ನಿವೇದಿತಾ ಗೌಡ ಬೆಡ್‌ರೂಮ್ ವಿಡಿಯೋ ನೋಡಿ ತಬ್ಬಿಬ್ಬಾದ ಜನ, ಹೀಗೂ ಉಂಟೆ ಎಂದ ನೆಟ್ಟಿಗರು..!
ಸೋಶಿಯಲ್ ಮೀಡಿಯಾದಲ್ಲಿ ಬೆಳಗಾದರೆ ಆ ಸೆಲೆಬ್ರೆಟಿಗಳು ಹಂಗೆ, ಈ ಸೆಲೆಬ್ರೆಟಿಗಳು ಹಿಂಗೇ ಎನ್ನುವಂತಹ ಪೋಸ್ಟುಗಳು, ಸ್ಟಾರ್ ಸೆಲೆಬ್ರೆಟಿಗಳ ಕುರಿತಾದ ಟ್ರೋಲುಗಳು, ಕಿಂಡಲ್ಲುಗಳು ಬರೋದು ಕಾಮನ್ನು. ಸೆಲೆಬ್ರೆಟಿಗಳೆಂದ ಮೇಲೆ ಅಷ್ಟೂ ಮಾಡದೇ ಇದ್ದರೆ ಹೇಗೆ? ಇಂತಹ ಸಾಕಷ್ಟು ವಿವಾದಾತ್ಮಕ ವಿಚಾರಗಳಿಗೆ ಬಹುತೇಕ ಸೆಲೆಬ್ರೆಟಿಗಳು ಉರಿದು ಬೀಳುತ್ತಾರೆ. ಪ್ರತಿಕ್ರಿಯೆ ನೀಡುತ್ತಾರೆ. ಕೆಲವರಂತೂ ಕಾನೂನಿನ ಮೆಟ್ಟಿಲನ್ನು ಹತ್ತುತ್ತಾರೆ. ಇನ್ನೂ ಕೆಲವರು ಇಂತಹ ಯಾವ ಅನಗತ್ಯ ವಿಚಾರಗಳಿಗೆ ತಲೆ ಕೆಡಿಸಿಕೊಳ್ಳದೇ ತಮ್ಮದೇ ಕೆಲಸಗಳಲ್ಲಿ ಬ್ಯುಸಿಯಾಗಿತ್ತಾರೆ. ಉದಾಹರಣೆಗೆ ನಿವೇದಿತಾ ಗೌಡ.
ಹೌದು, ಇಲ್ಲಿಯವರೆಗೆ ನಿವೇದಿತಾ ಗೌಡ ಅವರ ಮೇಲೆ ಅನೇಕರು ಕೆಂಡ ಕಾರಿದ್ದಾರೆ. ಚಂದನ್ ಶೆಟ್ಟಿ ಜೊತೆ ಇದ್ದಾಗಲೂ ಇವರನ್ನು ಬ್ಯೆಯುತ್ತಿದ್ದ ಅನೇಕರು, ಈಗ ಚಂದನ್ ಶೆಟ್ಟಿ ಅವರಿಂದ ನಿವೇದಿತಾ ದೂರವಾದ ನಂತರವೂ ಕೂಡ ತೆಗಳುವ ಕಾರ್ಯಕ್ರಮವನ್ನು ಮುಂದುವರೆಸಿದ್ದಾರೆ. ಇದಕ್ಕೆ ನಿವೇದಿತಾ ಗೌಡ ಅವರ ರೀಲ್ಸ್ ಹವ್ಯಾಸ ಪ್ರಮುಖ ಕಾರಣ ಅನ್ನುವುದು ಮತ್ತೆ ಪ್ರತೈಕವಾಗಿ ಹೇಳಬೇಕಿಲ್ಲ.
ಆದರೂ ನಿವೇದಿತಾ ಗೌಡ ತಲೆ ಕೆಡಿಸಿಕೊಂಡಿಲ್ಲ. ರೀಲ್ಸ್ ಮಾಡುವುದನ್ನು ಕಡಿಮೆ ಮಾಡಿಲ್ಲ. ಬದಲಿಗೆ ಇನ್ನೂ ಹೆಚ್ಚೆಚ್ಚು ರೀಲ್ಸ್ ಮಾಡುತ್ತಿದ್ದಾರೆ. ಸಾಲದಕ್ಕೆ ತಮಗೆ ಹತ್ತಿರವಾದ ಸ್ನೇಹಿತೆಯನ್ನೂ ರೀಲ್ಸ್ ಪ್ರಪಂಚಕ್ಕೆ ಎಳೆದು ತರುತ್ತಿದ್ದಾರೆ. ಇದಕ್ಕೆ ನಿವೇದಿತಾ ಗೌಡ ಹಂಚಿಕೊಂಡ ಹೊಸ ರೀಲ್ಸ್ ಸಾಕ್ಷಿ
ಹೌದು, ನಿವೇದಿತಾ ಗೌಡ ಸದ್ಯ ಹೊಸದೊಂದು ರೀಲ್ಸ್ ಹಂಚಿಕೊಂಡಿದ್ದಾರೆ. ತಮ್ಮ ಆಪ್ತ ಸ್ನೇಹಿತೆ ವಾಣಿ ಜೊತೆ ತಮ್ಮ ಬೆಡ್ ರೂಮ್‌ನಲ್ಲಿ ಕಳೆದ ಕೆಲ ಸುಂದರ ಕ್ಷಣಗಳನ್ನೂ ಹಂಚಿಕೊಂಡಿದ್ದಾರೆ. ಸ್ನೇಹಿತೆಯನ್ನು ಅಪ್ಪಿಕೊಂಡಿದ್ದಾರೆ. ಬಿದ್ದು ಬಿದ್ದು ನಕ್ಕಿದ್ದಾರೆ. ಆದರೆ ಇದಕ್ಕೂ ಹಲವಾರು ತಗಾದೆ ತೆಗೆಯುತ್ತಿದ್ದಾರೆ. ನಿವೇದಿತಾ ಗೌಡ ಅವರ ಕಾಮೆಂಟ್ ಸೆಕ್ಷನ್‌ಗೆ ಬಂದು ಕೆಟ್ಟಾ ಕೊಳಕು ಮಾತುಗಳನ್ನಾಡುತ್ತಿದ್ದಾರೆ. ಚಂದನ್ ಶೆಟ್ಟಿ ಅವರಿಗೆ ಡಿವೋರ್ಸ್ ನೀಡಿದ್ದು ಇದೇ ಕಾರಣಕ್ಕಾ ಎಂದು ಪ್ರಶ್ನೆಯನ್ನು ಮಾಡುತ್ತಿದ್ದಾರೆ. ನಮಗ್ಯಾಕೋ ಅನುಮಾನ ಶುರುವಾಗುತ್ತಿದೆ ಎನ್ನುವ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಅಂದ್ಹಾಗೇ ನಿವೇದಿತಾ ಗೌಡ ಇದೇ ಮೊದಲ ಬಾರಿ ವಾಣಿ ಅವರ ಜೊತೆ ರೀಲ್ಸ್ ಮಾಡಿಲ್ಲ. ಈ ಹಿಂದೆ ಕೂಡ ಅಂದರೆ ಚಂದನ್ ಶೆಟ್ಟಿ ಅವರಿಂದ ದೂರವಾದ ನಂತರವೂ ಕೂಡ ನಿವೇದಿತಾ ಗೌಡ ವಾಣಿ ಅವರ ಜೊತೆ ವಿಡಿಯೋಗಳನ್ನು ಹಂಚಿಕೊಂಡಿದ್ದರು. ಆದರೆ, ಆಗ ವ್ಯಕ್ತವಾಗದ ಅಭಿಪ್ರಾಯಗಳು ಈಗ ಈ ವಿಡಿಯೀ ನಂತರ ವ್ಯಕ್ತವಾಗುತ್ತಿವೆ. ನಿವೇದಿತಾ ಗೌಡ ಅವರ ಈ ಹೊಸ ರೀಲ್ಸ್ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ. ಇದಕ್ಕೆ ಕೈಗನ್ನಡಿ ಎನ್ನುವಂತೆ ಕೇವಲ ಎರಡೇ ಎರಡು ಘಂಟೆಯಲ್ಲಿ ಈ ವಿಡಿಯೋವನ್ನು ಹನ್ನೆರಡು ಸಾವಿರಕ್ಕೂ ಅಧಿಕ ಜನ ಮೆಚ್ಚಿಕೊಂಡಿದ್ದಾರೆ. ನೂರಾರು ಜನ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.
ಉಳಿದಂತೆ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಮುದ್ದು ರಾಕ್ಷಸಿ ಎಂಬ ಚಿತ್ರವೊಂದನ್ನು ಜೊತೆಯಾಗಿ ಮಾಡಿದ್ದಾರೆ. ಇನ್ನೇನು ತೆರೆಗೆ ಬರಲು ಸಿದ್ಧವಾಗಿರುವ ಈ ಚಿತ್ರವನ್ನು ಪುನೀತ್ ಶ್ರೀನಿವಾಸ್ ಕಥೆ ಚಿತ್ರಕಥೆಯನ್ನು ಬರೆದು ನಿರ್ದೇಶಿಸಿದ್ದಾರೆ.ಮೋಹನ್ ಕುಮಾರ್ ಈ ಮುದ್ದು ರಾಕ್ಷಸಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇನ್ನೂ ಸೈಕೋ ಥ್ರಿಲ್ಲರ್ ಕಥಾಹಂದರ ಈ ಚಿತ್ರದ ಚಿತ್ರೀಕರಣ ಬಹುತೇಕ ಬೆಂಗಳೂರಿನಲ್ಲಿಯೇ ನಡೆದಿದೆ. ಎಂ ಎಸ್ ತ್ಯಾಗರಾಜ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಎ ಕರುಣಾಕರ್ ಚಿತ್ರದ ಛಾಯಾಗ್ರಹಣ ಮಾಡಿದ್ದಾರೆ. ಸದ್ಯ ಹೆಸರು ಬದಲಾವಣೆಯೊಂದಿಗೆ ಸುದ್ದಿಯಲ್ಲಿರುವ ಮುದ್ದು ರಾಕ್ಷಸಿ ಈ ವರ್ಷಾಂತ್ಯದಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ.


Click it and Unblock the Notifications











