ವಿಚ್ಚೇದನದ ಬಳಿಕ ಚಂದನ್ ಶೆಟ್ಟಿ-ನಿವೇದಿತಾ ಗೌಡ ಪ್ರತಿಕ್ರಿಯೆ; ಪೋಸ್ಟ್‌ನಲ್ಲಿ ಏನಿದೆ?

ಕನ್ನಡದ ಗಾಯಕ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಇಬ್ಬರೂ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದಿದ್ದಾರೆ. ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯ ಇಬ್ಬರಿಗೂ ಡಿವೋರ್ಸ್ ಮಂಜೂರು ಮಾಡಿದೆ. ಇಬ್ಬರು ವಿಚ್ಛೇದನದ ವಿಚಾರ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಡಿವೋರ್ಸ್ ಸುದ್ದಿ ಹಬ್ಬಿದರೂ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

ಮಾಧ್ಯಮಗಳಲ್ಲಿ ದೊಡ್ಡ ಮಟ್ಟಕ್ಕೆ ಸುದ್ದಿಯಾಗುತ್ತಿದ್ದಂತೆ ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಇಬ್ಬರೂ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ವಿಚ್ಛೇದನದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ವಿಚ್ಛೇದನದ ಬಗ್ಗೆ ಅಧಿಕೃತವಾಗಿ ಮಾಹಿತಿಯನ್ನು ನೀಡಿದ್ದಾರೆ.

Niveditha Gowda Chandan Shetty divorce

"ಈ ದಿನ ಚಂದನ್ ಶೆಟ್ಟಿ ಹಾಗೂ ನಾನು, ನಮ್ಮ ದಾಂಪತ್ಯವನ್ನು ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೊಳಿಸಿದ್ದೇವೆ. ನಮ್ಮ ನಿರ್ಧಾರವನ್ನು ಹಾಗೂ ನಮ್ಮ ಜೀವನದ ಖಾಸಗಿತನವನ್ನು ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲೂ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು, ಸ್ನೇಹಿತರು ಹಾಗೂ ಅಭಿಮಾನಿಗಳಿಂದ ಎಂದಿನಂತೆ ಬೆಂಬಲ ಕೋರುತ್ತೇವೆ. ನಾವೂ ಪ್ರತ್ಯೇಕ ಮಾರ್ಗ ಅನುಸರಿಸಿದ್ರೂ, ಒಬ್ಬರೊನ್ನೊಬ್ಬರು ಗೌರವಿಸುತ್ತೇವೆ. ಸೂಕ್ಷ್ಮ ಪರಿಗಣನೆಗಾಗಿ ಎಲ್ಲರಿಗೂ ಧನ್ಯವಾದಗಳು" ಎಂದು ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಬರೆದುಕೊಂಡಿದ್ದಾರೆ.

ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಬಿಗ್‌ಬಾಸ್ ರಿಯಾಲಿಟಿ ಶೋನಲ್ಲಿ ಸ್ಪರ್ಧಿಗಳಾಗಿದ್ದರು. ಅಲ್ಲಿಂದ ಈ ಜೋಡಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿತ್ತು. ಆಗಾಗ ಪ್ರೀತಿಯಲ್ಲೂ ಬಿದ್ದಿತ್ತು. ಬಳಿಕ 2020ರ ಫೆಬ್ರವರಿ 26 ರಂದು ಮೈಸೂರಿನಲ್ಲಿ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇಬ್ಬರ ನಡುವಿನ ಹೊಂದಾಣಿಕೆಯನ್ನು ಕಂಡು ವಿಚ್ಛೇದನದಂತಹ ನಿರ್ಧಾರ ತೆಗೆದುಕೊಳ್ಳುತ್ತಾರೆ ಅಂತ ನಿರೀಕ್ಷೆಯನ್ನೂ ಮಾಡಿರಲಿಲ್ಲ.

ಈ ಜೋಡಿ ನಿನ್ನೆ (ಜೂನ್ 6) ಫ್ಯಾಮಿಲಿ ಕೋರ್ಟ್‌ಗೆ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು ಎನ್ನಲಾಗಿದ್ದು, ಒಂದೇ ದಿನದಲ್ಲಿ ಇಬ್ಬರಿಗೂ ಡಿವೋರ್ಸ್ ಮಂಜೂರು ಆಗಿದೆ ಅನ್ನೋದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ, ಕಾನೂನಿನಲ್ಲಿ ಒಂದೇ ದಿನಕ್ಕೆ ಕೋರ್ಟ್ ವಿಚ್ಛೇದನ ನೀಡುವುದು ಸಾಧ್ಯವಿಲ್ಲ ಎನ್ನಲಾಗಿದೆ. ಹೀಗಾಗಿ ಈ ಹಿಂದೆನೇ ಇಬ್ಬರೂ ಅರ್ಜಿ ಸಲ್ಲಿಸಿದ್ದು, ಈಗ ನ್ಯಾಯಾಲಯ ಇಬ್ಬರ ಒಪ್ಪಿಗೆ ಮೇರೆಗೆ ಡಿವೋರ್ಸ್ ನೀಡಿರುವ ಸಾಧ್ಯತೆಯಿದೆ.

ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರ ವಿಚ್ಛೇದನವನ್ನು 13B ಫ್ಯಾಮಿಲಿ ಕೋರ್ಟ್ ಆಕ್ಟ್ ಅಡಿಯಲ್ಲಿ ನೀಡಿದೆ. ಇಬ್ಬರೂ ನ್ಯಾಯಾಧೀಶರ ಮುಂದೆ ಒಟ್ಟಿಗೆ ಜೀವನ ನಡೆಸಲು ಸಾಧ್ಯವಿಲ್ಲ. ಹಾಗಾಗೀ ಬೇರೆಯಾಗುವುದಕ್ಕೆ ನಿರ್ಧರಿಸಿದ್ದೇವೆ ಎಂದು ಹೇಳಿಕೊಟ್ಟಿದ್ದಾರೆ. ಯಾವುದೇ ರೀತಿ ಆರೋಪ ಪ್ರತ್ಯಾರೋಪ ಮಾಡದೇನೆ ಈ ಜೋಡಿ ಬೇರೆಯಾಗುವುದಕ್ಕೆ ನಿರ್ಧರಿಸಿತ್ತು ಎಂದು ವರದಿಯಾಗಿದೆ.

More from Filmibeat

English summary
Niveditha Gowda and Chandan Shetty's first Instagram post after their divorce
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X