Just In
Don't Miss!
- Sports
ಆರ್ಸಿಬಿ ಪರ ನಿರ್ಣಾಯಕ ಪಾತ್ರವಹಿಸಲು ಕಾರಣವಾದ ಅಂಶವನ್ನು ವಿವರಿಸಿದ ಗ್ಲೆನ್ ಮ್ಯಾಕ್ಸ್ವೆಲ್
- News
ಬೆಂಗಳೂರಲ್ಲಿ ರೆಮಿಡಿಸ್ವಿರ್ ಔಷಧಿ ಪೂರೈಕೆಗೆ SAST ಏಜೆನ್ಸಿ ನಿಯೋಜನೆ
- Lifestyle
ಗುರುವಾರದ ದಿನ ಭವಿಷ್ಯ: ಈ ದಿನ ಹೇಗಿದೆ ನಿಮ್ಮ ರಾಶಿಫಲ
- Automobiles
ಕೊನೆಯ ಆಸೆಯೆಂತೆ ರಾಜಕುಮಾರ ಪ್ರಿನ್ಸ್ ಫಿಲಿಪ್ ಅಂತಿಮ ಯಾತ್ರೆಗೆ ಸಿದ್ದವಾಗಿದೆ ಮಾಡಿಫೈ ಲ್ಯಾಂಡ್ ರೋವರ್
- Finance
ಚಿನ್ನ, ಬೆಳ್ಳಿ ಸ್ವಲ್ಪ ಕುಸಿತ: ಏಪ್ರಿಲ್ 14ರಂದು ಎಲ್ಲೆಡೆ ಬೆಲೆ ಎಷ್ಟಿದೆ?
- Education
SSLC Exams 2021: ಸಿಬಿಎಸ್ಇ ಪರೀಕ್ಷೆ ರದ್ದು ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಊಹಾಪೋಹ: ಸುರೇಶ್ ಕುಮಾರ್ ಸ್ಪಷ್ಟನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮೃತಪಟ್ಟ ಮಗನ ಫೋಟೋ ಇಟ್ಟುಕೊಂಡು 'ಯುವರತ್ನ' ಸಿನಿಮಾ ವೀಕ್ಷಿಸಿದ ಪೋಷಕರು
ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿರುವ ಪುನೀತ್ ರಾಜ್ ಕುಮಾರ್ ಅಭಿನಯದ ಯುವರತ್ನ ಸಿನಿಮಾ ಕಂಡು ಅಪ್ಪು ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. ತಮ್ಮ ನೆಚ್ಚಿನ ನಟನ ಚಿತ್ರ ನೋಡಲು ಎಲ್ಲಾ ವರ್ಗದ ಜನರು ಚಿತ್ರಮಂದಿರಕ್ಕೆ ಲಗ್ಗೆಯಿಡುತ್ತಿದ್ದಾರೆ.
ಈ ನಡುವೆ, ಮೃತಪಟ್ಟ ಮಗನ ಫೊಟೋ ಇಟ್ಟುಕೊಂಡು ಪೋಷಕರು 'ಯುವರತ್ನ' ಸಿನಿಮಾ ನೋಡಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಡಿ ಆರ್ ಸಿ ಮಲ್ಟಿಫ್ಲೆಕ್ಸ್‌ನಲ್ಲಿ ಪೋಷಕರು ಮೃತ ಮಗನ ಭಾವಚಿತ್ರದೊಂದಿಗೆ ಸಿನಿಮಾ ನೋಡಿದ ಭಾವುಕ ಘಟನೆ ನಡೆದಿದೆ. ಮೈಸೂರಿನ ನಿವಾಸಿ ಮುರಳಿಧರ್ ಎಂಬುವವರ ಪುತ್ರ ಹರಿಕೃಷ್ಣನ್ ಕಳೆದ ಮೂರು ತಿಂಗಳ ಹಿಂದಷ್ಟೇ ಈಜಲು ಹೋಗಿ ನೀರಲ್ಲಿ ಮುಳುಗಿ ಸಾವನಪ್ಪಿದ್ದ.
ನಿರ್ಬಂಧ ಸಡಿಲಿಸಿದ ಸರ್ಕಾರ: ಭಾವುಕರಾಗಿ ಧನ್ಯವಾದ ಹೇಳಿದ ಪುನೀತ್
ಪುಟ್ಟ ಹುಡುಗ ಹರಿಕೃಷ್ಣನ್, ಪುನೀತ್ ರಾಜ್ ಕುಮಾರ್ ಅಪ್ಪಟ ಅಭಿಮಾನಿ ಆಗಿದ್ದ. ಅಷ್ಟೇ ಅಲ್ಲದೆ, ಆತ ಯುವರತ್ನ ಸಿನಿಮಾ ನೋಡಬೇಕೆಂದು ಆಸೆ ಪಟ್ಟಿದ್ದ. ಈ ಕಾರಣದಿಂದ, ಮಗನ ಆಸೆಯಂತೆ ಪೋಷಕರು ಆತನ ಫೋಟೋದೊಂದಿಗೆ 'ಯುವರತ್ನ' ವೀಕ್ಷಣೆ ಮಾಡಿದ್ದಾರೆ. ಜತೆಗೆ ತಮ್ಮಿಂದ ದೂರವಾಗಿರೋ ಮಗನಿಗೂ ಒಂದು ಟಿಕೆಟ್ ತೆಗೆದುಕೊಂಡು, ಅಪ್ಪ-ಅಮ್ಮ, ಹಿರಿಯ ಮಗನ ಜೊತೆ ಸಿನಿಮಾ ವೀಕ್ಷಣೆ ಮಾಡಿದ್ದಾರೆ.
ಎಲ್ಲಾ ವರ್ಗದ ಪ್ರೇಕ್ಷಕರ ನೆಚ್ಚನ ನಟ ಪವರ್ ಸ್ಟಾರ್. ಅದರಲ್ಲೂ ಫ್ಯಾಮಿಲಿ ಆಡಿಯನ್ಸ್‌ಗೆ ಪುನೀತ್ ಮತ್ತಷ್ಟು ಹತ್ತಿರ. ಯುವರತ್ನ ಚಿತ್ರವನ್ನು ಇಡೀ ಕುಟುಂಬದೊಂದಿಗೆ ಬಂದು ವೀಕ್ಷಣೆ ಮಾಡಿ ಸಂತಸಪಡುತ್ತಿದ್ದಾರೆ. ಸಂತೋಷ್ ಆನಂದ್ ರಾಮ್ ಸಾರಥ್ಯದಲ್ಲಿ ಬಂದ ಯುವರತ್ನ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.