For Quick Alerts
  ALLOW NOTIFICATIONS  
  For Daily Alerts

  ನಟಿ ಜಯಪ್ರದಾ ವಿರುದ್ಧ ಜಾಮೀನು ರಹಿತ ವಾರೆಂಟ್, ಬಂಧನ ಸಾಧ್ಯತೆ

  |

  ಖ್ಯಾತ ನಟಿ ಜಯಪ್ರದಾ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದ್ದು, ಅವರನ್ನು ಪೊಲೀಸರು ಬಂಧಿಸುವ ಸಾಧ್ಯತೆ ಇದೆ.

  ರಾಜಕಾರಣಿಯೂ ಆಗಿರುವ ಜಯಪ್ರದಾ ಅವರು ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ಕಳೆದ ವರ್ಷ ಉತ್ತರ ಪ್ರದೇಶದ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ಈಗ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ.

  ಕಳೆದ ವರ್ಷ ನಡೆದ ಲೋಕಸಭೆ ಚುನಾವಣೆಯಲ್ಲಿ ಜಯಪ್ರದಾ ಅವರು ಉತ್ತರ ಪ್ರದೇಶದ ರಾಮಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಚುನಾವಣೆ ಪ್ರಚಾರದ ವೇಳೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ಆಗ ದೂರು ದಾಖಲಾಗಿತ್ತು.

  ಪ್ರಕರಣದ ವಿಚಾರಣೆಗೆ ಗೈರಾಗಿದ್ದ ಜಯಪ್ರದಾ

  ಪ್ರಕರಣದ ವಿಚಾರಣೆಗೆ ಗೈರಾಗಿದ್ದ ಜಯಪ್ರದಾ

  ಪ್ರಕರಣದ ವಿಚಾರಣೆಗೆ ಜಯಪ್ರದಾ ಪದೇ ಪದೇ ಗೈರಾಗುತ್ತಿರುವ ಕಾರಣ ಇದೀಗ ಸ್ಥಳೀಯ ನ್ಯಾಯಾಲಯವು ಜಯಪ್ರದಾ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಿದ್ದರು, ಜಯಪ್ರದಾ ಅವರನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಕರೆತರುವ ಸಾಧ್ಯತೆ ಇದೆ.

  ನ್ಯಾಯಾಲಯಕ್ಕೆ ಮನವಿ ಮಾಡಿಕೊಳ್ಳುವ ಸಾಧ್ಯತೆ

  ನ್ಯಾಯಾಲಯಕ್ಕೆ ಮನವಿ ಮಾಡಿಕೊಳ್ಳುವ ಸಾಧ್ಯತೆ

  ಹಾಗಿಲ್ಲದಿದ್ದರೆ ಜಯಪ್ರದಾ ಅವರು ನ್ಯಾಯಾಲಯಕ್ಕೆ ವಕೀಲರ ಮೂಲಕ ಪತ್ರ ಬರೆದು ಪೊಲೀಸರಿಂದ ಬಂಧನಕ್ಕೆ ಒಳಗಾಗುವುದನ್ನು ತಪ್ಪಿಸಿಕೊಳ್ಳುವದಕ್ಕೆ ಅವಕಾಶವೂ ಇದೆ.

  ಲೋಕಸಭೆ ಚುನಾವಣೆ ಸ್ಪರ್ಧಿಸಿದ್ದ ಜಯಪ್ರದಾ

  ಲೋಕಸಭೆ ಚುನಾವಣೆ ಸ್ಪರ್ಧಿಸಿದ್ದ ಜಯಪ್ರದಾ

  ಕಳೆದ ಲೋಕಸಭೆ ಚುನಾವಣೆಯಲ್ಲಿ ರಾಮಪುರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜಯಪ್ರದಾ ಅವರು ಸಮಾಜವಾದಿ ಪಕ್ಷದ ಆಜಮ್ ಖಾನ್ ವಿರುದ್ಧ ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲುಂಡಿದ್ದರು.

  ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿದ್ದ ಜಯಪ್ರಧಾ

  ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿದ್ದ ಜಯಪ್ರಧಾ

  ಪಂಚಭಾಷಾ ತಾರೆ ಆಗಿರುವ ಜಯಪ್ರದಾ ಕನ್ನಡದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸನಾದಿ ಅಪ್ಪಣ್ಣ, ಜಯಪ್ರದಾ ನಟಿಸಿದ ಮೊದಲ ಕನ್ನಡ ಸಿನಿಮಾ.

  English summary
  Non bailable warrant against actress turned politician Jayaprada in case of violating election model code of conduct.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X