'ಸೀತಾರಾಮ ಕಲ್ಯಾಣ' ಬಿಡುಗಡೆಗೆ ದಿನಾಂಕ ನಿಗದಿ ಆಯ್ತು.!
ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ಅಭಿನಯದ ಎರಡನೇ ಚಿತ್ರ 'ಸೀತಾರಾಮ ಕಲ್ಯಾಣ' ಬಿಡುಗಡೆಗೆ ಸಿದ್ಧವಾಗಿದೆ. ಜನವರಿ 25 ರಂದು ರಾಜ್ಯಾದ್ಯಂತ 'ಸೀತಾರಾಮ ಕಲ್ಯಾಣ' ರಿಲೀಸ್ ಆಗಲಿದೆ.
ಎ.ಹರ್ಷ ನಿರ್ದೇಶನದ 'ಸೀತಾರಾಮ ಕಲ್ಯಾಣ' ಚಿತ್ರದ ವಿತರಣೆ ಹಕ್ಕುಗಳು ಜಯಣ್ಣ ಕಂಬೈನ್ಸ್ ಪಾಲಾಗಿದ್ದು, ಜನವರಿ 25 ರಂದು ಚಿತ್ರವನ್ನು ಅದ್ಧೂರಿಯಾಗಿ ರಿಲೀಸ್ ಮಾಡಲು ಚಿತ್ರತಂಡ ಪ್ಲಾನ್ ಮಾಡಿದೆ.
ನಿಖಿಲ್ ಕುಮಾರ್ ಮತ್ತು ರಚಿತಾ ರಾಮ್ ಅಭಿನಯದ 'ಸೀತಾರಾಮ ಕಲ್ಯಾಣ' ಚಿತ್ರದಲ್ಲಿ ಶರತ್ ಕುಮಾರ್, ಮಧೂ, ಸಂಜಯ್ ಕಪೂರ್, ಭಾಗ್ಯಶ್ರೀ, ಆದಿತ್ಯ ಮೆನನ್, ರವಿಶಂಕರ್, ಚಿಕ್ಕಣ್ಣ, ಸಾಧು ಕೋಕಿಲ ಸೇರಿದಂತೆ ದೊಡ್ಡ ತಾರಾಬಳಗ ಇದೆ.

ಅನೂಪ್ ರುಬೆನ್ಸ್ ಸಂಗೀತ ಸಂಯೋಜಿಸಿರುವ 'ಸೀತಾರಾಮ ಕಲ್ಯಾಣ' ಚಿತ್ರವನ್ನ ಅದ್ಧೂರಿಯಾಗಿ ನಿರ್ಮಾಣ ಮಾಡಿರುವವರು ಅನಿತಾ ಕುಮಾರಸ್ವಾಮಿ. ಈಗಾಗಲೇ ಹಿಂದಿ ಚಿತ್ರದ ಡಬ್ಬಿಂಗ್ ರೈಟ್ಸ್ ದಾಖಲೆ ಮೊತ್ತಕ್ಕೆ ಸೇಲ್ ಆಗಿದ್ದು, ಸಿನಿಮಾದ ಟ್ರೈಲರ್ ಯೂಟ್ಯೂಬ್ ನಲ್ಲಿ ಹಿಟ್ ಆಗಿದೆ.
ಹಲವು ವಿಶೇಷತೆಗಳಿಂದ ಸದ್ದು ಮಾಡಿರುವ 'ಸೀತಾರಾಮ ಕಲ್ಯಾಣ' ಸಿನಿಮಾ ಬಿಡುಗಡೆ ಹೊಸ್ತಿಲಲ್ಲಿದೆ. ನೋಡಲು ನೀವು ರೆಡಿನಾ.?


Click it and Unblock the Notifications











