ಆರಿದ 'ದೊಡ್ಮನೆ' ದೀಪ: ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಇನ್ನಿಲ್ಲ
ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (78)ಅವರು ಬುಧವಾರ ಬೆಳಗ್ಗೆ 4.40 ರ ಸುಮಾರಿಗೆ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಪಾರ್ವತಮ್ಮ ರಾಜ್ ಕುಮಾರ್ ಕಳೆದ ಎರಡು ವಾರಗಳಿಂದ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತೀವ್ರ ನಿಗಾ ಘಟಕದಲ್ಲಿದ್ದ ಪಾರ್ವತಮ್ಮ ರಾಜ್ ಕುಮಾರ್ ಅವರಿಗೆ ಡಯಾಲಿಸಿಸ್ ಮಾಡಲಾಗುತ್ತಿತ್ತು. ವೆಂಟಿಲೇಟರ್ ಕೂಡ ಅಳವಡಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಪಾರ್ವತಮ್ಮ ರಾಜ್ ಕುಮಾರ್ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.
ಬ್ರೆಸ್ಟ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಪಾರ್ವತಮ್ಮ ರಾಜ್ ಕುಮಾರ್ ಇಂದು (ಮೇ 31) ಮುಂಜಾನೆ 4.40 ಸುಮಾರಿಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಪಾರ್ವತಮ್ಮ ರಾಜ್ ಕುಮಾರ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ಎಂ.ಎಸ್.ರಾಮಯ್ಯ ಆಸ್ಪತ್ರೆಯ ವೈದ್ಯರ ತಂಡ ಪ್ರಕಟಿಸಿದೆ.[ಪಾರ್ವತಮ್ಮ ರಾಜ್ ಕುಮಾರ್ ನಿಧನ: ಸದಾಶಿವನಗರದ ನಿವಾಸದಲ್ಲಿ ಅಂತಿಮ ದರ್ಶನ]


Click it and Unblock the Notifications











