Don't Miss!
- Lifestyle
ಫೆಬ್ರವರಿಯಲ್ಲಿದೆ ಈ 3 ಗ್ರಹಗಳ ಸಂಚಾರ: ಈ 4 ರಾಶಿಯವರಿಗೆ ಮಂಗಳಕರ
- Sports
IND vs NZ 2nd T20: ಭಾರತಕ್ಕೆ ಸಾಧಾರಣ ಗುರಿ ನೀಡಿದ ನ್ಯೂಜಿಲೆಂಡ್
- News
Breaking: ಸಹಾಯಕ ಸಬ್ ಇನ್ಸ್ಪೆಕ್ಟರ್ ಗುಂಡಿನ ದಾಳಿ: ಆಸ್ಪತ್ರೆಯಲ್ಲಿ ಓಡಿಶಾ ಆರೋಗ್ಯ ಸಚಿವ ಸಾವು
- Finance
ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಮುಂದೂಡಿದ ಬ್ಯಾಂಕ್ ಯೂನಿಯನ್ಸ್: ಜ.31ಕ್ಕೆ ಮಹತ್ವದ ಸಭೆ
- Technology
ಬಜೆಟ್ ಬೆಲೆಯಲ್ಲಿ ಈ ಸ್ಮಾರ್ಟ್ಫೋನ್ಗಳು ಬೆಸ್ಟ್ ಎನಿಸಿಲಿವೆ! ಜಬರ್ದಸ್ತ್ ಫೀಚರ್ಸ್!
- Automobiles
ಬೆಲೆ ಏರಿಕೆ ಪಡೆದುಕೊಂಡ ಪರ್ಫಾಮೆನ್ಸ್ ಕಾರು ಪ್ರಿಯರ ಮೆಚ್ಚಿನ ಹ್ಯುಂಡೈ ಐ20 ಎನ್ ಲೈನ್
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಸೆನ್ಸಾರ್ ಮಂಡಳಿಯಿಂದ ಪ್ರಶಂಸೆ, ಏಪ್ರಿಲ್ 16ಕ್ಕೆ 'ನಿನ್ನ ಸನಿಹಕೆ' ಬಿಡುಗಡೆ
ಅಣ್ಣಾವ್ರ ಮೊಮ್ಮಗಳು, ನಟ ರಾಮ್ ಕುಮಾರ್ ಅವರ ಪುತ್ರಿ ಧನ್ಯ ರಾಮ್ ಕುಮಾರ್ ಬೆಳ್ಳಿತೆರೆ ಮೇಲೆ ಬರಲು ಮುಹೂರ್ತ ನಿಗದಿಯಾಗಿದೆ. ಧನ್ಯ ಅಭಿನಯಿಸಿರುವ ಚೊಚ್ಚಲ ಸಿನಿಮಾ 'ನಿನ್ನ ಸನಿಹಕೆ' ಇದೇ ತಿಂಗಳು ಬಿಡುಗಡೆಯಾಗುತ್ತಿದೆ.
ನಟ ಸೂರಜ್ ಗೌಡ ಪ್ರಪ್ರಥಮ ಬಾರಿಗೆ ನಿರ್ದೇಶಿಸಿ, ನಟಿಸಿರುವ ಯೂತ್ ಫುಲ್ ಲವ್ ಸ್ಟೋರಿ 'ನಿನ್ನ ಸನಿಹಕೆ'. ದೊಡ್ಮನೆ ಕುಡಿ ಧನ್ಯರಾಮ್ ಕುಮಾರ್ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿರುವ ಸಿನಿಮಾ.
ಡಾ.ರಾಜ್
ಮೊಮ್ಮಗಳ
ಸೌಂದರ್ಯಕ್ಕೆ
ದಂಗಾದ
ನೆಟ್ಟಿಗರು.!
ರಘು ದೀಕ್ಷಿತ್ ಸಂಗೀತ ಸಂಯೋಜನೆ ಹೊಂದಿರುವ ಈ ಚಿತ್ರದ ಹಾಡುಗಳು ಈಗಾಗಲೇ ಕನ್ನಡ ಸಿನಿಪ್ರಿಯರ ಮನ ಸೆಳೆಯುತ್ತಿದೆ. ಹಾಡಿನಿಂದ ಹಾಡಿಗೆ ವಿಶಿಷ್ಠವಾಗಿ ವಿನೂತನವಾಗಿರುವ ಹಾಡುಗಳು ನೋಡುವುದಕ್ಕೂ ಅಷ್ಟೇ ಬ್ಯೂಟಿಫುಲ್ ಆಗಿವೆ. ಪೋಸ್ಟರ್ ಹಾಗೂ ಸಿನಿಮಾ ಮೇಕಿಂಗ್ ಕ್ವಾಲಿಟಿಯಿಂದ ಕನ್ನಡ ಚಿತ್ರರಂಗದಲ್ಲಿ ಹೊಸ ಭರವಸೆ ಹುಟ್ಟಿಸಿದೆ.
ನಿನ್ನ ಸನಿಹಕೆ ಸಿನಿಮಾ ಇತ್ತೀಚೆಗಷ್ಟೇ ಸೆನ್ಸಾರ್ ಮಂಡಳಿ ಸದಸ್ಯರು ವೀಕ್ಷಿಸಿ, ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್ ನೀಡಿದ್ದಾರೆ. ಸಿನಿಮಾ ನೋಡಿ ಮೆಚ್ಚಿಕೊಂಡಿರುವ ಸೆನ್ಸಾರ್ ಮಂಡಳಿಯವರು ಚಿತ್ರದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ವೈಟ್ ಅಂಡ್ ಗ್ರೇ ಪಿಕ್ಚರ್ಸ್ ಬ್ಯಾನರ್ ನಡಿಯಲ್ಲಿ ಅಕ್ಷಯ್ ರಾಜಶೇಖರ್, ರಂಗನಾಥ್ ಕುಡ್ಲಿ ನಿರ್ಮಿಸಿರುವ ನಿನ್ನ ಸನಿಹಕೆ ಏಪ್ರಿಲ್ 16ಕ್ಕೆ ವಿಶ್ವದಾದ್ಯಂತ ರಿಲೀಸ್ ಆಗ್ತಿದೆ.

Recommended Video
ಸದ್ಯದಲ್ಲೇ ಟ್ರೈಲರ್ ಬಿಡುಗಡೆ ಮಾಡುವ ಯೋಜನೆಯಲ್ಲಿರುವ ಚಿತ್ರತಂಡ ಆದಷ್ಟೂ ಬೇಗ ಪ್ರಚಾರ ಕಾರ್ಯಗಳನ್ನು ಆರಂಭಿಸಲಿದೆ.