ಹೊಸ ವರ್ಷದ ಸಂಭ್ರಮದಲ್ಲಿ ಕಂಬ ಹತ್ತಿದ ನಿವೇದಿತಾ ಗೌಡ, ಕುಡಿದ ಮತ್ತಲ್ಲಿ ಮೇಲೆ ಏರಿದ್ರಾ ಎಂದ ಫ್ಯಾನ್ಸ್ ..!
ಒಂದಿಲ್ಲೊಂದು ವಿಚಾರಗಳಿಂದ ಸದಾ ಸುದ್ದಿಯಾಗುವರಲ್ಲಿ ನಿವೇದಿತಾ ಗೌಡ ಕೂಡ ಒಬ್ಬರು ಮತ್ತು ಪ್ರಮುಖರು. ಚಂದನ್ ಶೆಟ್ಟಿ ಅವರಿಂದ ದೂರವಾದ ನಂತರ ಟ್ರೋಲ್ ಪೇಜ್‌ಗಳಿಗೆ ಸದಾ ಎಲೆ ಅಡಿಕೆಯಾಗಿರುವ ನಿವೇದಿತಾ ಗೌಡ ಕಳೆದೊಂದು ಎರಡು ವಾರಗಳಿಂದ ಹೊರ ದೇಶದಲ್ಲಿ ಬಿಡಾರ ಹೂಡಿದ್ದಾರೆ. ಅಲ್ಲಿಂದನೇ ರೀಲ್ಸ್‌ಗಳನ್ನು ಮಾಡುತ್ತಾ ಹೊಸ ಹೊಸ ಫೋಟೊಗಳನ್ನು ಹಂಚಿಕೊಳ್ಳುತ್ತಾ ಸುದ್ದಿಯಾಗುತ್ತಿದ್ದಾರೆ. ಟ್ರೋಲ್ ಆಗುತ್ತಿದ್ದಾರೆ.
ಆದರೂ ಕೂಡ ನಿವೇದಿತಾ ಗೌಡ ಅವರದ್ದು ಡೋಂಟ್ ಕೇರ್ ವ್ಯಕ್ತಿತ್ವ. ಯಾರೇ ಕೂಗಾಡಲಿ, ಸೋಶಿಯಲ್ ಮೀಡಿಯಾನೇ ಅಲ್ಲಾಡಲಿ, ನನ್ನ ನೆಮ್ಮದಿಗೆ ಭಂಗ ಇಲ್ಲವೆಂಬಂತೆ ನಿವೇದಿತಾ ಗೌಡ ಫಾರಿನ್‌ನಲ್ಲಿ ತಮ್ಮ ಮೋಜು ಮಸ್ತಿಯ ಕಾರ್ಯಕ್ರಮವನ್ನು ಮುಂದುವರೆಸಿದ್ದಾರೆ. ಇದಕ್ಕೆ ಕೈಗನ್ನಡಿ ಎಂಬಂತೆ ಮೊನ್ನೆ ಮೊನ್ನೆಯಷ್ಟೇ ಸಿಕ್ಸ್ ಪ್ಯಾಕ್ ಸುಂದರನ ಜೊತೆ ಆಕಾಶಬುಟ್ಟಿಯನ್ನು ಹಾರಿಸಿ ಸುದ್ದಿಯಾಗಿದ್ದ ನಿವೇದಿತಾ ಗೌಡ ಈಗ ಕಂಬ ಏರಿದ್ದಾರೆ. ಈ ಮೂಲಕ ಮತ್ತೊಮ್ಮೆ ಟ್ರೋಲಿಗರಿಗೆ ಆಹಾರವಾಗಿದ್ದಾರೆ.

ಹೌದು, ಕಳೆದ ಹತ್ತು ಹನ್ನೆರಡು ದಿನಗಳಿಂದ ನ್ಯೂಯಾರ್ಕ್, ಲಂಡನ್ ಎಂದೆಲ್ಲಾ ಹಲವಾರು ವಿಡಿಯೋಗಳನ್ನು ಶೇರ್ ಮಾಡುತ್ತಿರುವ ನಿವೇದಿತಾ ಗೌಡ ಹೊಸ ವರ್ಷದ ಸಂಭ್ರಮದಲ್ಲಿ ಬ್ಲ್ಯಾಕ್ ಕಾಸ್ಟೂಮ್‌ನಲ್ಲಿ ಮಿಂಚಿದ್ದಾರೆ. ಕೈ ಮೇಲೆ ವರ್ಣರಂಜಿತ ಚಿತ್ರಗಳನ್ನು ಹಾಕಿಕೊಂಡಿದ್ದಾರೆ. ಇಷ್ಟೇ ಆಗಿದ್ದರೆ ನಿವೇದಿತಾ ಗೌಡ ಬಹುತೇಕ ತಾರೆಯರಂತೆ ಹೊಸ ವರ್ಷವನ್ನು ಸೆಲೆಬ್ರೇಟ್ ಮಾಡುತ್ತಿದ್ದಾರೆ. ಎಂಜಾಯ್ ಮಾಡುತ್ತಿದ್ದಾರೆ ಎಂದು ಎಲ್ಲರು ಅಂದುಕೊಳ್ಳುತ್ತಿದ್ದರೇನೋ.
ಆದರೆ, ನಿವೇದಿತಾ ಗೌಡ ಹೀಗೆ ಕುಣಿಯುತ್ತಾ ಕುಣಿಯುತ್ತಾ ಕಂಬವನ್ನೇರಿದ್ದಾರೆ. ಕಂಬಕ್ಕೆ ಅಂಟಿಕೊಂಡು ಸಂಭ್ರಮದಲ್ಲಿ ತೇಲಿದ್ದಾರೆ. ನಿವೇದಿತಾ ಗೌಡ ಅವರ ಈ ಹಾವ ಭಾವ ಅನೇಕರ ಗಮನ ಸೆಳೆದಿದೆ. ಹೀಗಾಗಿಯೇ ನಾನಾ ಬಗೆಯ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಾ ಅನೇಕರು ನಿವೇದಿತಾ ಗೌಡ ಅವರ ಕಾಲೆಳೆಯುತ್ತಿದ್ದಾರೆ.
ಈ ಸಲ ನಿವೇದಿತಾ ಗೌಡ ಅವರು ಪಾರ್ಟಿ ಜೋರು ಮಾಡಿದ್ದಾರೆ ಅನ್ಸುತ್ತೆ ಎಂದು ಒಬ್ಬರು ಹೇಳಿದರೆ ಮತ್ತೊಬ್ಬರು ಫುಲ್ ಜಾಲಿ ಜಾಲಿ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ಕುಡಿದಿದ್ದೀರಾ ಹೇಗೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ನಶೆಯಲ್ಲಿ ಕಂಬ ಏರಿದಂತೆ ಇದೆ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಎಂದಿನಂತೆ ಇನ್ನು ಕೆಲವರು ಚಂದನ್ ಶೆಟ್ಟಿ ಅವರ ಹೆಸರನ್ನು ಕೂಡ ಪ್ರಸ್ತಾಪಿಸಿದ್ದಾರೆ. ಅಶ್ಲೀಲವಾದ ಕಾಮೆಂಟ್‌ಗಳನ್ನು ಮಾಡಿದ್ದಾರೆ.
ಸದ್ಯಕ್ಕೆ ಕಳೆದ 15 ಗಂಟೆಯಲ್ಲಿ ಈ ವಿಡಿಯೋಗೆ 30,000ಕ್ಕೂ ಅಧಿಕ ಲೈಕ್‌ಗಳು ಸಿಕ್ಕಿವೆ. 214ಕ್ಕೂ ಹೆಚ್ಚಿನ ಜನ ನಿವೇದಿತಾ ಗೌಡ ಅವರ ಈ ವಿಡಿಯೋಗೆ ಕಾಮೆಂಟ್ ಮಾಡಿದ್ದಾರೆ. ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇನ್ನುಳಿದಂತೆ 'ವಾಲು ಕಳ್ಳತಾ' ಹಾಡಿನ ಮೂಲಕ ತೆಲುಗು ಚಿತ್ರರಂಗವನ್ನು ಪ್ರವೇಶಿಸಿರುವ ನಿವೇದಿತಾ ಗೌಡ ಸದ್ಯ ಕನ್ನಡ ಮತ್ತು ತೆಲುಗಿನಲ್ಲಿ ಒಳ್ಳೆಯ ಅವಕಾಶಗಳನ್ನು ಎದುರು ನೋಡುತ್ತಿದ್ದಾರೆ. ಇನ್ನು ಮಾಜಿ ಪತಿ ಚಂದನ್ ಶೆಟ್ಟಿ ಜೊತೆ ನಿವೇದಿತಾ ಗೌಡ 'ಮುದ್ದು ರಾಕ್ಷಸಿ' ಎಂಬ ಚಿತ್ರದಲ್ಲಿ ಕೂಡ ಆಕ್ಟ್ ಮಾಡಿದ್ದಾರೆ. ನಾಯಕಿಯ ಪಾತ್ರವನ್ನು ನಿರ್ವಹಿಸಿದ್ದಾರೆ. ಪುನೀತ್ ಶ್ರೀನಿವಾಸ್ ಈ ಚಿತ್ರದ ಕಥೆ ಚಿತ್ರಕಥೆಯನ್ನು ಬರೆದು ನಿರ್ದೇಶಿಸಿದ್ದಾರೆ. ಮೋಹನ್ ಕುಮಾರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇನ್ನೂ ಸೈಕೋ ಥ್ರಿಲ್ಲರ್ ಕಥಾಹಂದರ ಈ ಚಿತ್ರದ ಚಿತ್ರೀಕರಣ ಬಹುತೇಕ ಬೆಂಗಳೂರಿನಲ್ಲಿಯೇ ನಡೆದಿದೆ. ಎಂ ಎಸ್ ತ್ಯಾಗರಾಜ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಎ ಕರುಣಾಕರ್ ಚಿತ್ರದ ಛಾಯಾಗ್ರಹಣ ಮಾಡಿದ್ದಾರೆ. ಈ ಚಿತ್ರ ಈ ವರ್ಷ ತೆರೆಗೆ ಬರಲಿದೆ.


Click it and Unblock the Notifications











