ಲವರ್ ಬಾಯ್ ಲುಕ್ ನಲ್ಲಿ ಎಂಟ್ರಿ ಕೊಟ್ಟ 'ರೈಡರ್' ನಿಖಿಲ್ ಕುಮಾರ್

ಸ್ಯಾಂಡಲ್ ವುಡ್ ನಟ ಮತ್ತು ನಿಖಿಲ್ ಕುಮಾರ್ ಸ್ವಾಮಿ ಮತ್ತೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಸೀತಾರಾಮ ಕಲ್ಯಾಣ ಸಿನಿಮಾ ಮೂಲಕ ಕೊನೆಯದಾಗಿ ಅಭಿಮಾನಿಗಳ ಮುಂದೆ ಬಂದಿದ್ದ ನಿಖಿಲ್ ಇದೀಗ ಲವರ್ ಬಾಯ್ ಆಗಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ.

ಸೀತಾರಾಮ ಕಲ್ಯಾಣ ಸಿನಿಮಾ ಬಳಿಕ ಕೊಂಚ ಗ್ಯಾಪ್ ಪಡೆದಿದ್ದ ನಿಖಿಲ್, ರಾಜಕೀಯದಲ್ಲಿ ಬ್ಯುಸಿಯಾಗಿದ್ದರು. ಇದೀಗ ಮತ್ತೆ ಸಿನಿಮಾಗೆ ವಾಪಸ್ ಆಗಿರುವ ನಿಖಿಲ್ 'ರೈಡರ್' ಮೂಲಕ ಎಂಟ್ರಿ ಕೊಟ್ಟಿದ್ದಾರೆ. ಇಂದು ದೀಪಾವಳಿ ಹಬ್ಬದ ಪ್ರಯುಕ್ತ ಚಿತ್ರದ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಈಗಾಗಲೇ ಸಿನಿಮಾದಿಂದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ನಿಖಿಲ್ ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದರು.

ಸದ್ಯ ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ ನಿಖಿಲ್ ಕಾಲೇಜು ಯುವಕನಾಗಿ ಎಲ್ಲರ ಮನಸ್ಸು ಕದ್ದಿದ್ದಾರೆ. ಈಗಾಗಲೇ ರೈಡರ್ ಸಿನಿಮಾದ ಶೂಟಿಂಗ್ ಪ್ರಾರಂಭವಾಗಿದ್ದು, ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ ಎಂದು ಹೇಳಲಾಗುತ್ತಿದೆ. ಕೋವಿಡ್-19 ಕಾರಣದಿಂದ ಚಿತ್ರೀಕರಣ ವಿಳಂಬವಾಗಿದ್ದು, ಮುಂದಿನ ಹಂತದ ಚಿತ್ರೀಕರಣಕ್ಕೆ ಸಿದ್ಧತೆ ನಡೆಯುತ್ತಿದೆ.

Nikhil Kumaraswamy Starrer Rider Movie Team Wishes Fans a Happy Deepavali

ಅಂದ್ಹಾಗೆ ರೈಡರ್ ಚಿತ್ರಕ್ಕೆ ತೆಲುಗು ನಿರ್ದೇಶಕ ವಿಜಯ್ ಕುಮಾರ್ ಕೊಂಡ ಆಕ್ಷನ್ ಕಟ್ ಹೇಳುತ್ತಿದ್ದಾರೆ. ರೈಡರ್ ಒಂದು ನಿಜ ಜೀವನದಿಂದ ಸ್ಫೂರ್ತಿಗೊಂಡ ಕಥೆ ಎಂದು ಹೇಳಲಾಗುತ್ತಿದೆ. ಚಿತ್ರದಲ್ಲಿ ಚಿಕ್ಕಣ್ಣ, ದತ್ತಣ್ಣ, ಶಿವರಾಜ್ ಕೆ ಆರ್ ಪೇಟೆ ಸೇರಿದಂತೆ ದೊಡ್ಡ ತಾರಾಬಳಗವೇ ಸಿನಿಮಾದಲ್ಲಿದೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.

Recommended Video

ಸೈಬರ್ ರಾಣೆ ಮೆಟ್ಟಿಲೇರಿದ Vinod Raj | Filmibeat Kannada

More from Filmibeat

English summary
Nikhil Kumaraswamy Starrer Rider Movie Team Wishes Fans a Happy Deepavali.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X