Don't Miss!
- Lifestyle
Horoscope Today 1 Feb 2023: ಬುಧವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- News
ಇಂದಿರಾ, ರಾಜೀವ್ ಗಾಂಧಿ ಹತ್ಯೆ ಆಕಸ್ಮಿಕ: ಉತ್ತರಖಂಡ ಸಚಿವ ವಿವಾದ
- Automobiles
ಭಾರತದಲ್ಲಿ ಹ್ಯುಂಡೈ i20 ಕಾರುಗಳ ಬೆಲೆ ಏರಿಕೆ
- Sports
ಕೌಂಟಿ ಚಾಂಪಿಯನ್ಶಿಪ್: ಲೂಸಿಸ್ಟರ್ಶೈರ್ ಪರ ಆಡಲಿದ್ದಾರೆ ಅಜಿಂಕ್ಯಾ ರಹಾನೆ
- Finance
Jio 5G services: ಇಂದಿನಿಂದ ಮತ್ತೆ 34 ನಗರಗಳಲ್ಲಿ ಪ್ರಾರಂಭ- ಮಧ್ಯ ಕರ್ನಾಟಕದ ಯಾವ ನಗರಕ್ಕೆ ಕೊಡುಗೆ? ಮಾಹಿತಿ ಪಡೆಯಿರಿ
- Technology
ಆಂಡ್ರಾಯ್ಡ್ ಬಳಕೆದಾರರಿಗಾಗಿ 'ಕಿಡ್ಸ್ ಮಿಸ್ಟರಿ ಬಾಕ್ಸ್' ಫೀಚರ್ಸ್ ಪರಿಚಯಿಸಿದ ನೆಟ್ಫ್ಲಿಕ್ಸ್!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಶ್ರುತಿ ಹರಿಹರನ್ ಮೀಟೂ ಪ್ರಕರಣಕ್ಕಿಲ್ಲ ಸಾಕ್ಷಿ: ಅರ್ಜುನ್ ಸರ್ಜಾಗೆ ಬಿಗ್ ರಿಲೀಫ್?
ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿ ಎಬ್ಬಿಸಿದ್ದ ಮೀಟೂ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಈ ಕೇಸ್‌ನಲ್ಲಿ ನಟಿ ಶ್ರುತಿ ಹರಿಹರನ್ ಅವರಿಗೆ ಹಿನ್ನಡೆ ಆಗಲಿದೆ ಎನ್ನಲಾಗಿದೆ. ಕೇಸ್ ದಾಖಲಾಗಿ ಮೂರು ವರ್ಷ ಕಳೆದರೂ ನಟ ಅರ್ಜುನ್ ಸರ್ಜಾ ವಿರುದ್ಧ ಸೂಕ್ತ ಸಾಕ್ಷಿ ಸಿಕ್ಕಿಲ್ಲ. ಆ ಕಾರಣದಿಂದ ಕಬ್ಬನ್ ಪಾರ್ಕ್ ಪೊಲೀಸರು, ಬಿ ರಿಪೋರ್ಟ್ ಸಿದ್ಧಪಡಿಸಲು ನಿರ್ಧರಿಸಿದ್ದಾರೆ. ಈ ಸಂಬಂಧ ಶ್ರುತಿ ಹರಿಹರನ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
'ವಿಸ್ಮಯ' ಸಿನಿಮಾ ಚಿತ್ರೀಕರಣ ವೇಳೆ ಅರ್ಜುನ್ ಸರ್ಜಾ ಅವರಿಂದ ತಮಗೆ ಲೈಂಗಿಕ ಕಿರುಕುಳ ಆಗಿತ್ತು ಎಂದು ಶ್ರುತಿ ಹರಿಹರನ್ ಆರೋಪಿಸಿದ್ದರು. ಆದರೆ ಸೂಕ್ತ ಸಾಕ್ಷಿ ಸಿಗದ ಕಾರಣ ಅರ್ಜುನ್ ಸರ್ಜಾ ಅವರಿಗೆ ಈ ಕೇಸ್ನಿಂದ ಬಿಗ್ ರಿಲೀಫ್ ಸಿಗುವ ಸಾಧ್ಯತೆ ದಟ್ಟವಾಗಿದೆ.

ಮೀಟೂ ಪ್ರಕರಣಕ್ಕೆ ಹೊಸ ತಿರುವು!
ಅರುಣ್ ವೈದ್ಯನಾಥನ್ ನಿರ್ದೇಶನದ 'ವಿಸ್ಮಯ' ಸಿನಿಮಾದಲ್ಲಿ ಶ್ರುತಿ ಹರಿಹರನ್ ಮತ್ತು ಅರ್ಜುನ್ ಸರ್ಜಾ ಅವರು ಗಂಡ-ಹೆಂಡತಿ ಪಾತ್ರದಲ್ಲಿ ನಟಿಸಿದ್ದರು. ಚಿತ್ರೀಕರಣದ ವೇಳೆ ಅರ್ಜುನ್ ಸರ್ಜಾ ಅವರು ತಮ್ಮ ಮೇಲೆ ಲೈಂಗಿಕ ಕಿರುಕುಳ ಎಸಗಿದ್ದಾರೆ ಎಂದು ಶ್ರುತಿ ಹರಿಹರನ್ ಆರೋಪ ಹೊರಿಸಿದ್ದರು. ಬಳಿಕ ಸ್ಯಾಂಡಲ್ವುಡ್ನಲ್ಲಿ ವಿವಾದದ ದೊಡ್ಡ ಬಿರುಗಾಳಿ ಎಬ್ಬಿಸಿತ್ತು. ಹಲವು ದಿನ ಈ ವಿಚಾರ ಬೆಂಕಿಯಂತೆ ಹೊತ್ತಿ ಉರಿದಿತ್ತು. ಕೆಲವರು ಶ್ರುತಿ ಪರವಾಗಿ ಮಾತನಾಡಿದ್ದರೆ, ಇನ್ನು ಕೆಲವರು ಅರ್ಜುನ್ ಸರ್ಜಾಗೆ ಬೆಂಬಲ ನೀಡಿದ್ದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಈ ಬಗ್ಗೆ ಸಭೆಯನ್ನೂ ನಡೆಸಲಾಗಿತ್ತು.

ಅಂಬರೀಷ್ ನೇತೃತ್ವದಲ್ಲಿ ಸಭೆ
2018ರಲ್ಲಿ ಈ ವಿವಾದ ಬಗೆಹರಿಸಲು 'ರೆಬೆಲ್ ಸ್ಟಾರ್' ಅಂಬರೀಷ್ ನೇತೃತ್ವದಲ್ಲಿ ಸಭೆ ಕರೆಯಲಾಗಿತ್ತು. ಆದರೆ ಈ ಸಭೆಯಿಂದ ಯಾವುದೇ ಪ್ರಯೋಜನ ಆಗಿರಲಿಲ್ಲ. ಕಾನೂನಿನ ಮೂಲಕವೇ ನ್ಯಾಯ ಪಡೆಯುವುದಾಗಿ ಶೃತಿ ಹರಿಹರನ್ ಹೇಳಿದ್ದರು. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಅರ್ಜುನ್ ಸರ್ಜಾ ವಿರುದ್ಧ ದೂರು ದಾಖಲಿಸಿದ್ದರು. ಮಹಿಳೆಯ ಗೌರವಕ್ಕೆ ಧಕ್ಕೆ, ಲೈಂಗಿಕ ಕಿರುಕುಳ ಹಾಗೂ ಜೀವ ಬೆದರಿಕೆ ಆರೋಪದಡಿ ಕೇಸ್ ದಾಖಲಾಗಿತ್ತು.

3 ವರ್ಷ ಕಳೆದರೂ ಸಿಕ್ಕಿಲ್ಲ ಸಾಕ್ಷಿ!
ಸಾಕ್ಷಿಗಾಗಿ ಯುಬಿ ಸಿಟಿ ಸೇರಿದಂತೆ ಕೆಲವು ಜಾಗದಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದರು. ಮೂರು ವರ್ಷ ಕಳೆದರೂ ಶ್ರುತಿ ಹರಿಹರನ್ ಮಾಡಿದ್ದ ಆರೋಪಕ್ಕೆ ಸೂಕ್ತ ಸಾಕ್ಷಿ ಸಿಕ್ಕಿಲ್ಲ. ಹಾಗಾಗಿ ಬಿ ರಿಪೋರ್ಟ್ ನೀಡಲು ಪೊಲೀಸರು ಸಿದ್ಧರಾಗಿದ್ದಾರೆ ಎಂಬ ವಿಚಾರ ಕೇಳಿಬಂದಿದೆ.

ಮೀಟೂ ಕೇಸ್‌ನಲ್ಲಿ ಅರ್ಜುನ್ ಸರ್ಜಾಗೆ ಬಿಗ್ ರಿಲೀಫ್?
ಇದೇ ಕಾರಣಕ್ಕೆ ಮೀಟೂ ಕೇಸ್‌ನಲ್ಲಿ ಅರ್ಜುನ್ ಸರ್ಜಾಗೆ ರಿಲೀಫ್ ಸಿಗಲಿದೆ ಎನ್ನಲಾಗುತ್ತಿದೆ. ಯಾಕೆಂದರೆ ಶ್ರುತಿ ಹರಿಹರನ್ ಮಾಡಿದ್ದ ಆರೋಪಕ್ಕೆ ಸಾಕ್ಷಿಯೇ ಸಿಕ್ಕಿಲ್ಲವಂತೆ. ಮೂರು ವರ್ಷ ಕಳೆದರೂ ಈ ಕೇಸ್‌ನಲ್ಲಿ ಸೂಕ್ತ ಸಾಕ್ಷಿ ಸಿಕ್ಕಿಲ್ಲ ಎನ್ನಲಾಗಿದೆ. ಹಾಗಾಗಿ ಈ ಕೇಸ್ ಬೇರೆ ರೂಪ ಪಡೆಯಲಿದೆ.