ರಾಜಕೀಯ ಬಿಟ್ಟು, ಸಿನಿಮಾದಲ್ಲಿ ಬ್ಯುಸಿಯಾಗು ಎಂದು ನಿಖಿಲ್‌ಗೆ ತಂದೆಯ ಉಪದೇಶ!

ರಾಜಕೀಯ ಮತ್ತು ಚಂದನವನಕ್ಕೆ ಬಿಡಿಸಲಾರದ ನಂಟು. ರಾಜಕಾರಣಿಗಳು ಸಿನಿಮಾಗಳಲ್ಲಿ ನಟಿಸುವುದು, ನಿರ್ಮಾಪಕರಾಗುವುದು, ಮಕ್ಕಳ ಭವಿಷ್ಯ ರೂಪಿಸಲು ಹೆಣಗಾಡುವುದು ಸಾಮಾನ್ಯ. ಹೀಗೆ ರಾಜಕೀಯ ಮತ್ತು ಸಿನಿಮಾ ಎರಡರಲ್ಲೂ ಬ್ಯುಸಿಯಾಗಿದ್ದವರು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ.

ಲೋಕಸಭೆ ಮತ್ತು ವಿಧಾನಸಭಾ ಚುನಾವಣೆ ಎರಡರಲ್ಲೂ ಸೋಲು ಕಂಡಿರುವ ನಿಖಿಲ್ ಕುಮಾರಸ್ವಾಮಿಗೆ ರಾಜಕೀಯದ ಸಹವಾಸ ಬೇಡ ಎಂದು ತಂದೆ ಸಲಹೆ ನೀಡಿದ್ದಾರೆ. ಹೌದು, ಮಂಡ್ಯದಲ್ಲಿ ಮಾತನಾಡಿರುವ ಮಾಜಿ ಸಿಎಂ, ತಮ್ಮ ಮಗ ಚಿತ್ರರಂಗದಲ್ಲಿ ಭವಿಷ್ಯ ಕಂಡುಕೊಳ್ಳಲಿ ಎನ್ನುವ ಮೂಲಕ ಮುಂದಿನ ಲೋಕಸಭಾ ಚುನಾವಣೆ ನಿಖಿಲ್ ಸ್ಪರ್ಧಿಸುವುದಿಲ್ಲ ಎಂಬ ಸೂಚನೆ ನೀಡಿದ್ದಾರೆ.

nikhil-will-be-busy-in-film-industry

ರಾಜಕೀಯದ ಸಹವಾಸಕ್ಕೆ ಹೋಗಬೇಡ!

"ಸದ್ಯಕ್ಕೆ ರಾಜಕೀಯದ ಸಹವಾಸಕ್ಕೆ ಹೋಗಬೇಡ. ಭಗವಂತ ನಿನಗೆ ಕಲೆ ಕೊಟ್ಟಿದ್ದಾನೆ. ಸಿನಿಮಾ ಮಾಡು ಎಂದು ನಿಖಿಲ್‌ಗೆ ಸಲಹೆ ಕೊಟ್ಟಿದ್ದೇನೆ. ಮುಂದಿನ ಐದು ವರ್ಷ ನಿಖಿಲ್ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ" ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

"ರಾಜಕೀಯ ಜಂಗುಳಿ ಬಿಟ್ಟು ಕಲಾವಿದನಾಗಿ ಬದುಕು ರೂಪಿಸಿಕೊಳ್ಳಲು ಹೇಳಿದ್ದೇನೆ. ನಿಖಿಲ್ ಚುನಾವಣೆಗೆ ನಿಲ್ಲುವ ಪ್ರಶ್ನೆ ಇಲ್ಲ. ಈಗಾಗಲೇ ಮೂರು ಚಿತ್ರಗಳನ್ನು ನಿರ್ಮಾಣ ಮಾಡಲು ಕೆಲವು ಸಂಸ್ಥೆಗಳು ಮುಂದೆ ಬಂದಿವೆ. ಸಿನಿಮಾ ಮಾಡಲು ನಿಖಿಲ್ ಆಸಕ್ತಿ ತೋರಿಸಿದ್ದಾರೆ" ಎಂದು ಹೇಳಿದ್ದಾರೆ.

nikhil-will-be-busy-in-film-industry

ಚುನಾವಣಾ ಸೋಲಿನ ಬಗ್ಗೆ ಮಾತನಾಡಿರುವ ಅವರು, "ನಿಖಿಲ್ ಈಗಾಗಲೇ ಎರಡು ಬಾರಿ‌ ಸೋತಿದ್ದಾರೆ. ಮಂಡ್ಯ ಲೋಕಸಭಾ ಚುನಾವಣೆಯಲ್ಲಿಯೇ ನಿಲ್ಲುವುದು ಬೇಡವೆಂದಿದ್ದೆ. ಮಂಡ್ಯದಲ್ಲಿ ನಿಲ್ಲಲು ಯಾರು ತಯಾರಿಲಿಲ್ಲ. ಶಾಸಕರು ಹಾಗೂ ಕಾರ್ಯಕರ್ತರ ಒತ್ತಡದಿಂದ ಚುನಾವಣೆಗೆ ನಿಂತ. ಸೋಲು ಗೆಲುವು ಇರುತ್ತೆ ಅದರ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ. ದೇವೇಗೌಡರು, ನಾನು ಎಲ್ಲರೂ ಸೋತಿದ್ದೇವೆ, ಜನಾಭಿಪ್ರಾಯ ಏನು ಇದೆ ಅದಕ್ಕೆ ತಲೆಬಾಗಬೇಕು" ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

"ಸದ್ಯಕ್ಕೆ ನಿಖಿಲ್‌ಗೆ ರಾಜಕೀಯ ಬೇಡಾ ಎಂದು ಹೇಳಿದ್ದೇನೆ. ಸದ್ಯದ ಪರಿಸ್ಥಿತಿಯಲ್ಲಿ ನಿನ್ನ ಜೀವನ ರೂಪಿಸಿಕೋ ಎಂದು ಹೇಳಿದ್ದೇನೆ. ಭಗವಂತ ಆತನಿಗೆ ಕಲೆ ಕೊಟ್ಟಿದ್ದಾನೆ, ಆ ಕಲೆಯಲ್ಲಿ ಮುಂದುವರೆಯಲಿ. ಯಾವುದೇ ಕಾರಣಕ್ಕೂ ಮುಂದಿನ ಐದು ವರ್ಷ ಚುನಾವಣೆಗೆ ನಿಲ್ಲಿಸಲ್ಲ. ನಿಖಿಲ್ ಕುತಂತ್ರಕ್ಕೆ ಬಲಿಯಾಗಿದ್ದು, ಇದೀಗ ಅದೇ ಜನ ಪಶ್ಚಾತ್ತಾಪ ಪಡುತ್ತಿದ್ದಾರೆ" ಎಂದು ಕಿಡಿಕಾರಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಮುಂದಿನ ಚಿತ್ರ

'ಜಾಗ್ವಾರ್' ಸಿನಿಮಾ ಮೂಲಕ ಚಿತ್ರರಂಗಕ್ಕೆ ಬಂದ ನಿಖಿಲ್ ಕುಮಾರಸ್ವಾಮಿ 'ಸೀತಾರಾಮ ಕಲ್ಯಾಣ', 'ಕುರುಕ್ಷೇತ್ರ' ಮತ್ತು 'ರೈಡರ್' ಸಿನಿಮಾಗಳಲ್ಲಿ ನಟಿಸಿದ್ದಾರೆ. ಸದ್ಯ ಭಾರತದ ಪ್ರತಿಷ್ಠಿತ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ನಿಖಿಲ್ ಕುಮಾರಸ್ವಾಮಿ ಸಿನಿಮಾ ನಿರ್ಮಾಣ ಮಾಡುವ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದೆ. ನಿಖಿಲ್ ಜೊತೆಗೆ ಬಿಗ್ ಬಜೆಟ್ ಸಿನಿಮಾ ಮಾಡಲಿದೆ. ಲೈಕಾ ಜೊತೆ ನಿಖಿಲ್ ಕುಮಾರಸ್ವಾಮಿಯದ್ದು 5ನೇ ಸಿನಿಮಾ.

ನಿಖಿಲ್ ಅವರ ಮುಂದಿನ ಸಿನಿಮಾ 5 ಭಾಷೆಗಳಲ್ಲಿ ಏಕಕಾಲಕ್ಕೆ ಸಿನಿಮಾ ನಿರ್ಮಾಣವಾಗಲಿದೆ. ಬಹುಕೋಟಿ ವೆಚ್ಚದಲ್ಲಿ ಈ ಪ್ರಾಜೆಕ್ಟ್ ಸಿದ್ಧವಾಗಲಿದೆ. ಪರಭಾಷೆಯ ನಿರ್ದೇಶಕರು ಚಿತ್ರಕ್ಕೆ ಆಕ್ಷನ್ ಕಟ್ ಹೇಳುವ ಸಾಧ್ಯತೆಯಿದೆ. ದಳಪತಿ ವಿಜಯ್ ನಟನೆಯ 'ಕತ್ತಿ' ಚಿತ್ರದ ಮೂಲಕ ಲೈಕಾ ಪ್ರೊಡಕ್ಷನ್ಸ್ ಚಿತ್ರರಂಗದಲ್ಲಿ ಬೇರು ಬಿಟ್ಟಿತ್ತು. ಬಳಿಕ 'ವಡಾ ಚೆನ್ನೈ', '2.O', 'ದರ್ಬಾರ್', 'ಪೊನ್ನಿಯಿನ್ ಸೆಲ್ವನ್' ಭಾಗ-1 ಮತ್ತು ಭಾಗ-2 ಹೀಗೆ ದೊಡ್ಡ ದೊಡ್ಡ ಸಿನಿಮಾಗಳನ್ನು ಸಂಸ್ಥೆ ನಿರ್ಮಿಸಿದೆ.

More from Filmibeat

English summary
Nikhil will be busy in film industry for next five years: HD Kumaraswamy.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X