ತೆಲುಗು ನಿರ್ದೇಶಕರ ಚಿತ್ರದಲ್ಲಿ ನಿಖಿಲ್ ಕುಮಾರ್ ಸ್ವಾಮಿ

Recommended Video

ನಿಖಿಲ್ ಕುಮಾರಸ್ವಾಮಿ ಮುಂದಿನ ಚಿತ್ರ ಬಹಿರಂಗ

ಸ್ಯಾಂಡಲ್ ವುಡ್ ನಟ ಮತ್ತು ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಸೀತಾರಾಮ ಕಲ್ಯಾಣ ಸಿನಿಮಾ ನಂತರ ಯಾವ ಸಿನಿಮಾವು ಅಧಿಕೃತವಾಗಿ ಬಹಿರಂಗವಾಗಿಲ್ಲ. ಆದರೆ ಪೈಲ್ವಾನ್ ನಿರ್ದೇಶಕ ಕೃಷ್ಣ ಅವರ ಮುಂದಿನ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವುದು ಬಹುತೇಕ ಖಚಿತವಾಗಿದೆ.

ಆದರೆ ಆಗಲೆ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿದೆ. ಮೂಲಗಳ ಪ್ರಕಾರ ನಿಖಿಲ್ ತೆಲುಗು ನಿರ್ದೇಶಕರ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೌದು, ನಿಖಿಲ್ ಮುಂದಿನ ಸಿನಿಮಾಗೆ ತೆಲುಗಿನ ಖ್ಯಾತ ನಿರ್ದೇಶಕ ವಿಜಯ್ ಕುಮಾರ್ ಕೊಂಡ ಆಕ್ಷನ್ ಕಟ್ ಹೇಳುತ್ತಿದ್ದಾರಂತೆ.

ತೆಲುಗಿನ ಸೂಪರ್ ಹಿಟ್ ಓಕಾ ಲೈಲಾ ಕೋಸಮ್, ಗುಂಡೆ ಜಾರಿ ಗಲ್ಲಂತಾಯಿಂದೆ ಚಿತ್ರಗಳನ್ನು ನೀಡಿರುವ ವಿಜಯ್ ಈಗ ನಿಖಿಲ್ ಕುಮಾರ್ ಗೆ ಆಕ್ಷನ್ ಕಟ್ ಹೇಳಲು ಮುಂದಾಗಿದ್ದಾರಂತೆ. ತೆಲುಗು ಚಿತ್ರರಂಗಲ್ಲಿ ಈ ಎರಡು ಸಿನಿಮಾಗಳು ಸಖತ್ ಸದ್ದು ಮಾಡಿದ ಚಿತ್ರಗಳಾಗಿವೆ.

Nikhil Kumaraswamy Will Star In Telugu Director Vijaya Kumar Konda Movie


ಅಂದ್ಹಾಗೆ ನಿಖಿಲ್ ಮತ್ತು ವಿಜಯ್ ಸಿನಿಮಾಗೆ ಇನ್ನು ಟೈಟಲ್ ಫಿಕ್ಸ್ ಆಗಿಲ್ಲ. ಸಿನಿಮಾ ಕನ್ನಡ ಮತ್ತು ತೆಲುಗು ಎರಡು ಭಾಷೆಯಲ್ಲೂ ರಿಲೀಸ್ ಮಾಡಲು ಚಿತ್ರತಂಡ ಪ್ಲಾನ್ ಮಾಡಿದೆ. ಟಿ ಸೀರಿಸ್ ನಲ್ಲಿ ಸಿನಿಮಾ ಮೂಡಿ ಬರಲಿದೆ. ಸಿನಿಮಾ ಸಂಕ್ರಾಂತಿ ನಂತರ ಸೆಟ್ಟೇರುವ ಸಾಧ್ಯತೆ ಇದೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಲಿದ್ದಾರೆ. ಸದ್ಯ ವಿಜಯ್ ಕುಮಾರ್, ಅರ್ಜುನ್ ಜನ್ಯ ಮತ್ತು ನಿಖಿಲ್ ಬಿಟ್ಟರೆ ಉಳಿದ ಕಲಾವಿದರು ಮತ್ತು ತಂತ್ರಜ್ಞರು ಫೈನಲ್ ಆಗಿಲ್ಲ.

More from Filmibeat

English summary
Kannada actor Nikhil Kumaraswamy will star in Telugu director Vijaya Kumar Konda movie.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X