Breaking: ಜೂನ್ 21ರಿಂದ ಹೊರಾಂಗಣ ಚಿತ್ರೀಕರಣಕ್ಕೆ ಅನುಮತಿ
ಅನ್‌ಲಾಕ್ ಹಿನ್ನೆಲೆ ರಾಜ್ಯದಲ್ಲಿ ಹೊರಾಂಗಣ ಚಿತ್ರೀಕರಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಸೋಮವಾರದಿಂದ ರಾಜ್ಯದಲ್ಲಿ ಸಿನಿಮಾ, ಧಾರಾವಾಹಿ ಹಾಗೂ ಟಿವಿ ಕಾರ್ಯಕ್ರಮಗಳ ಚಿತ್ರೀಕರಣ ಮಾಡಬಹುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
Recommended Video
ಜೂನ್ 21 ರಿಂದ ಹೊರಾಂಗಣದಲ್ಲಿ ಶೂಟಿಂಗ್ ಮಾಡಬಹುದು, ಸೂಕ್ತ ಮುಂಜಾಗ್ರತೆ ಕ್ರಮ ಜರುಗಿಸಿಕೊಳ್ಳಬೇಕು ಎಂದು ಸಿಎಂ ಸೂಚನೆ ಕೊಟ್ಟಿದ್ದಾರೆ.

ಆದರೆ, ಚಿತ್ರಮಂದಿರಗಳ ಮೇಲಿನ ನಿರ್ಬಂಧ ಮುಂದುವರಿದೆ. ಥಿಯೇಟರ್ ತೆರೆಯಲು ಸರ್ಕಾರ ಅವಕಾಶ ಕೊಟ್ಟಿಲ್ಲ. ಜೂನ್ 21 ರಿಂದ ಜುಲೈ 5ರವರೆಗೂ ಈ ಆದೇಶ ಜಾರಿಯಲ್ಲಿದ್ದು, ಪರಿಸ್ಥಿತಿ ಅವಲೋಕಿಸಿ ಮುಂದಿನ ಬದಲಾವಣೆ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಅನ್‌ಲಾಕ್ 2.0; ಜೂನ್ 21ರಿಂದ ಏನಿರುತ್ತೆ? ಏನಿರಲ್ಲ?
ಲಾಕ್‌ಡೌನ್ ಜಾರಿಯಾದ ದಿನದಿಂದ ರಾಜ್ಯದಲ್ಲಿ ಶೂಟಿಂಗ್ ರದ್ದುಗೊಂಡಿತ್ತು. ಕನ್ನಡದ ಧಾರಾವಾಹಿ ತಂಡಗಳು ಹೈದರಾಬಾದ್‌ಗೆ ತೆರಳಿ ಚಿತ್ರೀಕರಣ ಮಾಡುತ್ತಿವೆ. ಈ ಕಡೆ ರಿಯಾಲಿಟಿ ಶೋಗಳು ಶೂಟಿಂಗ್ ಸಹ ಸವಾಲಾಗಿತ್ತು. ಸರ್ಕಾರದ ಈ ಆದೇಶದಿಂದ ಸಿನಿಮಾ ಹಾಗೂ ಟಿವಿ ಇಂಡಸ್ಟ್ರಿ ನಿಟ್ಟುಸಿರು ಬಿಟ್ಟಿದೆ.
ಇನ್ನುಳಿದಂತೆ ವೀಕೆಂಡ್ ಲಾಕ್‌ಡೌನ್, ನೈಟ್‌ಕರ್ಫ್ಯೂ ಯಥಾಸ್ಥಿತಿ ಮುಂದುವರಿಯಲಿದೆ. ಈ ಹಿನ್ನೆಲೆ ನಿರ್ದಿಷ್ಟ ಸಮಯದಲ್ಲಿ ಮಾತ್ರ ಚಿತ್ರೀಕರಣ ಮಾಡಬೇಕಾಗಿದೆ.


Click it and Unblock the Notifications











