗೇಟು ನೀಡಿರುವ ನಿಖಿಲ್, 'ಹಿಂದಿ ನಮ್ಮ ರಾಷ್ಟ್ರ ಭಾಷೆ ಕನ್ನಡಿಗರಾದ ನಾವು ಅದನ್ನು ಒಪ್ಪಿಕೊಳ್ಳಬೇಕು ಎಂದಿರುವ 86 ನೇ ಕನ್ನಡ ಸಾಹಿತ್ಯ ಸಮ್ಮೇಳನದ ‌ನಿಯೋಜಿತ ಅಧ್ಯಕ್ಷರಾದ ದೊಡ್ಡ ರಂಗೇಗೌಡರ ಮಾತು ಕೇಳಿ ಅಚ್ಚರಿಯಾಯಿತು. ಬಹುಶಃ ಇದು ಅವರ ಅರಿವಿನ ಕೊರತೆಯಾಗಿರಬಹುದು' ಎಂದು ಹೇಳಿದ್ದಾರೆ.

    Nikhil Kumar reaction to Doddarange Gowdas statement about Hindi language

    'ನಮ್ಮ ರಾಜ್ಯದ ಪ್ರತಿಯೊಂದು ‌ಶಾಲೆಯಲ್ಲೂ ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂಬ ವಿಚಾರವನ್ನು ಕಲಿಸುವ ಅವಶ್ಯಕತೆ ಇದೆ. ಇಲ್ಲದಿದ್ದರೆ ಮುಂದಿನ ಪೀಳಿಗೆಯೂ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ರೀತಿ ಹಿಂದಿ ರಾಷ್ಟ್ರೀಯ ಭಾಷೆ ಎಂದು ತಪ್ಪಾಗಿ ಭಾವಿಸಿಕೊಳ್ಳುವ ಸಾಧ್ಯತೆ ಇದೆ' ಎಂದಿದ್ದಾರೆ.

    Recommended Video

    ಸಾರ್ಥಕತೆಯ ಕ್ಷಣಕ್ಕೆ ಸಾಕ್ಷಿಯಾದ ಅಮೂಲ್ಯ ದಂಪತಿ | Filmibeat Kannada

    ಹಿಂದಿ ಹೇರಿಕೆ ವಿರುದ್ಧ ಹಲವು ವರ್ಷಗಳಿಂದ ಹೋರಾಟ ನಡೆಯುತ್ತಲೇ ಇದೆ. ಆದರೂ ದಕ್ಷಿಣ ರಾಜ್ಯಗಳ ಮೇಲೆ ಹಿಂದಿ ಹೇರಿಕೆ ಆಗುತ್ತಲೆ ಇದೆ. ಹಿಂದಿ ಹೇರಿಕೆ ವಿರುದ್ಧ ಕನ್ನಡಿಗರು ರೊಚ್ಚಿಗೆದ್ದಿರುವ ಈ ಸಮಯದಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿರುವ ಹಿರಿಯ ಸಾಹಿತಿ ದೊಡ್ಡರಂಗೇಗೌಡರ ಅವರ ಹೇಳಿಕೆ ಅಚ್ಚರಿ ಮೂಡಿಸಿದೆ.

    English summary
    Nikhil Kumar reaction to Doddarange Gowda's statement about Hindi language.
    Saturday, January 23, 2021, 16:45
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X