»   » ಬೆಂಗಳೂರು ವಿವಿಯಿಂದ ಪಾರ್ವತಮ್ಮ ರಾಜ್ ಕುಮಾರ್ ಗೆ ಗೌರವ ಡಾಕ್ಟರೇಟ್

ಬೆಂಗಳೂರು ವಿವಿಯಿಂದ ಪಾರ್ವತಮ್ಮ ರಾಜ್ ಕುಮಾರ್ ಗೆ ಗೌರವ ಡಾಕ್ಟರೇಟ್

Posted By:
Subscribe to Filmibeat Kannada

ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕಿ, ವಜ್ರೇಶ್ವರಿ ಕಂಬೈನ್ಸ್ ಒಡತಿ, ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಪತ್ನಿ ಪಾರ್ವತಮ್ಮ ರಾಜ್ ಕುಮಾರ್ ಇನ್ಮುಂದೆ ಡಾ.ಪಾರ್ವತಮ್ಮ ರಾಜ್ ಕುಮಾರ್.

ಹೌದು, ಸಿನಿಮಾ ಕ್ಷೇತ್ರದಲ್ಲಿ ಮಾಡಿರುವ ಸಾಧನೆ, ಸಲ್ಲಿಸಿರುವ ಗಣನೀಯ ಸೇವೆಯನ್ನ ಗುರುತಿಸಿ ಬೆಂಗಳೂರು ವಿಶ್ವವಿದ್ಯಾಲಯ, ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿದೆ.

parvathamma rajkumar

ಬೆಂಗಳೂರು ವಿವಿಯ 50ನೇ ಘಟಿಕೋತ್ಸವ ನಡೆಯಲಿದ್ದು, ಮೂರು ಜನರಿಗೆ ಗೌರವ ಡಾಕ್ಟರೇಟ್ ನೀಡಲು ವಿವಿ ಆಡಳಿತ ಮಂಡಳಿ ನಿರ್ಧರಿಸಿದೆ. ಚಲನಚಿತ್ರ ಸೇವೆಗಾಗಿ ಪಾರ್ವತಮ್ಮ ರಾಜ್ ಕುಮಾರ್, ಧಾರವಾಡ ವಿವಿಯ ವಿಶ್ರಾಂತ ಕುಲಪತಿ ಬಿ.ಕೆ.ನಾರಾಯಣ ರೆಡ್ಡಿ ಮತ್ತು ಚಿನ್ನಸ್ವಾಮಿ ಅವರಿಗೆ ಗೌರವ ಡಾಕ್ಟರೇಟ್ ದೊರೆಯಲಿದೆ.

ಇದಕ್ಕೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಮೇ 30 ರಂದು ನಡೆಯಲಿರುವ ಘಟಿಕೋತ್ಸವದಂದು ಗೌರವ ಡಾಕ್ಟರೇಟ್ ಪ್ರಧಾನ ಮಾಡುವುದಾಗಿ ಬೆಂಗಳೂರು ವಿವಿ ಕುಲಪತಿ ತಿಮ್ಮೇಗೌಡ ತಿಳಿಸಿದ್ದಾರೆ. [ಸ್ಯಾಂಡಲ್ ವುಡ್ ಕಿಂಗ್ ಶಿವಣ್ಣ ಮುಡಿಗೆ ಡಾಕ್ಟರೇಟ್ ಗರಿ]

ಅಲ್ಲಿಗೆ ಡಾ.ರಾಜ್ ಕುಮಾರ್, ಡಾ.ಶಿವರಾಜ್ ಕುಮಾರ್ ಸಾಲಿನಲ್ಲಿ ಪಾರ್ವತಮ್ಮ ರಾಜ್ ಕುಮಾರ್ ಕೂಡ ಡಾಕ್ಟರೇಟ್ ಪಡೆದಿರುವುದು ರಾಜವಂಶದ ಹಿರಿಮೆಗೆ ಮತ್ತೊಂದು ಗರಿ ಲಭಿಸಿದ ಹಾಗೆ.

English summary
Film producer, Wife of Late Dr.Rajkumar, Parvathamma Rajkumar is selected for Honorary Doctorate from Bangalore University. Parvathamma Rajkumar will receive the Doctorate in 50th convocation of Bangalore University which will be held on May 30th.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada