For Quick Alerts
  ALLOW NOTIFICATIONS  
  For Daily Alerts

  ನಿಖಿಲ್ ಕುಮಾರಸ್ವಾಮಿ ಮುಂದಿನ ಸಿನಿಮಾದಲ್ಲಿ ಕನ್ನಡದ ಸ್ಟಾರ್ ನಟ

  |

  ಸಿನಿಮಾ, ರಾಜಕೀಯ ಎರಡು ದೋಣಿಗಳ ಮೇಲೆ ಕಾಲಿಟ್ಟು ಪ್ರಯಾಣ ಮಾಡುತ್ತಿದ್ದಾರೆ ನಿಖಿಲ್ ಕುಮಾರಸ್ವಾಮಿ.

  ಕಳೆದ ಲೋಕಸಭೆ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದ ಬಳಿಕ ಸಿನಿಮಾ ರಂಗದಲ್ಲಿ ತುಸು ಹೆಚ್ಚು ಸಕ್ರಿಯರಾಗಿರುವ ನಿಖಿಲ್ ಕುಮಾರಸ್ವಾಮಿ ಕೆಲವಾರು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ.

  'ರೈಡರ್' ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿಸಿರುವ ನಿಖಿಲ್ ಈಗ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಆ ಸಿನಿಮಾದಲ್ಲಿ ಕನ್ನಡದ ಸ್ಟಾರ್ ನಟರೊಬ್ಬರ ಜೊತೆಗೆ ತೆರೆ ಹಂಚಿಕೊಳ್ಳಲಿದ್ದಾರೆ ನಿಖಿಲ್ ಕುಮಾರಸ್ವಾಮಿ.

  'ಪೊಗರು' ಸಿನಿಮಾ ನಿರ್ದೇಶಕ ನಂದ ಕಿಶೋರ್ ನಿರ್ದೇಶಿಸುತ್ತಿರುವ ಮುಂದಿನ ಸಿನಿಮಾದಲ್ಲಿ ನಟ ನಿಖಿಲ್ ಕುಮಾರಸ್ವಾಮಿ ನಟಿಸಲಿದ್ದಾರೆ. ಇದೇ ಸಿನಿಮಾದಲ್ಲಿ ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ ಸಹ ಮುಖ್ಯ ಪಾತ್ರದಲ್ಲಿರಲಿದ್ದಾರೆ.

  ನಂದ ಕಿಶೋರ್, ಶಿವರಾಜ್ ಕುಮಾರ್‌ಗಾಗಿ ಸಿನಿಮಾ ನಿರ್ದೇಶನ ಮಾಡಲಿದ್ದಾರೆ ಎಂದು ಈ ಹಿಂದೆಯೇ ಸುದ್ದಿಯಾಗಿತ್ತು. ಆದರೆ ಆ ಸಿನಿಮಾದಲ್ಲಿ ನಿಖಿಲ್ ಕುಮಾರಸ್ವಾಮಿ ಸಹ ನಟಿಸಲಿದ್ದಾರೆ ಎಂಬುದು ಹೊಸ ಸುದ್ದಿ.

  ನಿಖಿಲ್ ಕುಮಾರಸ್ವಾಮಿ, ಶಿವರಾಜ್ ಕುಮಾರ್ ಒಟ್ಟಿಗೆ ನಟಿಸುತ್ತಿರುವ ಈ ಸಿನಿಮಾವನ್ನು ಗೌತಮ್ ರೆಡ್ಡಿ, ಕೀರ್ತಿ ಚಿಲ್ಕುರಿ ನಿರ್ಮಾಣ ಮಾಡಲಿದ್ದಾರೆ. ಸಿನಿಮಾಕ್ಕೆ ಕತೆ ಬರೆದಿರುವುದು ಪ್ರಿಯದರ್ಶಿನಿ ರಾಮ್. ಸಿನಿಮಾದ ಬಗ್ಗೆ ಅಧಿಕೃತ ಘೋಷಣೆ ರಾಜ್‌ಕುಮಾರ್ ಅವರ ಹುಟ್ಟುಹಬ್ಬ ಏಪ್ರಿಲ್ 24 ರಂದು ಹೊರಬೀಳಲಿದೆ.

  ಈ ಹಿಂದೆ ದರ್ಶನ್, ಅಂಬರೀಶ್, ರವಿಚಂದ್ರನ್, ಅರ್ಜುನ್ ಸರ್ಜಾ ಅಂಥ ದಿಗ್ಗಜರು ನಟಿಸಿದ್ದ ಕುರುಕ್ಷೇತ್ರ ಸಿನಿಮಾದಲ್ಲಿ ನಟಿಸಿದ್ದರು ನಿಖಿಲ್. ಆ ಸಿನಿಮಾದಲ್ಲಿ ಅವರ ಪಾತ್ರ ಗಮನ ಸೆಳೆದಿತ್ತು. ಇದೀಗ ಎರಡನೇ ಬಾರಿ ದೊಡ್ಡ ಸ್ಟಾರ್ ನಟರೊಂದಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ ನಿಖಿಲ್.

  ನಿಖಿಲ್ ಕುಮಾರಸ್ವಾಮಿ ಹೊಸ ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ | Filmibeat Kannada

  ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಬಿಡುಗಡೆಗೆ ತಯಾರಾಗಿದೆ. ಜೊತೆಗೆ ವಿಜಯ್ ಮಿಲ್ಟನ್ ನಿರ್ದೇಶನದ 'ಶಿವಪ್ಪ' ಸಿನಿಮಾದಲ್ಲಿ ನಟನೆ ಮಾಡುತ್ತಿದ್ದಾರೆ. ಇನ್ನು ನಿಖಿಲ್ ಕುಮಾರಸ್ವಾಮಿ, 'ರೈಡರ್' ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿದ್ದಾರೆ.

  English summary
  Nikhil Kumaraswamy to work with Shiva Rajkumar in Nanda Kishore's directional movie.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X