ಇಂದು(ಜು.18) 'ಒಂದು ಮೊಟ್ಟೆಯ ಕಥೆ' ಪ್ರದರ್ಶನ, ಸಂವಾದ ಕಾರ್ಯಕ್ರಮ
ಕರ್ನಾಟಕ ಚಲನಚಿತ್ರ ಅಕಾಡೆಮಿಯ ವತಿಯಿಂದ ಇಂದು (ಜುಲೈ 18) ಸಂಜೆ 4 ಗಂಟೆಗೆ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ 'ಒಂದು ಮೊಟ್ಟೆಯ ಕಥೆ" ಚಿತ್ರ ಪ್ರದರ್ಶನ ಹಾಗೂ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಚಿತ್ರದ ನಟ ಹಾಗೂ ನಿರ್ದೇಶಕ ರಾಜ್ ಬಿ. ಶೆಟ್ಟಿ, ನಿರ್ಮಾಪಕ ಪವನ್ ಕುಮಾರ್, ಸಾಹಿತಿ ಹಾಗೂ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ಎನ್.ಆರ್.ವಿಶುಕುಮಾರ್, ಪತ್ರಕರ್ತರಾದ ಜೋಗಿ, ಬಿ.ಗಣಪತಿ, ಸದಾಶಿವ ಶೆಣೈ ಹಾಗೂ 'ಒಂದು ಮೊಟ್ಟೆಯ ಕಥೆ' ಚಿತ್ರತಂಡದವರು ಪಾಲ್ಗೊಳಲಿದ್ದಾರೆ. ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಎಸ್.ವಿ.ರಾಜೇಂದ್ರಸಿಂಗ್ ಬಾಬು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

'ಒಂದು ಮೊಟ್ಟೆಯ ಕಥೆ' ಚಿತ್ರ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ಮತ್ತು ಚಿತ್ರ ವೀಕ್ಷಣೆಗೆ ಆಹ್ವಾನ ಪತ್ರಿಕೆ ಕಡ್ಡಾಯವಾಗಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.
More from Filmibeat
English summary
Raj B Shetty directorial 'Ondu Motteya Kathe' movie Screening and interaction program has conducted by 'Karnataka Chalanachitra Academy' today(July 18) at 'Chamundeshwari Studio'.


Click it and Unblock the Notifications











