»   » ತಮಿಳುನಾಡಿನಲ್ಲಿ ಕನ್ನಡ ಚಿತ್ರಗಳ ಪ್ರದರ್ಶನಕ್ಕೆ ಅಡ್ಡಿಯಾಗಿಲ್ಲ: ಸಾ.ರಾ.ಗೋವಿಂದು

ತಮಿಳುನಾಡಿನಲ್ಲಿ ಕನ್ನಡ ಚಿತ್ರಗಳ ಪ್ರದರ್ಶನಕ್ಕೆ ಅಡ್ಡಿಯಾಗಿಲ್ಲ: ಸಾ.ರಾ.ಗೋವಿಂದು

Posted By:
Subscribe to Filmibeat Kannada

ತಮಿಳು ನಟ ಸತ್ಯರಾಜ್ ಕನ್ನಡಿಗರಿಗೆ ವಿಷಾದ ವ್ಯಕ್ತಪಡಿಸಿದ ನಂತರ ತಮಿಳುನಾಡಿನಲ್ಲಿ ಕನ್ನಡ ಚಿತ್ರಗಳ ಪ್ರದರ್ಶನ ರದ್ದುಗೊಳಿಸಲಾಗಿದೆ ಎಂದು ವರದಿಯಾಗಿತ್ತು. ಆದರೆ ಇದು ವದಂತಿ ಎಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಸಾ.ರಾ.ಗೋವಿಂದು ರವರು ಸ್ಪಷ್ಟ ಪಡಿಸಿದ್ದಾರೆ.[ಮುಂದುವರೆದ 'ಕಟ್ಟಪ್ಪ'ನ ವಿವಾದ: ತಮಿಳುನಾಡಿನಲ್ಲಿ ಕನ್ನಡ ಚಿತ್ರಗಳು ಬ್ಯಾನ್!]

'ಬಾಹುಬಲಿ 2' ಚಿತ್ರ ಬಿಡುಗಡೆಗೆ ಗ್ರೀನ್ ಸಿಗ್ನಲ್ ನೀಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಾ.ರಾ.ಗೋವಿಂದ್ ರವರು, "ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿಯ ಎಲ್ಲಾ ಪದಾಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಕನ್ನಡ ಚಿತ್ರಗಳ ಪ್ರದರ್ಶನಕ್ಕೆ ಅಡ್ಡಿ ಆಗಿಲ್ಲ. ಯಾವುದೇ ಕಾರಣಕ್ಕೂ ಕನ್ನಡ ಚಿತ್ರಗಳ ಪ್ರದರ್ಶನ ನಿಲ್ಲಿಸುವುದಿಲ್ಲ. ಅಲ್ಲದೇ ಪ್ರದರ್ಶನ ತಡೆಗೆ ಅವಕಾಶ ಮಾಡಿಕೊಡುವುದಿಲ್ಲ ಎಂದಿದ್ದಾರೆ" ಎಂದು ತಿಳಿಸಿದ್ದಾರೆ.

No Problems for Kannada Films Screening in Tamilnadu

"ಒಂದು ವೇಳೆ ಕನ್ನಡ ಚಿತ್ರಗಳ ಪ್ರದರ್ಶನಕ್ಕೆ ಅಡ್ಡಿ ಉಂಟಾದಲ್ಲಿ ಅದರ ಸಂಪೂರ್ಣ ಹೊಣೆಯನ್ನು ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ನಾವು ಹೊರುತ್ತೇವೆ ಎಂದಿದ್ದಾರೆ. ಆದ್ದರಿಂದ ದಯಮಾಡಿ ಯಾವುದೇ ಉಹಾಪೋಹಗಳಿಗೆ ಅವಕಾಶ ಮಾಡಿಕೊಡಬೇಡಿ. ಕನ್ನಡ ಚಿತ್ರಗಳು ತಮಿಳುನಾಡಿನಲ್ಲಿ ಪ್ರದರ್ಶನ ಕಾಣುತ್ತಿವೆ. ಒಂದು ವೇಳೆ ಚಿತ್ರ ಪ್ರದರ್ಶನಕ್ಕೆ ಅಡ್ಡಿ ಮಾಡಿದ್ದೇ ಆದಲ್ಲಿ ಕರ್ನಾಟಕದಲ್ಲಿ ತಮಿಳು ಚಿತ್ರಗಳನ್ನ ನಿಲ್ಲಿಸಬೇಕಾಗುತ್ತದೆ ಎಂದು ನೇರವಾಗಿ ಹೇಳಿದ್ದೇನೆ. ಹಾಗಾಗಿ ಸತ್ಯವನ್ನು ತಿಳಿದುಕೊಂಡು ಮುಂದಿನ ಹೆಜ್ಜೆ ಇಡುತ್ತೇವೆ" ಎಂದು ಸಾ.ರಾ.ಗೋವಿಂದು ರವರು ಮಾಧ್ಯಮಗಳಿಕೆ ಹೇಳಿಕೆ ನೀಡಿದ್ದಾರೆ.

English summary
KFCC Precident Sa.Ra.Govind clarified no problems for Kannada Films Screening in Tamilnadu

Kannada Photos

Go to : More Photos

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada

X