ಅಂಬಾರಿ ಹೊರುವ 'ಅರ್ಜುನ'ನನ್ನು ಭೇಟಿ ಮಾಡಿದ ನಿಖಿಲ್ ಕುಮಾರ್ ದಂಪತಿ
ವಿಶ್ವ ವಿಖ್ಯಾತ ಮೈಸೂರು ದಸರಾ ಹಬ್ಬಕ್ಕೆ ಎಲ್ಲ ಸಿದ್ಧತೆ ನಡೆಯುತ್ತಿದೆ. ಸಂಪ್ರದಾಯವಾಗಿ ಅಂಬಾರಿ ಹೊರವ ಗಜಪಡೆಗೆ ಸೂಕ್ತ ತಯಾರಿ ನೀಡಲಾಗುತ್ತಿದೆ. ಈ ನಡುವೆ ನಟ ಹಾಗೂ ರಾಜಕಾರಣಿ ನಿಖಿಲ್ ಕುಮಾರ್ ಮತ್ತು ಪತ್ನಿ ರೇವತಿ ನಾಗರಹೊಳೆ ಅಭಯಾರಣ್ಯಕ್ಕೆ ಭೇಟಿ ನೀಡಿದ್ದಾರೆ.
ಈ ವೇಳೆ ಅಂಬಾರಿ ಹೊರುವ ಗಜಪಡೆಯ ನಾಯಕ ಅರ್ಜುನ ಹಾಗೂ ದುರ್ಗಾ ಪರಮೇಶ್ವರಿ ಆನೆಗಳನ್ನು ಭೇಟಿ ಮಾಡಿ ಅವುಗಳ ಯೋಗಕ್ಷೇಮ ವಿಚಾರಿಸಿದ್ದಾರೆ. ಹಾಗೂ ಗಜಪಡೆಯ ಜೊತೆ ನಿಖಿಲ್ ದಂಪತಿ ಫೋಟೋ ಸಹ ಕ್ಲಿಕ್ಕಿಸಿಕೊಂಡಿದ್ದಾರೆ.
ಈ ಕುರಿತು ಫೇಸ್‌ಬುಕ್ ಹಾಗೂ ಇನ್ಸ್ಟಾಗ್ರಾಂ ಖಾತೆಗಳಲ್ಲಿ ಫೋಟೋಗಳನ್ನು ಹಂಚಿಕೊಂಡಿರುವ ನಿಖಿಲ್ ಕುಮಾರ್ ''ನಾಗರಹೊಳೆ ಅಭಯಾರಣ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾದ ಅಂಬಾರಿ ಹೊರುವ ಗಜಪಡೆಯ ನಾಯಕ ಅರ್ಜುನ ಹಾಗೂ ದುರ್ಗಾ ಪರಮೇಶ್ವರಿಯೊಂದಿಗೆ'' ಎಂದು ಬರೆದುಕೊಂಡಿದ್ದಾರೆ.
Recommended Video

ಮದುವೆ ಬಳಿಕ ನಿಖಿಲ್ ಕುಮಾರ್ ಮತ್ತು ರೇವತಿ ದಂಪತಿ ಸೋಶಿಯಲ್ ಮೀಡಿಯಾದಲ್ಲಿ ಪ್ರಮುಖ ಆಕರ್ಷಣೆಯ ಜೋಡಿಗಳಲ್ಲಿ ಒಂದಾಗಿದೆ. ಮನೆಯಲ್ಲಿ ಹಬ್ಬ, ಹಾಗೂ ಇತರೆ ವಿಶೇಷ ಸಂದರ್ಭಗಳಲ್ಲಿ ಫೋಟೋಗಳನ್ನು ಹಂಚಿಕೊಳ್ಳುವ ನಿಖಿಲ್ ಅಭಿಮಾನಿಗಳ ಪಾಲಿಗೆ ನೆಚ್ಚಿನ ಜೋಡಿ ಎನಿಸಿಕೊಂಡಿದ್ದಾರೆ.


Click it and Unblock the Notifications











