ಪಾರ್ವತಮ್ಮ ರಾಜ್ ಕುಮಾರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ಪತ್ನಿ, ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ರವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನಲೆಯಲ್ಲಿ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಡಯಾಬಿಟೀಸ್ ನಿಂದ ಬಳಲುತ್ತಿರುವ ಪಾರ್ವತಮ್ಮ ರಾಜ್ ಕುಮಾರ್ ರವರಿಗೆ ರಕ್ತದಲ್ಲಿ ಸಕ್ಕರೆ ಅಂಶ ಹೆಚ್ಚಾಗಿ, ರಕ್ತದೊತ್ತಡ ಕಡಿಮೆ ಆದ ಕಾರಣ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಮನೆಯಲ್ಲಿ ತಲೆಸುತ್ತು ಕಾಣಿಸಿಕೊಂಡಿದೆ. ತಕ್ಷಣ ಅವರನ್ನ ಪುತ್ರ ರಾಘವೇಂದ್ರ ರಾಜ್ ಕುಮಾರ್ ಹಾಗೂ ಮೊಮ್ಮಗ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈಗಾಗಲೇ ಪಾರ್ವತಮ್ಮ ರಾಜ್ ಕುಮಾರ್ ರವರಿಗೆ ರಕ್ತ ಪರೀಕ್ಷೆ ಮಾಡಲಾಗಿದೆ. ಗಾಬರಿ ಪಡುವಂಥದ್ದು ಏನೂ ಇಲ್ಲ. ಇನ್ನೆರಡು ದಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಿ, ನಂತರ ಡಿಸ್ಚಾರ್ಜ್ ಮಾಡುವುದಾಗಿ ವೈದ್ಯರು ತಿಳಿಸಿದ್ದಾರೆ ಎಂಬುದು ಮೂಲಗಳ ಮಾಹಿತಿ
English summary
Producer Parvathamma Rajkumar hospitalized


Click it and Unblock the Notifications