For Quick Alerts
  ALLOW NOTIFICATIONS  
  For Daily Alerts

  ಸಂತಸಪಡುವ ದಿನದಂದೇ ಬೇಸರದ ಸುದ್ದಿ, ನಿಖಿಲ್ ಕುಮಾರಸ್ವಾಮಿಗೆ ಆತಂಕ

  |

  ನಟ ನಿಖಿಲ್ ಕುಮಾರಸ್ವಾಮಿ ಮದುವೆಯಾಗಿ ಇಂದಿಗೆ (ಏಪ್ರಿಲ್ 17) ಒಂದು ವರ್ಷವಾಯಿತು. ಸಂತೋಷದಿಂದ ಕಳೆಯಬೇಕಿದ್ದ ಈ ದಿನವೇ ನಿಖಿಲ್ ಕುಮಾರಸ್ವಾಮಿ ಆತಂಕ ಪಡಬೇಕಾದ ಸ್ಥಿತಿ ಎದುರಾಗಿದೆ.

  ನಿಖಿಲ್ ಗೆ ಮದುವೆ ವಾರ್ಷಿಕೋತ್ಸವದ ದಿನವೇ ಕೊರೊನಾ ಶಾಕ್ | Filmibeat Kannada

  ನಿಖಿಲ್ ಕುಮಾರಸ್ವಾಮಿಗೆ ಅವರಿಗೆ ಕೊರೊನಾ ಪಾಸಿಟಿವ್ ಆಗಿದೆ. ನಿಖಿಲ್ ಮಾತ್ರವೇ ಅಲ್ಲದೆ, ಅವರ ತಂದೆ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರಿಗೂ ಕೊರೊನಾ ಪಾಸಿಟಿವ್ ಆಗಿದೆ.

  ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ನಿಖಿಲ್ ಕುಮಾರಸ್ವಾಮಿ, 'ತಂದೆಯವರಿಗೆ ಕೊರೊನಾ ಪಾಸಿಟಿವ್ ಆದ ಕಾರಣ ನಾನೂ ಸಹ ಪರೀಕ್ಷೆಗೆ ಒಳಪಟ್ಟೆ. ನನಗೂ ಕೊರೊನಾ ಪಾಸಿಟಿವ್ ಇರುವುದಾಗಿ ವರದಿ ಬಂದಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ, ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ' ಎಂದಿದ್ದಾರೆ ನಿಖಿಲ್.

  ಇನ್ನು ತಂದೆ ಕುಮಾರಸ್ವಾಮಿ ಆರೋಗ್ಯದ ಬಗ್ಗೆಯೂ ಮಾಹಿತಿ ಹಂಚಿಕೊಂಡಿರುವ ನಿಖಿಲ್, 'ಮಾಜಿ‌ ಮುಖ್ಯಮಂತ್ರಿಗಳು ಹಾಗೂ ನನ್ನ ತಂದೆ ಕುಮಾರಸ್ವಾಮಿ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಈಗಾಗಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಮ್ಮೆಲ್ಲರ ಪ್ರೀತಿ, ಮತ್ತು ದೇವರ ದಯೆಯಿಂದ ಆದಷ್ಟು ಬೇಗ ಗುಣಮುಖರಾಗಲಿದ್ದಾರೆ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿತೈಷಿಗಳಿಗೆ ಯಾವುದೇ ಆತಂಕ ಬೇಡ ಎಂದು ಮನವಿ ಮಾಡಿಕೊಳ್ಳುತ್ತೇನೆ' ಎಂದಿದ್ದಾರೆ.

  ನಿಖಿಲ್ ಕುಮಾರಸ್ವಾಮಿ ಹಾಗೂ ರೋಹಿಣಿ ವಿವಾಹವಾಗಿ ಇಂದಿಗೆ ಒಂದು ವರ್ಷವಾಯ್ತು. ಏಪ್ರಿಲ್ 17, 2020 ರಂದು ಬಿಡದಿ ಬಳಿಯ ಕೇತಿಗಾನಹಳ್ಳಿ ಫಾರಂ ಹೌಸ್‌ನಲ್ಲಿ ಕುಟುಂಬ ಸದಸ್ಯರ ಮುಂದೆ ವಿವಾಹ ಬಂಧನಕ್ಕೆ ಒಳಗಾದರು. ಕೋವಿಡ್ ನಿಯಮಗಳು ಅತ್ಯಂತ ಕಠಿಣವಾಗಿದ್ದ ಸಮಯದಲ್ಲಿ ನಿಖಿಲ್-ರೋಹಿಣಿ ವಿವಾಹ ನಡೆದಿತ್ತು. ವಿವಾಹಕ್ಕೆ ಅನುಮತಿ ನೀಡಿದ ಬಗ್ಗೆ ಕೆಲವು ಅಪಸ್ವರಗಳು ಸಹ ಕೇಳಿಬಂದಿತ್ತು.

  English summary
  Actor, politician Nikhil Kumaraswamy tested Coronavirus positive. Today his first marriage anniversery. Nikhil Kumaraswamy's father HD Kumaraswamy also tested positive.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X